ಬೀದರ್‌ | ಬಸವ ಧರ್ಮಪೀಠ ಒಡೆಯಲು ಭಾಲ್ಕಿ ಶ್ರೀ ಮುಖ್ಯ ಕಾರಣ : ಚನ್ನಬಸವಾನಂದ ಸ್ವಾಮೀಜಿ

Date:

ಲಿಂಗಾನಂದ ಸ್ವಾಮೀಜಿ ಹುಟ್ಟು ಹಾಕಿರುವ ಬಸವ ಧರ್ಮಪೀಠವನ್ನು ಒಡೆಯಲು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಡಾ.ಬಸವಲಿಂಗ ಪಟ್ಟದ್ದೇವರು ಮುಖ್ಯ ಕಾರಣರು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧಕ್ಷ್ಯ ಚನ್ನಬಸವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಬೀದರ್‌ ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼರಂಭಾಪುರಿ ಶ್ರೀಗಳ ದಸರಾ ದರ್ಬಾರ ವಿರೋಧಿಸಲು ನಮಗೆ ಆಹ್ವಾನಿಸುವ ಭಾಲ್ಕಿ ಶ್ರೀಗಳು, ಬಸವ ಸಂಸ್ಕೃತಿ ಅಭಿಯಾನಕ್ಕೆ ನಮ್ಮನ್ನು ಕರೆಯುವುದಿಲ್ಲ. ಇವರ ದ್ವಂದ್ವ, ತುಷ್ಠೀಕರಣ ನೀತಿಗೆ ನಮ್ಮ ವಿರೋಧವಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕೂಡಲ ಸಂಗಮ ಬಸವ ಧರ್ಮಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಅವರನ್ನು ಪದೇ ಪದೇ ಭಾಲ್ಕಿ ಹಿರೇಮಠಕ್ಕೆ ಕರೆಸಿಕೊಂಡು ಹಿರಿಯ ಮತ್ತು ಕಿರಿಯ ಸ್ವಾಮೀಜಿಗಳು ಕಿವಿಯೂದುವ ಕೆಲಸ ಮಾಡುತ್ತಿದ್ದು, ಇದನ್ನು ಕೈಬಿಡಬೇಕು. ನೀವು ಹಿರಿಯರು ಎನ್ನುವ ಕಾರಣಕ್ಕೆ ನಿಮಗೆ ಗೌರವ ಕೊಡುತ್ತಿದ್ದೇವೆ. ಭಾಲ್ಕಿ ಶ್ರೀಗಳು ಬಸವ ಧರ್ಮಪೀಠ ಒಡೆಯುವ ಕೆಲಸ ಕೈಬಿಡದಿದ್ದರೆ ಭಾಲ್ಕಿ ಹಿರೇಮಠದ ಮುಂದೆ ಉಗ್ರ ಹೋರಾಟ ಮಾಡಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಅಕ್ಟೋಬರ್ 11, 12ರಂದು 4ನೇ ಸ್ವಾಭಿಮಾನಿ ಕಲ್ಯಾಣ ಪರ್ವ:

ಅಕ್ಟೋಬರ್ 11 ಹಾಗೂ 12 ರಂದು ಬಸವಕಲ್ಯಾಣದ ಹೊರವಲಯದಲ್ಲಿರುವ ಸಸ್ತಾಪುರ ಬಂಗ್ಲಾದಲ್ಲಿರುವ ಎಂ.ಎಂ.ಬೇಗ್ ಸಭಾಮಂಟಪದಲ್ಲಿ 4ನೇ ಸ್ವಾಭಿಮಾನಿ ಕಲ್ಯಾಣ ಪರ್ವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು.

ʼಕಳೆದ ಮೂರು ವರ್ಷಗಳಿಂದ ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ಆಚರಿಸಿಕೊಂಡು ಬರುತ್ತಿದ್ದು ಈ ವರ್ಷ ಸಹ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು ಸೇರಿದಂತೆ ನೆರೆಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ನಾನಾ ರಾಜ್ಯಗಳಿಂದ ಸುಮಾರು 255 ಸಾವಿರ ಬಸವ ಭಕ್ತರುಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆʼ ಎಂದು ಮಾಹಿತಿ ನೀಡಿದರು.

ʼಹೊರಗಿನಿಂದ ಬರುವ ಭಕ್ತರಿಗೆ ವಸತಿ ಹಾಗೂ ಪ್ರಸಾದ ವ್ಯವಸ್ಥೆ ಇರುತ್ತದೆ. ಆದ್ದರಿಂದ ಅರ್ಥಪೂರ್ಣ ಹಾಗೂ ಭಕ್ತಿಭಾವದಿಂದ ಕೂಡಿರುವ ನಾಲ್ಕನೇ ಸ್ವಾಭಿಮಾನಿ ಕಲ್ಯಾಣ ಪರ್ವದಲ್ಲಿ ಬಸವಾನುಯಾಯಿಗಳು, ಬಸವಭಕ್ತರು, ಬಸವ ನಿಷ್ಠರು, ಬಸವ ತತ್ವ ಪ್ರಚಾರಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಕಳೆ ಹೆಚ್ಚಿಸಬೇಕು ಎಂದು ಸ್ವಾಮೀಜಿ ಕರೆ ನೀಡಿದರು.

ಇದನ್ನೂ ಓದಿ : ಯಾದಗಿರಿ | ವಸತಿ ಶಾಲೆ ಶೌಚಾಲಯದಲ್ಲಿ 9ನೇ ತರಗತಿ ಬಾಲಕಿ ಹೆರಿಗೆ ಪ್ರಕರಣ : ನಾಲ್ವರು ಅಮಾನತು

ಬೀದರ್ ಬಸವ ಮಂಟಪದ ಮಾತೆ ಸತ್ಯಾದೇವಿ, ಲಿಂಗಾಯತ ಧರ್ಮ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ, ರಾಷ್ಟ್ರೀಯ ಬಸವ ದಳದ ಉಪಾಧ್ಯಕ್ಷ ಶಿವಶರಣಪ್ಪ ಪಾಟೀಲ ಹಾರೂರಗೇರಿ ಹಾಗೂ ಪ್ರಮುಖರಾದ ಬಸವಂತರಾವ ಬಿರಾದಾರ, ಮಲ್ಲಿಕಾರ್ಜುನ ಜೈಲರ್, ಗಿರಿಜಮ್ಮ ಧಾರವಾಡ ಸೇರಿದಂತೆ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...