ಬೀದರ್‌ | ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ : 10 ಅಡಿ ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

Date:

ಅತಿ ವೇಗವಾಗಿ ಬಂದ ಬೈಕ್‌ ಮತ್ತು ಟ್ರ್ಯಾಕ್ಟರ್‌ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

- Advertisement -

ಮಹಾರಾಷ್ಟ್ರದ ಲಾತೂರ ಜಿಲ್ಲೆಯ ಹನುಮಾನ ಜವಳಗಾ ಗ್ರಾಮದ ಯೋಗೇಶ ಬಾಲಾಜಿ ಗೆಟ್ಟೆ (28) ಮೃತ ಸೈನಿಕ. ಬೈಕ್ ಹಿಂಬದಿ ಕುಳಿತಿದ್ದ‌ ಆತನ ಸ್ನೇಹಿತೆ ಗಾಯತ್ರಿ ಎಂಬುವರು ಗಂಭೀರ ಗಾಯಗೊಂಡಿದ್ದು, ಅವರನ್ನು ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ನಂತರ ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೃತ ಯೋಗೇಶ ಸೈನಿಕರಾಗಿದ್ದು, ದ್ವಿಚಕ್ರದ ಮೇಲೆ ಬೀದರ್‌ಗೆ ಆಗಮಿಸಿ ವಾಪಸ್‌ ಊರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಖಾನಾಪುರ ಗ್ರಾಮದ ತಿರುವಿನಲ್ಲಿ ಟ್ರ್ಯಾಕ್ಟರ್‌ ವೇಗವಾಗಿ ಬಂದ ಬೈಕ್‌ ಡಿಕ್ಕಿ ಹೊಡಿದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು ಬೈಕ್ ಸವಾರ 10 ಅಡಿ ದೂರಕ್ಕೆ ಎಗರಿ ಬಿದ್ದಿದ್ದಾರೆ.

ಘಟನೆಯು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಧನ್ನೂರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಧನ್ನೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಆರ್‌ಎಸ್‌ಎಸ್ ಎರಡು ಬಾರಿ ಬ್ಯಾನ್‌ ಮಾಡಿದ್ರು : ಸಚಿವ ಸಂತೋಷ ಲಾಡ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...