ಬೀದರ್‌ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ : ಸವಾರರಿಬ್ಬರ ಸಾವು

Date:

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಹುಮನಾಬಾದ್ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಸಿಂಧನಕೇರಾ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

- Advertisement -

ತಾಲ್ಲೂಕಿನ ಸಿಂಧನಕೇರಾ ಗ್ರಾಮದ ನಿವಾಸಿಗಳಾದ ಸಂಜೀವಕುಮಾರ ಕಲ್ಲಪ್ಪ ಮೇತ್ರೆ (30) ಹಾಗೂ ಸುಧಾಕರ ಹಣಮಂತ ಹಾದಿಮನಿ (32) ಮೃತರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹುಮನಾಬಾದ್‌ನಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ರಾತ್ರಿ ಊರಿಗೆ ತೆರಳುವಾಗ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ ಸಂಜೀವಕುಮಾರ ಕಲ್ಲಪ್ಪ ಮೇತ್ರೆ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.‌

ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಹಿಂಬದಿ ಸವಾರ ಸುಧಾಕರ ಹಾದಿಮನಿ ಅವರನ್ನು ಕಲಬುರಗಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪಿಎಸ್ಐ ಬಸವಲಿಂಗಪ್ಪ ಗೋಡಿಹಾಳ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಪಟ್ಟಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...