ಬೀದರ್‌ | ಬಿಜೆಪಿಯವರು ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯುತ್ತಾರೆ : ಸಚಿವ ಈಶ್ವರ ಖಂಡ್ರೆ

Date:

ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು. ಅವರು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ, ಏನೂ ಹೇಸಲು ಹಿಂಜರಿಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.

- Advertisement -

ಸೋಮವಾರ ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 100 ಕೋಟಿ ರೂ. ಆಮಿಷ ಒಡ್ಡುತ್ತಿರುವ ವಿಚಾರಕ್ಕೆ ಮಾತನಾಡಿದ ಅವರು, ʼಅಧಿಕಾರದ ದಾಹಕ್ಕಾಗಿ ಏನೂ ಮಾಡಲು ಹಿಂಜರಿಯದವರು ಬಿಜೆಪಿಯವರು. ಯಾವ ಮಟ್ಟಕ್ಕೂ ಇಳಿಯಲು ತಯಾರಾಗಿರುತ್ತಾರೆ. ಈ ಹಿಂದೆ 17 ಜನ ಶಾಸಕರನ್ನು ಖರೀದಿಸಿದ್ದು ಎಲ್ಲರಿಗೂ ಗೊತ್ತಿದೆ. ಇದಕ್ಕಿಂತ ದೊಡ್ಡ ಪುರಾವೆ ಬೇಕಾ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ʼಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು 2,500 ಕೋಟಿ ರೂ. ಕೊಡಬೇಕು. ಮಂತ್ರಿಯಾಗಲು 500 ಕೋಟಿ ರೂ. ಕೊಡಬೇಕು ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದರು. ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ. ಯತ್ನಾಳ್‌ಗೆ ಏನಾದರೂ ಇಲ್ಲಿಯವರೆಗೆ ನೋಟಿಸ್ ಬಂದಿದೆಯಾ ಎಂದರು.

ʼವಕ್ಫ್ ವಿವಾದ ಹುಟ್ಟು ಹಾಕಿದ್ದೇ ಬಿಜೆಪಿಯವರು, ಜನರಿಗೆ ಮೊದಲು ನೋಟಿಸ್ ನೀಡಿದ್ದು ಅವರೇ. ಈಗ ಅವರೇ ಆರೋಪ ಮಾಡುತ್ತಾರೆ. ಕಾಂಗ್ರೆಸ್‌ನವರು ನೋಟಿಸ್‌ ಕೊಟ್ಟಿದ್ದಾರೆ ಎಂದು ತೀರ್ಪು ನೀಡುವವರು ಬಿಜೆಪಿಯವರೇ. ಇದನ್ನೂ ಜನ ಅರ್ಥ ಮಾಡಿಕೊಳ್ಳುತ್ತಾರೆ. ಬಿಜೆಪಿ ಪಕ್ಷದ ಮನೆಗೆ ನೂರು ಬಾಗಿಲುಗಳು ಆಗಿವೆ. ಪಶ್ಚಾತ್ತಾಪಕ್ಕೆ ಬಿಜೆಪಿಯವರು ಪಾದಯಾತ್ರೆ ಮಾಡುತ್ತಿದ್ದಾರೆʼ ಎಂದು ಟೀಕಿಸಿದರು.

ಬಡತನ ರೇಖೆಗಿಂತ ಕೆಳಗಿದ್ದವರಿಗೆ ಬಿಪಿಎಲ್‌ ಕಾರ್ಡ್ ಕೊಡಬೇಕು ಎಂಬ ನಿಯಮವಿದೆ. ಒಂದೊಂದು ಜಿಲ್ಲೆಯಲ್ಲಿ ಶೇ.95 ರಷ್ಟು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ನೈಜವಾಗಿ ಯಾರು ಬಡತನದಲ್ಲಿ ಇದ್ದು, ಬಿಪಿಎಲ್ ಕಾರ್ಡ್ ಪಡೆದಿದ್ದರೆ ಅವರಿಗೆ ಯಾವುದೇ ವಂಚನೆಯಗುವುದಿಲ್ಲ ಎಂದು ಖಂಡ್ರೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ ಚುನಾವಣೆ | ಗೆಲ್ಲುತ್ತಿರುವ ಶ್ರೀಮಂತ ಜಿಲ್ಲೆಗಳು ಮತ್ತು ಸೊರಗುತ್ತಿರುವ ಬಡ ಪ್ರದೇಶಗಳು

‌ಸರ್ಕಾರಿ ನೌಕರರು, ಸಾಹುಕಾರರು, ತೆರಿಗೆ ಪಾವತಿಸುವವರೂ ಬಿಪಿಎಲ್ ಕಾರ್ಡ್ ಹೊಂದಿರುವ ಬಗ್ಗೆ ಸಾಕಷ್ಟು ದೂರುಗಳಿವೆ. ಅಂಥವರ ಕಾರ್ಡ್‌ ರದ್ದಾಗಲಿವೆ. ಸರ್ಕಾರ ಅರ್ಹರಿಗೆ ಅನ್ಯಾಯವಾಗದಂತೆ ಕ್ರಮಕೈಗೊಳ್ಳುತ್ತದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...