ಬೀದರ್‌ | ಬಸವ ಜಯಂತಿ ದಿನದಂದು ಸಮತಾ ಸಪ್ತಾಹ ಆಚರಿಸಿ : ಬಸವಲಿಂಗ ಪಟ್ಟದ್ದೇವರು

Date:

ಸ್ವಾಮಿ ವಿವೇಕಾನಂದರ ಜಯಂತಿಯನ್ನು ಯುವ ಸಪ್ತಾಹವನ್ನಾಗಿ ಆಚರಿಸುವ ಮಾದರಿಯಲ್ಲಿ ಬಸವ ಜಯಂತಿಯ ದಿನದಂದು ಪ್ರಸಕ್ತ ಸಾಲಿನಿಂದ ಸಮತಾ ಸಪ್ತಾಹ ಆಚರಿಸುವ ಮೂಲಕ ಸಾಂಸ್ಕೃತಿಕ ನಾಯಕನಿಗೆ ರಾಜ್ಯ ಸರಕಾರ ವಿಶೇಷ ಗೌರವ ಸಲ್ಲಿಸಬೇಕು ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮನವಿ ಮಾಡಿದ್ದಾರೆ.

- Advertisement -

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ʼತಾವು ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಮೇಲೆ ತಮ್ಮ ನೇತೃತ್ವದ ಸರಕಾರ ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿರುವುದು ಅತ್ಯಂತ ಚಾರಿತ್ರಿಕ ಸಂಗತಿಯಾಗಿದೆ. ಬಸವಾದಿ ಶರಣರು ಸಮಾನತೆಯ ಕಲ್ಯಾಣ ರಾಜ್ಯ ಕಟ್ಟಿದ್ದರು. ಆ ಮೌಲ್ಯಗಳನ್ನು ಜನಮನದಲ್ಲಿ ಬಿತ್ತುವುದಕ್ಕಾಗಿ ಪ್ರಸಕ್ತ ಸಾಲಿನ ಬಸವ ಜಯಂತಿಯೆಂದು ಕೂಡಲಸಂಗಮದಲ್ಲಿ ತಮ್ಮ ಸರಕಾರ ವಿಶೇಷ ಕಾರ್ಯಕ್ರಮ ರೂಪಿಸುತ್ತಿರುವ ವಿಷಯ ತಿಳಿದು ನಮಗೆ ಅತ್ಯಂತ ಸಂತೋಷವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼಬಸವಾದಿ ಶರಣರ ಚಿಂತನೆಗಳನ್ನು ಅಂತರ್‌ಬಾಹ್ಯವಾಗಿ ನಂಬಿಕೊಂಡಿರುವ ತಾವು ಬಸವತತ್ವದ ಕುರಿತು ವಿಶೇಷ ಅಭಿಮಾನ ಮತ್ತು ಅಭಿರುಚಿ ಹೊಂದಿದ್ದೀರಿ ಎಂಬುವುದಕ್ಕೆ ತಾವು ತೆಗೆದುಕೊಂಡ ಅನೇಕ ದೃಢ ನಿರ್ಧಾರಗಳೇ ಸಾಕ್ಷಿಯಾಗಿವೆ. ಬಸವತತ್ವದ ಅನುಷ್ಠಾನವೇ ತಮ್ಮ ಸರಕಾರದ ಉದ್ದೇಶವಾಗಿದೆ. ಬಸವಣ್ಣನವರು ನೀಡಿರುವ ಜಾಗತಿಕ ಮೌಲ್ಯಗಳಲ್ಲಿ ಸಮಾನತೆಯ ಮೌಲ್ಯ ಅತ್ಯಂತ ಮಹತ್ತರ ಹಾಗೂ ಇಂದಿಗೂ ಪ್ರಸ್ತುತವಾಗಿದೆʼ ಎಂದು ವಿಶ್ಲೇಷಿಸಿದರು.

ಬಸವಣ್ಣ-ಲಿಂಗಾಯತರು
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ

ʼಬಸವಣ್ಣನವರ ಜಯಂತಿ ದಿನದಿಂದ ಮುಂದಿನ ಏಳು ದಿನಗಳಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳು, ಶಾಲಾ-ಕಾಲೇಜುಗಳು, ಸರಕಾರಿ ಕಾರ್ಯಾಲಯಗಳು, ವಿವಿಧ ಸಂಘ-ಸಂಸ್ಥೆಗಳಲ್ಲಿ ಸಮತಾ ಮಹೋತ್ಸವ, ಸಮತಾ ಸಮ್ಮೇಳನ, ಸಮತಾ ವಿಚಾರ ಸಂಕಿರಗಳು, ಚರ್ಚಾ ಗೋಷ್ಠಿಗಳು ಹಮ್ಮಿಕೊಳ್ಳುವ ಮೂಲಕ ಬಸವಾದಿ ಶರಣರ ಸಮತಾವಾದವನ್ನು ಪ್ರತಿಪಾದಿಸಿ ನಮ್ಮ ನಾಡು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡಬಹುದು. ವಿಶೇಷವಾಗಿ ಯುವಕರಲ್ಲಿ ಸಮಾನತೆಯ ಮೌಲ್ಯ ಬಿತ್ತುವ ಅಗತ್ಯತೆ ಹಿಂದಿನಕ್ಕಿಂತಲೂ ಇಂದು ಅವಶ್ಯಕವಾಗಿದೆʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಇಂದು ಪಿಯುಸಿ ಫಲಿತಾಂಶ: ಆನ್‌ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ?

ಆ ದಿಶೆಯಲ್ಲಿ ಬಸವಾದಿ ಶರಣರ ಸಮತಾ ಮೌಲ್ಯಾಧಾರಿತ ರಾಜ್ಯಮಟ್ಟದ ಭಾಷಣ ಸ್ಪರ್ಧೆ, ನಿಬಂಧ ಸ್ಪರ್ಧೆ, ವಚನ-ನಿರ್ವಚನ ಸ್ಪರ್ಧೆ, ವಚನ ಕಂಠಪಾಠ ಸ್ಪರ್ಧೆ, ವಚನ ಗಾಯನ ಸ್ಪರ್ಧೆ, ವಚನ ನೃತ್ಯ, ಶರಣರ ರೂಪಕ, ನಾಟಕ ಸ್ಪರ್ಧೆ, ಶರಣರ ಕುರಿತು ಕಿರು ಚಲನಚಿತ್ರ ಮಹೋತ್ಸವ ಮುಂತಾದ ರಚನಾತ್ಮಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲು ಅವಕಾಶ ದೊರೆಯುತ್ತದೆ. ಈ ದಿಶೆಯಲ್ಲಿ ತಾವು ಸಕಾರಾತ್ಮಕವಾಗಿ ಈ ವಿಷಯಕ್ಕೆ ಸ್ಪಂದಿಸುವ ಮೂಲಕ ಬಸವ ಮೌಲ್ಯಗಳನ್ನು ಎತ್ತಿ ಹಿಡಿಯುತ್ತೀರಿ ಎಂದು ನಾವು ಬಲವಾಗಿ ನಂಬಿದ್ದೇವೆ ಎಂದು ಶ್ರೀಗಳು ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...