ಬೀದರ್‌ | ಕಾರು ಡಿಕ್ಕಿ : ಬೈಕ್‌ ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ!

Date:

ಕಾರು-ಬೈಕ್‌ ಮಧ್ಯೆ ಸಿನಿಮೀಯ ರೀತಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಓರ್ವ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

- Advertisement -

ಬೀದರ್ -ಔರಾದ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ‌ ಜನವಾಡ ಗ್ರಾಮದ ಸಮೀಪ ರವಿವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ಜರುಗಿದೆ. ಜನವಾಡ ಗ್ರಾಮದ ಉಮೇಶ ಕಾಂಬಳೆ (40) ಸಾವನ್ನಪ್ಪಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ದಿಲೀಪ ಎಂಬಾತನನ್ನು ಬೀದರ್‌ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹೈದರಾಬಾದ್‌ ಕಡೆಯಿಂದ ಔರಾದ್‌ ಕಡೆಗೆ ವೇಗವಾಗಿ ಹೋಗುತ್ತಿದ್ದ ತೆಲಂಗಾಣ ಮೂಲದ ಕಾರು ರಸ್ತೆ ಪಕ್ಕದಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಿನಿಮೀಯ ರೀತಿಯಲ್ಲಿ ಬೈಕ್‌ ಸವಾರರು ಐದಾರು ಅಡಿ ದೂರ ಹಾರಿ ಬಿದ್ದಿದ್ದಾರೆ. ಅಪಘಾತದ ಭೀಕರ ದೃಶ್ಯಗಳು ಅಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕಾರು-ಬೈಕ್‌ ಮಧ್ಯೆ ನಡೆದ ಭೀಕರ ಅಪಘಾತ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಕಾರಿನಲ್ಲಿದ್ದ ಚಾಲಕ ಹಾಗೂ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಘಟನೆ ಬಳಿಕ ಕಾರಿನಿಂದ ಇಳಿದು ಎಲ್ಲರೂ ಪರಾರಿಯಾಗಿದ್ದಾರೆ. ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...