ಬೀದರ್‌ | ಹಕ್ಕಿಜ್ವರ : ಜಿಲ್ಲೆಯ ಗಡಿಗಳಲ್ಲಿ 13 ಚೆಕ್‍ಪೋಸ್ಟ್‌ ಸ್ಥಾಪನೆ

Date:

ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗಗಳಲ್ಲಿ 9 ಚೆಕ್‍ಪೋಸ್ಟ್ ಹಾಗೂ ಮಾರ್ಚ್ 3ರಿಂದ ತೆಲಂಗಾಣ ಗಡಿಯಲ್ಲಿ 4 ಚೆಕ್‍ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಅಧಿಕಾರಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

- Advertisement -

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ʼಜಿಲ್ಲೆಯಲ್ಲಿ ಈವರೆಗೂ ಯಾವುದೇ ಹಕ್ಕಿಜ್ವರ ಪ್ರಕರಣಗಳು ಕಂಡುಬಂದಿಲ್ಲ. ಕೋಳಿ ಫಾರ್ಮ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ಪಾಲಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಎಲ್ಲಾದರೂ ಹಠಾತ್ ಆಗಿ ಕೋಳಿಗಳು ಸಾವನ್ನಪಿದ್ದರೆ ಗಮನಕ್ಕೆ ತರುವಂತೆ ತಿಳಿಸಲಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ʼಮಹಾರಾಷ್ಟ್ರದಿಂದ ಕೋಳಿ ಹಾಗೂ ಮೊಟ್ಟೆ ಸಾಗಾಟವಾಗದಂತೆ ಚೆಕ್‍ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ಮಾಂಸಾಹಾರ ಪ್ರಿಯರು ಮಾಂಸ ಹಾಗೂ ಮೊಟ್ಟೆಗಳನ್ನು ಹೆಚ್ಚು ಬೇಯಿಸಿ ತಿನ್ನುವಂತೆ ತಿಳಿಸಿದರು. ಸದ್ಯ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕುʼ ಎಂದರು.

ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ನಿಯಮವಿದ್ದರೂ ಕೆಲ ಆಸ್ಪತ್ರೆಗಳು ರೋಗಿಗಳಿಂದ ಹಣ ಪಡೆಯುತ್ತಿರುವ ಪ್ರಕರಣಗಳ ಬಗ್ಗೆ ಜಿಲ್ಲಾ ಆರೋಗ್ಯ ಕುಟುಂಬ ಅಧಿಕಾರಿ ಡಾ. ಜ್ಞಾನೇಶ್ವರ ನಿರಗುಡೆ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ರೋಗಿಗಳಿಂದ ಹಣ ಪಡೆದ ಆಸ್ಪತ್ರೆಗಳು ಆ ಹಣವನ್ನು ರೋಗಿಗಳಿಗೆ ವಾಪಸ್ ಸಂದಾಯ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕುಂಭಮೇಳಕ್ಕೆ ತೆರಳಿದ ವೇಳೆ ಅಪಘಾತ; ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆರೋಗ್ಯ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...