ಚುನಾವಣಾ ಆಯೋಗ ನೀಡುವ 2024-25ನೇ ಸಾಲಿನ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿಯನ್ನು ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ ಬದೋಲೆ ಅವರಿಗೆ ಬೆಂಗಳೂರಿನಲ್ಲಿ ಶನಿವಾರ ಪ್ರದಾನ ಮಾಡಲಾಯಿತು.
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಡಾ.ಗಿರೀಶ ಬದೋಲೆ ಅವರು 2024-25ನೇ ಸಾಲಿನಲ್ಲಿ ನಡೆದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಅತ್ಯುತ್ತಮ ಚುನಾವಣಾ ಕೆಲಸಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.