ಜಿಲ್ಲೆಯಲ್ಲಿ ಸಾರ್ವಜನಿಕರ ಭದ್ರತೆ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಹಾಗೂ ಅಪರಾಧಿಗಳ ಮೇಲೆ ನಿಗಾಯಿಡಲು ಬೀದರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಿಸಿಟಿವಿ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಶನಿವಾರ ಉದ್ಘಾಟಿಸಿದರು.
ಸಾರ್ವಜನಿಕರ ಭದ್ರತೆ ಹಾಗೂ ಸುರಕ್ಷತೆ ಮತ್ತು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ಅಪರಾಧ ಪ್ರಕರಣಗಳಲ್ಲಿ ತನಿಖೆ ಮತ್ತು ಅಪರಾಧಿಗಳ ಮೇಲೆ ನಿಗಾ ಇಡಲು ಸಿಸಿಟಿವಿಯು ಮಹತ್ವದ ಮಾಹಿತಿ, ಸುಳಿವು ನೀಡುವ ತಾಂತ್ರಿಕ ಅಂಶವಾಗಿದ್ದು, ತಾಂತ್ರಿಕ ಕಾಲಮಾನದಲ್ಲಿ ಜಿಲ್ಲೆಯಲ್ಲಿ ಸುರಕ್ಷತಾ ಕಾನೂನು ಪರಿಣಾಮಕಾರಿಯಾಗಿ ಬಳಸಲು ಈ ಕೇಂದ್ರ ಸಹಕಾರಿಯಾಗಲಿದೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ನಿಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅನುದಾನದಡಿ ಮಂಜುರಾದ ಎಎನ್‌ಪಿಆರ್ ಮಾದರಿಯ 20 ಸಿಸಿ ಟಿವಿ ಕ್ಯಾಮೆರಾ ಮತ್ತು ಎಫ್‌ಆರ್ ಮಾದರಿಯ 16 ಸಿಸಿ ಟಿವಿ ಕ್ಯಾಮೆರಾ ಸೇರಿ ಒಟ್ಟು 36 ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಇದರ ನಿಯಂತ್ರಣವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಸಿಸಿ ಟಿವಿ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಸ್ಥಾಪಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೊಲೆ ಯತ್ನ ಪ್ರಕರಣ : 32 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಬೀದರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬೀದರ ನಗರಸಭೆ ಅಧ್ಯಕ್ಷ ಮಹ್ಮದ ಗೌಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ, ಹುಮನಾಬಾದ ಉಪಭಾಗದ ಡಿವೈಎಸ್‌ಪಿಗಳಾದ ಜಿ.ಎಸ್.ನ್ಯಾಮೇಗೌಡರ್, ನಾಶಿರ್ ಡಿ ಸನಾದಿ ಸೆನ್ ಪೊಲೀಸ್ ಠಾಣೆ, ಸುನೀಲ್ ಕೊಡ್ಲಿ, ಡಿಎಆರ್ ಬೀದರ್ ಹಾಗೂ ಜಿಲ್ಲೆಯ ಇತರೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.