ಬೀದರ್‌ | ಜನಿವಾರ ಪ್ರಕರಣದ ಹಿಂದೆ ಬಿ.ವೈ.ವಿಜಯೇಂದ್ರ ಷಡ್ಯಂತ್ರ : ಅರವಿಂದಕುಮಾರ್‌ ಅರಳಿ ಆರೋಪ

Date:

ಬೀದರ್‌ನಲ್ಲಿ ಜನಿವಾರ ಧರಿಸಿದ ಕಾರಣಕ್ಕಾಗಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಪ್ರಕರಣದ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಷಡ್ಯಂತ್ರ ಆಗಿದೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ್‌ ಅರಳಿ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ʼವಿದ್ಯಾರ್ಥಿ ಸುಚಿವೃತನ ಜನಿವಾರದ ಪ್ರಕರಣದಲ್ಲಿ ವಾಸ್ತವವಾಗಿ ನಡೆದದ್ದೇನು? ಎಂಬುವುದು ತಿಳಿದುಕೊಳ್ಳಬೇಕು. ಈ ಪ್ರಕರಣ ಇಷ್ಟೊಂದು ದೊಡ್ಡದು ಮಾಡಲು ಕಾರಣವೇನೆಂಬುದು ಜನರು ಅರ್ಥ ಮಾಡಿಕೊಳ್ಳವುದು ಬಹಳ ಅವಶ್ಯಕತೆ ಇದೆʼ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ವಿದ್ಯಾರ್ಥಿ ಸುಚಿವೃತ‌ ಕುಲಕರ್ಣಿ ಮೊದಲನೆ ದಿನ ಕೆ-ಸಿಇಟಿ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗಿಲ್ಲ. ಬೀದರ್‌ ನಗರಕ್ಕೆ ಬಿಜೆಪಿಯ ಜನಾಕ್ರೋಶ ಜಾಥಾ ಬರುವ ಸಂದರ್ಭದಲ್ಲೇ ಈ ಪ್ರಕರಣ ಬೆಳಕಿಗೆ ಬರಲು ಕಾರಣವೇನು? ಇನ್ನು, ಸುಚಿವೃತನು ಜನಿವಾರದೊಂದಿಗೆ ಒಂದು ಗೋಲಾಕರದ ಲೋಹದ ವಸ್ತು ಕಟ್ಟಿಕೊಂಡು ಬಂದಿದ್ದರು. ಅದನು ತೆಗೆದು ಪರೀಕ್ಷೆ ಬರೆಯುವಂತೆ ಹೇಳಿದ್ದಕ್ಕೆ ಅವರು ಅದಕ್ಕೆ ಒಪ್ಪದೆ ಮನೆಗೆ ವಾಪಸ್ ಹೋಗಿದ್ದಾರೆ. ಆದರೆ, ಬಿಜೆಪಿಯವರು ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದಾರೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕುಮ್ಮಕ್ಕು ನೀಡುತ್ತಿದ್ದಾರೆʼ ಎಂದು ಆರೋಪಿಸಿದರು.

ಒಂದು ವೇಳೆ ಈ ಪ್ರಕರಣ ಸತ್ಯವಿದ್ದಲ್ಲಿ ತೀವ್ರವಾಗಿ ಖಂಡಿಸುತ್ತೇನೆ, ದೇಶದಲ್ಲಿ ಎಲ್ಲ ಧರ್ಮದವರಿಗೆ ಅವರವರ ಪದ್ದತಿ ಅನುಸರಿಸಲು ಯಾರೂ ಅಡ್ಡಿ ಪಡಿಸುವಂತಿಲ್ಲ. ಹಾಗಾಗಿ ಈ ಕೃತ್ಯವನ್ನು ಜರುಗಿಸಿದ ವ್ಯಕ್ತಿಗೆ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ʼರಾಜ್ಯ ಸರ್ಕಾರವು ಜಾತಿ ಸಮೀಕ್ಷೆಯ ವರದಿ ಸಾರ್ವಜನಿಕವಾಗಿ ಪ್ರಕಟಿಸಲು ಮುಂದಾಗಿರುವ ಸಂದರ್ಭದಲ್ಲೇ ಬಿಜೆಪಿ ಪಟಾಲಂ ಈ ಕೆಲಸ ಮಾಡಿದೆ. ಇದರ ಹಿಂದಿನ ರಾಜಕೀಯ ಪಿತೂರಿ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು. ಅವರವರ ಧರ್ಮ ಅನುಸರಿಸಲು ಪ್ರತಿಯೊಬ್ಬರಿಗೂ ಸ್ವಾತಂತ್ರ್ಯವಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರವು ಪೆಟ್ರೋಲ್‌, ಡೀಸೆಲ್‌, ಸಿಲಿಂಡರ್‌ ಸೇರಿದಂತೆ ಎಲ್ಲ ರೀತಿಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಈ ವಿಷಯಗಳನ್ನು ಮರೆಮಾಚಲು ಬಿಜೆಪಿ ರಾಜಕೀಯ ಷಡ್ಯಂತ್ರ ಮಾಡಿರಬಹುದು. ಆದಕಾರಣ ತನಿಖೆ ನಡೆಸಿದರೆ ಸತ್ಯಾಂಶ ಹೊರಬರುತ್ತದೆʼ ಎಂದು ಅರಳಿ ಅಭಿಪ್ರಾಯ ಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...