ಬೀದರ್‌ | ಬ್ರಿಮ್ಸ್‌ ಅವ್ಯವಸ್ಥೆ: ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ

Date:

ಬೀದರ್‌ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಬ್ರಿಮ್ಸ್‌) ನಡೆದಿರುವ ಅಕ್ರಮ, ಅವ್ಯವಸ್ಥೆಯನ್ನು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಿ ಆಸ್ಪತ್ರೆಗೆ ಹೊಸ ಕಾಯಕಲ್ಪ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ಈ ಸಂಬಂಧ ʼಬ್ರಿಮ್ಸ್‌ನ ಅಕ್ರಮಗಳ ತನಿಖೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರಿಗೆ ಪತ್ರ ಬರೆದಿರುವ ಅವರು, ʼಬೀದರ್‌ನ ಬ್ರಿಮ್ಸ್ ಆಸ್ಪತ್ರೆ ಇತ್ತೀಚೆಗೆ ಒಂದಿಲ್ಲೊಂದು ವಿವಾದಕ್ಕೆ ಸಿಲುಕುತ್ತಿದ್ದು, ಆಸ್ಪತ್ರೆಯ ಅವ್ಯವಸ್ಥೆ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಇದು ಸರ್ಕಾರವನ್ನು ಮತ್ತು ಜಿಲ್ಲಾ ಉಸ್ತುವಾರಿ ಸಚಿವನಾದ ನನ್ನನ್ನು ಮುಜುಗರಕ್ಕೀಡು ಮಾಡುತ್ತಿದೆʼ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼಮಳೆ ಬಂದಾಗ ಆಸ್ಪತ್ರೆಯ ನೆಲದಿಂದ ನೀರಿನ ಬುಗ್ಗೆ ಉಕ್ಕುತ್ತದೆ. ಈ ಬಗ್ಗೆ ನಾನು ಲಿಖಿತ ಸೂಚನೆ ನೀಡಿದ್ದರೂ ದುರಸ್ತಿ ಆಗಿಲ್ಲ. ಜೊತೆಗೆ ಇಲ್ಲಿ ನಿರ್ಲಕ್ಷ್ಯವೂ ಇದೆ. ಕಳೆದ ಕೆಲವು ತಿಂಗಳ ಹಿಂದೆ ನೇಮಕಾತಿ ಪ್ರಕ್ರಿಯೆಯ ಯಾವುದೇ ನಿಯಮ ಪಾಲಿಸದೆ, ಸರ್ಕಾರದ ಪರವಾನಗಿ ಪಡೆಯದೆ, ಸಂದರ್ಶನವನ್ನೂ ನಡೆಸದೆ ನೇಮಕಾತಿ ಮಾಡಲಾಗಿದ್ದ 40ಕ್ಕೂ ಹೆಚ್ಚು ತಜ್ಞ ವೈದ್ಯರಿಗೆ ವೇತನ ನೀಡದೆ ವಜಾ ಮಾಡಲಾಗಿದೆ. ಇದರಿಂದಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಒಳ ರೋಗಿಗಳಿಗೆ ಮತ್ತು ಹೊರರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲದಂತಾಗಿದೆʼ ಎಂದು ಸಚಿವರು ನಡವಳಿಯಲ್ಲಿ ಉಲ್ಲೇಖಿಸಿದ್ದಾರೆ.

ʼಬ್ರಿಮ್ಸ್ ಆಸ್ಪತ್ರೆಯಲ್ಲಿ ಔಷಧ ಖರೀದಿಯಲೂ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸರ್ಕಾರಿ ಆಸ್ಪತ್ರೆಗಳು ಬಡ ರೋಗಿಗಳ ಪಾಲಿಗೆ ಆಶಾಕಿರಣವಾಗಬೇಕು. ಆದರೆ‌, ಬ್ರಿಮ್ಸ್ ನಿರ್ದೇಶಕ ಶಿವಕುಮಾರ್ ಶೆಟಕಾ‌ರ ಮತ್ತು ಇತರರ ಮೇಲೆ ಗುರುತರ ಆರೋಪಗಳಿದ್ದು, ಇವರ ಕರ್ತವ್ಯಲೋಪ, ನಿರ್ಲಕ್ಷ್ಯದಿಂದಾಗಿ ರೋಗಿಗಳು ನರಳುವಂತಾಗಿದೆʼ ಎಂದಿದ್ದಾರೆ.

ಇದನ್ನೂ ಓದಿ : ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ : ಸಚಿವ ಈಶ್ವರ ಖಂಡ್ರೆ

ʼಬ್ರಿಮ್ಸ್‌ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಂಡು, ಆದಷ್ಟು ಶೀಘ್ರದಲ್ಲಿ ಆಸ್ಪತ್ರೆಗೆ ಸಂಪೂರ್ಣ ಕಾಯಕಲ್ಪ ನೀಡಿ, ಸಮಸ್ಯೆಗಳನ್ನು ಪರಿಹರಿಸಿ ಶ್ರೀಸಾಮಾನ್ಯರಿಗೆ ಉತ್ತಮ ಮತ್ತು ಗುಣಮಟ್ಟದ ಆರೋಗ್ಯ ಸೇವೆ ದೊರಕುವಂತೆ ಮಾಡಬೇಕುʼ ಎಂದು ಸಚಿವ ಈಶ್ವರ ಖಂಡ್ರೆ ಅವರು ನಡವಳಿ ಪತ್ರದ ಮೂಲಕ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...