ಬೀದರ್‌ | ಸಂವಿಧಾನ ಮೇಲೆ ಬೆಳಕು ಚೆಲ್ಲುವ ʼಭಾಗ್ಯವಿದಾತʼ ಕೃತಿ : ಧನರಾಜ ತುಡಮೆ

Date:

ದೇಶಕ್ಕೆ ರಾಜಪ್ರಭುತ್ವಕ್ಕಿಂತ ಪ್ರಜಾಪ್ರಭುತ್ವದ ಅವಶ್ಯಕತೆಯಿದೆ ಎಂದು ತಿಳಿದ ಡಾ.ಅಂಬೇಡ್ಕರ್ ಅವರು ಬಹುತ್ವ ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡಿದ್ದಾರೆ. ಸಂವಿಧಾನ ಎಂಬ ವಿಷಯ ಮೇಲೆಯೇ ʼಭಾಗ್ಯವಿದಾತʼ ಕೃತಿ ಬೆಳಕು ಚೆಲ್ಲುತ್ತದೆ ಎಂದು ಸಾಹಿತಿ ಡಾ.ಧನರಾಜ ತುಡಮೆ ಅಭಿಪ್ರಾಯಪಟ್ಟರು.

- Advertisement -

ಬೀದರ್ ನಗರದ ಮಹಾಲಕ್ಷ್ಮೀ ಸಾಂಸ್ಕೃತಿಕ ಭವನದಲ್ಲಿ ಸಾಹಿತ್ಯರತ್ನ ಅಣ್ಣಾಭಾವು ಸಾಠೆ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಲೋಕಮಂಚ್ ಟ್ರಸ್ಟ್ ವತಿಯಿಂದ ಗುರುವಾರ ಆಯೋಜಿಸಿದ ಭಾರತ ಸಂವಿಧಾನದ ಮಹತ್ವ ಸಾರುವ ʼಭಾಗ್ಯವಿಧಾತʼ ಕವನ ಸಂಕಲನ ಬಿಡುಗಡೆ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಪುಸ್ತಕ ಕುರಿತು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ಅವರು ವಿಶ್ವದ ಅಪಾರ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಸಂವಿಧಾನ ರಚನೆ ಸುಲಭದ ಮಾತಲ್ಲ. ಸೂಜಿಯ ಮೊನೆಯಷ್ಟೂ ಲೋಪವಿಲ್ಲದ ಸಂವಿಧಾನ ರಚಿಸಿ ಭಾರತ ದೇಶಕ್ಕೆ ಅರ್ಪಿಸಿದ್ದಾರೆ. ದೇಶದ ಸರ್ವಜನರ ಅಭ್ಯುದಯಕ್ಕಾಗಿ ರಚಿಸಲಾದ ಸಂವಿಧಾನ ಮೇಲೆ ಬೆಳಕು ಚೆಲ್ಲುವ 48‌ ಮೌಲಿಕ ಕವಿತೆಗಳ ಕೃತಿ ಓದುಗರನ್ನು ಆಕರ್ಷಿಸುತ್ತದೆʼ ಎಂದರು.

ಸಾಹಿತಿ ಕಾವ್ಯಶ್ರೀ ಮಹಾಗಾಂವಕರ್‌ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಮಹಿಳೆಯರ ನೋವು ಅರ್ಥೈಸಿಕೊಂಡ ಡಾ.ಬಿ.ಆರ್.ಅಂಬೇಡ್ಕರ್‌ ಅವರು ಮಹಿಳಾ ಸಮಾನತೆಗಾಗಿ ಅನೇಕ ಹಕ್ಕುಗಳನ್ನು ಒದಗಿಸಿಕೊಟ್ಟಿದ್ದಾರೆ. ಬಾಬಾ ಸಾಹೇಬರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ ಎನಿಸುತ್ತವೆ. ನಾವೆಲ್ಲರೂ ಸಂವಿಧಾನ ಮಾರ್ಗದಲ್ಲಿ ಮುನ್ನಡೆಯೋಣʼ ಎಂದರು.

DSC 0699
ಸಾಹಿತಿ ಕಾವ್ಯಶ್ರೀ ಮಹಾಗಾಂವಕರ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಅವರು ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿ, ʼಸಂವಿಧಾನ ಅರ್ಥೈಸಿಕೊಂಡವರು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಲು ಸಾಧ್ಯ. ಯಾವುದೇ ಒಂದು ಜಾತಿ-ಧರ್ಮದವರಿಗೆ ಮಾತ್ರ ಅಲ್ಲದೇ ದೇಶದ ಸರ್ವರಿಗೂ ಸಂವಿಧಾನ ನ್ಯಾಯದ ಹಕ್ಕು ನೀಡಿದ್ದಾರೆ. ಸಮಾಜದಲ್ಲಿ ಸಂವಿಧಾನ ಜಾಗೃತಿಗೆ ʼಭಾಗ್ಯವಿದಾತʼ ಪುಸ್ತಕ ಅತ್ಯಂತ ಮಹತ್ವದಾಗಿದೆʼ ಎಂದು ಶ್ಲಾಘಿಸಿದರು.

ಸಾಹಿತ್ಯರತ್ನ ಅಣ್ಣಾಭಾವು ಸಾಠೆ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಲೋಕಮಂಚ್ ಟ್ರಸ್ಟ್ ಅಧ್ಯಕ್ಷ ಎಂ.ಎಸ್.ಮನೋಹರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ʼವ್ಯಕ್ತಿಯ ಬದುಕಿನ ತುಡಿತ, ಭಾವನೆಗಳ ಹೊಯ್ದಾಟ, ವಾದ-ವಿವಾದಗಳ ಬಗೆಹರಿಯುವಿಕೆಗೆ ಸಂವಿಧಾನ ಬೇಕೇ ಬೇಕು. ವ್ಯಕ್ತಿ ಸಮಸ್ಯೆಗಳನ್ನು ಹಲವು ಸಮಸ್ಯೆಗಳಿಗೆ ಕಾನೂನಿನ ಮೂಲಕ ಪರಿಹಾರ ಕಂಡುಕೊಳ್ಳಬಹುದು. ಪ್ರತಿಯೊಬ್ಬರನ್ನು ಸಂವಿಧಾನ ಓದಿಸುವ ಕಾರ್ಯ ಹೆಚ್ಚೆಚ್ಚು ನಡೆಯಬೇಕಿದೆʼ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಸಂವಿಧಾನ ಪೀಠಿಕೆ ಪಠಣ ಮಾಡಲಾಯಿತು. ʼಭಾಗ್ಯವಿದಾತʼ ಕವನ ಸಂಕಲನಕ್ಕೆ ಕವಿತೆ ಬರೆದ ಕವಿಗಳನ್ನು ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಜಾತಿ ಜನಗಣತಿ ಲಕೋಟೆ ಓಪನ್‌, ಜಾರಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ

ಪ್ರಮುಖರಾದ ಡಾ.ದೇವಿದಾಸ ತುಮಕುಂಟೆ, ಡಾ.ರಜಿಯಾ ಬಳಬಟ್ಟಿ, ಮಾರುತಿ ಬೌದ್ಧೆ, ನಾಗಶೆಟ್ಟಿ ಪಾಟೀಲ ಗಾದಗಿ, ಸಂಜೀವಕುಮಾರ್‌ ಅತಿವಾಳೆ, ಸುಜಾತಾ ಹೊಸಮನಿ, ದಿಲೀಪ ಆರ್., ಎಸ್.ಬಿ.ಕುಚಬಾಳ, ಅಶ್ವಜಿತ ದಂಡಿನ್, ಡಾ.ಶ್ರೇಯಾ ಯಶಪಾಲ, ರಮೇಶ ಬಿರಾದಾರ, ಅಜಿತ್‌ ನೇಳಗಿ, ಮಾಣಿಕ ನೇಳಗಿ, ಮಹೇಶ ಗೋರನಾಳಕರ್, ರೂಪಾ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.‌ ಹಿರಿಯ ಕಲಾವಿದ ಶಂಭುಲಿಂಗ ವಾಲ್ದೊಡ್ಡಿ ಪ್ರಾರ್ಥಿಸಿದರು. ಟ್ರಸ್ಟ್ ಖಜಾಂಚಿ ಸುಭಾಷ ರತ್ನ ಸ್ವಾಗತಿಸಿದರು. ಟ್ರಸ್ಟ್ ಉಪಾಧ್ಯಕ್ಷ ಸುಮಂತ ಕಟ್ಟಿಮನಿ ನಿರೂಪಿಸಿದರು. ಕಾರ್ಯದರ್ಶಿ ಪ್ರವೀಣಚಂದ್ರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...