ಬೀದರ್‌ | ಜಿಲ್ಲೆಯಾದ್ಯಂತ ಸಂಭ್ರಮದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತ್ಯುತ್ಸವ

Date:

Advertisements

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವ ಬುಧವಾರ ಜಿಲ್ಲೆಯಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.

ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಕಾರ್ಯಕ್ರಮದಲ್ಲಿ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

WhatsApp Image 2025 04 30 at 5.16.34 PM
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಆಚರಿಸಲಾಯಿತು.

ಬಳಿಕ ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ, ಷಟಸ್ಥಲ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ʼವಿಶ್ವಗುರು ಬಸವಣ್ಣನವರು ಜಗತ್ತಿನಲ್ಲಿಯೇ ಮೊದಲ ಬಾರಿಗೆ ಸಾಮಾಜಿಕ ಕ್ರಾಂತಿ ಹುಟ್ಟು ಹಾಕಿದವರು. ನಾವು ಬಸವಣ್ಣನವರ ಪುಣ್ಯಭೂಮಿ ಕಲ್ಯಾಣ ನೆಲದಲ್ಲಿ ನೆಲೆಸಿದ್ದೇವೆʼ ಎಂದರು.

Advertisements

ʼ12ನೇ ಶತಮಾನದಲ್ಲಿ ಕಲ್ಯಾಣದಲ್ಲಿ ನಡೆದ ವಚನ ಕ್ರಾಂತಿಯು ಸಮಾಜದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಆಗುವಂತೆ ಮಾಡಿತು.ಬಸವಣ್ಣನವರ ವಚನ ಸಾಹಿತ್ಯದ ಮೂಲಕ ಜಾತಿರಹಿತ ಸಮಾಜ, ಸಮ ಸಮಾಜ ಮತ್ತು ಮೇಲು ಕೀಳು ಎಂಬ ಭಾವನೆಗಳು ಹೋಗಲಾಡಿಸಲು ಅವರ ಪ್ರಯತ್ನ ಮಹತ್ವದಾಗಿದೆ. ಇಂದು ನಾವು ಕೂಡ ಬಸವಣ್ಣನವರ ತತ್ವ- ಸಂದೇಶಗಳನ್ನು ಮಾರ್ಗದರ್ಶನ ಮೂಲಕ ಸಮ ಸಮಾಜದ ನಿರ್ಮಾಣ ಮಾಡಬೇಕಾಗಿದೆ. ವಚನಗಳ ಆಶಯಗಳನ್ನು ತಿಳಿದುಕೊಂಡು ಸಮಾನತೆಯಿಂದ ಕೂಡಿ ಬಾಳಬೇಕುʼ ಎಂದು ತಿಳಿಸಿದರು.

ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ಮಾಜಿ ಸಚಿವ ಬಂಡೆಪ್ಪ ಖಾಶಂಪೂರ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೊಡೆ, ಬಸವ ಉತ್ಸವ ಸಮಿತಿ ಅಧ್ಯಕ್ಷ ಜೈರಾಜ್ ಖಂಡ್ರೆ ಸೇರಿದಂತೆ ಮುಖಂಡರಾದ ಆನಂದ ದೇವಪ್ಪ, ಬಾಬು ವಾಲಿ, ಪಂಡಿತ ಚಿದ್ರಿ, ಈಶ್ವರಸಿಂಗ್ ಠಾಕೂರ್, ಸಂಜುಕುಮಾರ್ ಪಾಟೀಲ್, ಮಾರುತಿ ಬೌದ್ಧೆ, ವಿಜಯಕುಮಾರ ಸೊನಾರೆ ಹಾಗೂ ಬಸವಾಭಿಮಾನಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಗತಿಕ ಲಿಂಗಾಯತ ಮಹಾಸಭಾದಿಂದ ಬಸವ ಜಯಂತಿ ಆಚರಣೆ :

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದಿಂದ ಬೀದರ್ ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಇರುವ ಮಹಾಸಭಾದ ಕಚೇರಿಯಲ್ಲಿ ಬುಧವಾರ ಬಸವ ಜಯಂತಿ ಸಂಭ್ರಮದಿಂದ ಆಚರಿಸಲಾಯಿತು.‌ ಬಸವಣ್ಣನವರ ಪ್ರತಿಮೆಗೆ ಪೂಜೆ, ಪುಷ್ಪಾರ್ಚನೆ, ಸಾಮೂಹಿಕ ವಚನ ಪಠಣ ಶ್ರದ್ಧೆ, ಭಕ್ತಿಯಿಂದ ನಡೆದವು.

ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಅವರು ಷಟ್‍ಸ್ಥಲ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ʼಬಸವ ಜಯಂತಿಯು ಮಾನವ ಪ್ರೀತಿ ಹಾಗೂ ಘನತೆಯ ಸಂಕೇತವಾಗಿದೆ. ಬಸವಣ್ಣನವರು ಪ್ರೀತಿಯಿಂದ ಜಗತ್ತನ್ನು ಕಟ್ಟಬಹುದು ಎಂದು ತೋರಿಸಿದ್ದರು. ಪ್ರೀತಿ ಹಾಗೂ ಗೌರವದಿಂದ ಎಂತಹ ಅನಾಚಾರಿಯನ್ನೂ ಸದಾಚಾರಿಯನ್ನಾಗಿಸಬಹುದು ಎಂದು ಪ್ರತಿಪಾದಿಸಿದ್ದರು. ಅಷ್ಟು ಮಾತ್ರವಲ್ಲದೆ, ಅದನ್ನು ಮಾಡಿ ತೋರಿಸಿದ್ದರುʼ ಎಂದು ಹೇಳಿದರು.

Jagatik Lingayat Mahasabha Basava Jayanti
ಬೀದರ್‌ ನಗರದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದಿಂದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಿಸಲಾಯಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಸುವರ್ಣಾ ಧನ್ನೂರ, ಪ್ರಧಾನ ಕಾರ್ಯದರ್ಶಿ ಜಯದೇವಿ ಯದಲಾಪುರೆ, ಕಾರ್ಯದರ್ಶಿ ಯೋಗೇಂದ್ರ ಯದಲಾಪುರೆ, ಕಾರ್ಯಕಾರಿಣಿ ಸದಸ್ಯರಾದ ಮಲ್ಲಿಕಾರ್ಜುನ ಪಂಚಾಕ್ಷರಿ, ಉಮೇಶ ಗಾಯಗೊಂಡ, ರಾಷ್ಟ್ರೀಯ ಬಸವ ದಳದ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ರವಿ ಪಾಪಡೆ, ಪ್ರಮುಖರಾದ ಬಸವರಾಜ ಜಕ್ಕಾ, ನಾಗಶೆಟ್ಟಿ ಧರಂಪುರ, ಗುರು ಹಜ್ಜರಗಿ, ವೀರಶೆಟ್ಟಿ ಮರಕಲ್, ಯೋಗೇಶ ಸಿರಿಗೇರಿ, ಜೆ.ಕೆ. ಮಠಪತಿ ಮತ್ತಿತರರು ಇದ್ದರು. 

ರಾಷ್ಟ್ರದಾದ್ಯಂತ ಬಸವ ಜಯಂತಿ ಆಚರಿಸಲು ಕೇಂದ್ರದ ಮೇಲೆ ಒತ್ತಡ :

ವಿಶ್ವಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಕಲ್ಪಿಸಿದ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಇದೇ ಮೊದಲ ಬಾರಿಗೆ ಈ ವರ್ಷ ದೆಹಲಿಯ ಸಂಸತ್‌ನ ಪ್ರೇರಣಾ ಸ್ಥಳದಲ್ಲಿ ಆಚರಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ರಾಷ್ಟ್ರಾದಾದ್ಯಂತ ಬಸವ ಜಯಂತಿ ಆಚರಿಸಲು ಕೇಂದ್ರ ಸರಕಾರದ ಮೇಲೆ ಒತ್ತಡ ತರುವುದಾಗಿ ಸಂಸದ ಸಾಗರ ಖಂಡ್ರೆ ಭರವಸೆ ನೀಡಿದರು.

WhatsApp Image 2025 04 30 at 5.55.03 PM
ಭಾಲ್ಕಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದ ಬಸವ ಜಯಂತಿ ಉತ್ಸವದಲ್ಲಿ ಸಂಸದ ಸಾಗರ್‌ ಖಂಡ್ರೆ ಭಾಗವಹಿಸಿ ಮಾತನಾಡಿದರು.

ಭಾಲ್ಕಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿ ನಿಮಿತ್ತ ಬಸವ ಜಯಂತಿ ಉತ್ಸವ ವತಿಯಿಂದ ಬುಧವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ’12ನೆಯ ಶತಮಾನದಲ್ಲಿ ಬಸವಣ್ಣನವರು ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿ ಮಾನವಕುಲ ಒಂದೇ ಎಂಬುದನ್ನು ಸಾರಿದ್ದರು. ಅವರ ತತ್ವದಂತೆ ನಾವೆಲ್ಲರೂ ಒಂದಾಗಿ ಸಾಗಬೇಕಿದೆ ಎಂದರು.

ರಾಷ್ಟ್ರ ಮಟ್ಟದಲ್ಲಿ ಬಸವ ಜಯಂತಿ ಆಚರಿಸಲು ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಅವರು ಕೇಂದ್ರ ಸರಕಾರದ ಮೇಲೆ ನಿರಂತರ ಒತ್ತಡ ತರುತ್ತಿದ್ದಾರೆ. ನಾನು ಕೂಡ ಪೂಜ್ಯರ ಬೇಡಿಕೆ, ಹೋರಾಟಕ್ಕೆ ಬೆಂಬಲವಾಗಿ ನಿಂತು ಬಸವ ಜಯಂತಿ ರಾಷ್ಟ್ರ ಮಟ್ಟದಲ್ಲಿ ಆಚರಿಸಲು ಕೇಂದ್ರದ ಮೇಲೆ ಒತ್ತಡ ತರುವುದಾಗಿ ತಿಳಿಸಿದರು.

ನೇತೃತ್ವ ವಹಿಸಿದ್ದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ʼವಿಶ್ವಗುರು ಬಸವಣ್ಣನವರು ಮಹಾನ ಚೇತನ ಶಕ್ತಿ ಆಗಿದ್ದಾರೆ. ಜಾತಿ ವ್ಯವಸ್ಥೆ, ಕಂದಾಚಾರ, ಮೌಢ್ಯತೆ ವಿರುದ್ಧ ಧ್ವನಿಯೆತ್ತಿ ಜಾತಿಭೇದ ಎನ್ನದೇ ಎಲ್ಲರನ್ನು ಅಪ್ಪಿಕೊಂಡಿದ್ದಾರೆ. ಬಸವಣ್ಣನವರ ಆದರ್ಶಗಳು ನಮಗೆ ಪ್ರೇರಣೆಯಾಗಬೇಕುʼ ಎಂದು ತಿಳಿಸಿದರು.

ಬಸವ ಜಯಂತಿ ಉತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಶಿವು ಲೋಖಂಡೆ, ಪ್ರಮುಖರಾದ ಜಗದೀಶ ಖಂಡ್ರೆ, ಜಯರಾಜ ಪಾತ್ರೆ, ಅಮಿತ ಅಷ್ಟೂರೆ, ವಿಜಯಕುಮಾರ ರಾಜಭವನ, ಚಂದ್ರಕಾಂತ ಪಾಟೀಲ್, ಬಸವರಾಜ ಮರೆ, ಗುಂಡಪ್ಪ ಸಂಗಮಕರ್, ಸುನಿತಾ ಮಮ್ಮಾ, ಶುಭಾಂಗಿ ಬಳತೆ ಸೇರಿದಂತೆ ಹಲವರು ಇದ್ದರು.

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಬಸವ ಜಯಂತಿ ಆಚರಣೆ

ಬೀದರ್ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಿಸಲಾಯಿತು.

1003614084
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಬಸವ ಜಯಂತಿ ಆಚರಿಸಲಾಯಿತು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಎಸ್ಪಿ ಪ್ರದೀಪ್ ಗುಂಟಿ ಅವರು ಮಾತನಾಡಿ, ‘ವಿಶ್ವಗುರು ಬಸವಣ್ಣನವರು ಕನ್ನಡದ ತತ್ವಜ್ಞಾನಿ, ಸಮಾಜ ಸುಧಾರಕ, ವಚನಕಾರರು, ವಿಶ್ವದ ಪ್ರಪ್ರಥಮ ಸಂಸತ್ತು ಅನುಭವ ಮಂಟಪದ ಸಂಸ್ಥಾಪಕರಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಲಿಪಿಕ ಅಧಿಕಾರಿಗಳು ಉಪಸ್ಥಿತರಿದ್ದರು.

ಬೀದರ್‌ ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ :

ಜಗತ್ತಿಗೆ ಜೀವಪರ ಕಾಳಜಿಯ, ಸಮಾನತೆಯ ಸಿದ್ಧಾಂತವನ್ನು ತಿಳಿಸಿದ ಮಹಾನುಭಾವರೆಂದರೆ ವಿಶ್ವಗುರು ಬಸವಣ್ಣನವರು ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಹೇಳಿದರು.

ಬೀದರ್ ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ʼಬಸವಣ್ಣನವರ ಕಾಯಕನಿಷ್ಠೆಗೆ, ಪ್ರಭಾವಕ್ಕೆ ಒಳಗಾಗಿ ಅನೇಕ ಮಹಾನುಭಾವರು ದೇಶವಿದೇಶದಿಂದ ಕರ್ನಾಟಕದ ಬಸವಕಲ್ಯಾಣಕ್ಕೆ ಬಂದರು. ಬಸವಕಲ್ಯಾಣದ ಅನುಭವ ಮಂಟಪ ಜಗತ್ತಿನ ಮೊದಲ ಪಾರ್ಲಿಮೆಂಟ್ ಎನಿಸಿಕೊಂಡಿತ್ತು. ಅಲ್ಲಿಗೆ ಬಂದಂತಹ ಎಲ್ಲರೂ ಸಮಾನರು. ಸಕಲ ಜೀವರುಗಳಿಗೆ ಲೇಸನೆ ಬಯಸುವ ಬಸವಾದಿ ಶರಣರು ಇಡೀ ಜಗತ್ತಿಗೆ ವಚನ ಸಾಹಿತ್ಯವನ್ನು ಕೊಡುಗೆಯಾಗಿ ನೀಡಿದರುʼ ಎಂದರು.

WhatsApp Image 2025 04 30 at 6.00.46 PM
ಬೀದರ್ ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಮಾತನಾಡಿದರು.

ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಸುರೇಖಾ ಕೆ.ಎ.ಎಸ್. ಅವರು ಪ್ರಾಸ್ತಾವಿಕ ಮಾತನಾಡಿ, ʼಬಸವಣ್ಣನವರ ಕೀರ್ತಿ ದಶದಿಕ್ಕುಗಳಿಗೂ ಹರಡಿ, ನವ ಸಮಾಜದ ನಿರ್ಮಾಣಕ್ಕೆ, ಶಾಂತಿ, ನೆಮ್ಮದಿಯ ಸಹಬಾಳ್ವೆಯ ಜೀವನಕ್ಕೆ ಕಾರಣವಾಯಿತು. ಜಾತಿ ಭೇದವಿಲ್ಲದ, ಲಿಂಗ ತಾರತಮ್ಯವಿಲ್ಲದ, ವರ್ಗ ತಾರತಮ್ಯವಿಲ್ಲದ ಸಮಾಜವನ್ನು ಕಟ್ಟ ಬಯಸಿದ ಶರಣರು ನಡೆದಂತೆ ನುಡಿದರು, ನುಡಿದಂತೆ ನಡೆದರು, ಅವರ ಆದರ್ಶಗಳು, ವಿಚಾರಧಾರೆಗಳು ನೂರಾರು ವರ್ಷಗಳು ಕಳೆದರೂ ಇಂದಿಗೂ ಜೀವಂತವಾಗಿವೆʼ ಎಂದರು.

ವಿಶೇಷ ಉಪನ್ಯಾಸ ನೀಡಿದ ಸಾಹಿತಿ ಡಾ.ರಾಮಚಂದ್ರ ಗಣಾಪೂರ ಮಾತನಾಡಿ, ʼಸಾಂಸ್ಕೃತಿಕ ನಾಯಕ ಬಸವಣ್ಣನವರು ಸಮಾನತೆಯ ಹರಿಕಾರರಾಗಿ ಆರೋಗ್ಯಕರ ಸಮಾಜದ ನಿರ್ಮಾಣಕ್ಕಾಗಿ ದುಡಿದವರು. ತಮ್ಮ ಅಮೂಲ್ಯ ವಚನಗಳ ಮೂಲಕ ಅಂದಿನ ಸಮಾಜದಲ್ಲಿನ ಅಂಧಕಾರ, ಅನಾಚಾರ, ಮೂಢನಂಬಿಕೆಗಳ ಸಂಕೋಲೆಗಳಿಂದ ಜನರನ್ನು ಮುಕ್ತಗೊಳಿಸುವ ವಿಶ್ವಗುರುವಾದರು. ತಾರತಮ್ಯವಿಲ್ಲದ ಸಮಾಜದ ನಿರ್ಮಾಣದಲ್ಲಿ ಜಗಜ್ಯೋತಿ ಬಸವಣ್ಣನವರ ಕೊಡುಗೆ ಅಪಾರವಾದುದು. ಅವರ ವಚನಗಳು ಇಂದಿಗೂ ಜನಮಾನಸದಲ್ಲಿ ದಾರಿದೀಪವಾಗಿವೆʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ವಾವಲಂಬಿ ಬದುಕಿಗೆ ಮನರೇಗಾ ಬಲ: ಬ್ಯಾಂಕ್ ಮ್ಯಾನೇಜರ್ ಹುದ್ದೆ ತೊರೆದು ಕುರಿ ಸಾಕಾಣಿಕೆಯತ್ತ ಪದವೀಧರ

ಬೀದರ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ರವೀಂದ್ರನಾಥ ವಿ.ಗಬಾಡಿಯವರು ಉಪಸ್ಥಿತರಿದ್ದರು. ಡಾ.ಶಾಂತಕುಮಾರ ಚಿದ್ರಿ ಅವರು ವಚನ ಗಾಯನ ನಡೆಸಿಕೊಟ್ಟರು. ಡಾ.ಶಿವಕುಮಾರ ಸಂಗನ್‌ ಸ್ವಾಗತಿಸಿದರು, ಡಾ.ಶ್ರೀಕೃಷ್ಣ ಚಕ್ರವರ್ತಿ ವಂದಿಸಿದರು. ಡಾ.ಅರುಣಕುಮಾರ ಬೇಂದ್ರೆ ನಿರೂಪಿಸಿದರು. ವಿಶ್ವವಿದ್ಯಾಲಯದ ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X