ಬೀದರ್‌ | ಮುಖ್ಯಮಂತ್ರಿ, ಕೃಷಿ ಸಚಿವರು ಖುದ್ದಾಗಿ ಅತಿವೃಷ್ಟಿ ಹಾನಿ ಪರಿಶೀಲಿಸಲಿ : ಶಾಸಕ ಶರಣು ಸಲಗರ

Date:

ನಿರಂತರ ಮಳೆ ಹಾಗೂ ಪ್ರವಾಹದಿಂದ ರೈತರು ಬೆಳೆದಿದ್ದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಿಲ್ಲೆಯ ಅತಿವೃಷ್ಟಿ ಹಾನಿ ವೀಕ್ಷಿಸಲು ಧಾವಿಸಬೇಕೆಂದು ಬಸವಕಲ್ಯಾಣ ಶಾಸಕ ಶರಣು ಸಲಗರ ಮನವಿ ಮಾಡಿದರು.

- Advertisement -

ಮಳೆಯಿಂದ ಹಾನಿಗೊಳಗಾಗಿದ್ದ ಹುಲಸೂರ, ಅಂಬೆವಾಡಿ, ಸೊಲದಾಬಕಾ, ಗೋವರ್ಧನ ತಾಂಡಾ ಮತ್ತು ಅಂತರಭಾರತಿ ತಾಂಡಾ ಗ್ರಾಮದ ರೈತರ ಜಮೀನುಗಳಿಗೆ ಗುರುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ʼಕಳೆದ ಮೇ ತಿಂಗಳಿಂದ ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದೆ. ಬಸವಕಲ್ಯಾಣ ಮತಕ್ಷೇತ್ರದ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಉದ್ದು, ಹೆಸರು, ತೊಗರಿ, ಹತ್ತಿ ಸೋಯಾಅವರೆ ಸೇರಿದಂತೆ ವಿವಿಧ ಬೆಳೆ ಸಂಪೂರ್ಣ ಹಾಳಾಗಿದೆ. ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಚಿಂತೆಗೀಡಾಗಿದ್ದಾರೆ. ಸರ್ಕಾರ, ಈ ಪ್ರದೇಶವನ್ನು ಅತಿವೃಷ್ಟಿ ಪೀಡಿತ ಎಂದು ಘೋಷಿಸಬೇಕು. ಪ್ರತಿ ಎಕರೆಗೆ ₹25 ಸಾವಿರ ರೈತರಿಗೆ ಪರಿಹಾರ ನೀಡಬೇಕುʼ ಎಂದು ಮನವಿ ಮಾಡಿದರು.

ʼನಮ್ಮ ಭಾಗದ ರೈತರು ಅತಿವೃಷ್ಟಿ-ಅನಾವೃಷ್ಟಿಗೆ ಸಿಲುಕಿ ಸದಾ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಭಾರಿಯೂ ಅತಿವೃಷ್ಟಿಯಿಂದ ರೈತ ಮತ್ತೆ ಕಂಗಲಾಗಿದ್ದಾನೆ. ಮುಖ್ಯಮಂತ್ರಿಗಳು, ಸಚಿವರು ಕೇವಲ ಬೆಂಗಳೂರು ವ್ಯಾಪ್ತಿಗೆ ಸೀಮಿತರಾಗದೆ ನಮ್ಮ ಭಾಗದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಹಾನಿ, ರೈತರ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿ ರೈತರಿಗೆ ಆತ್ಮಸ್ಥೈರ್ಯ ತುಂಬಿ, ಸೂಕ್ತ ಪರಿಹಾರ ಘೋಷಿಸಬೇಕುʼ ಎಂದು ವಿನಂತಿಸಿದರು.

ಇದೇ ಸಂದರ್ಭದಲ್ಲಿ ಮಳೆ, ಚರಂಡಿ ನೀರು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿ ಹಾನಿಯುಂಟಾದ ಮನೆಗಳಿಗೆ ಭೇಟಿ ನೀಡಿದ ಶಾಸಕರು ಸಂತ್ರಸ್ತರಿಗೆ ಸೂಕ್ತ ಪರಿಹಾರ ಕಲ್ಪಿಸಲು ಮತ್ತು ಪುನರ್ವಸತಿ ಕಾರ್ಯಕ್ಕೆ ಆದ್ಯತೆ ನೀಡಲು ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು. ಜತೆಗೆ ಗ್ರಾಮದ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ಮತ್ತು ಭವಿಷ್ಯದಲ್ಲಿ ಪ್ರವಾಹದ ತಡೆಗಟ್ಟುವ ಕ್ರಮಗಳ ಕುರಿತು ಚರ್ಚೆ ನಡೆಸಿದರು.

WhatsApp Image 2025 09 26 at 7.22.28 AM
ಶಾಸಕ ಶರಣು ಸಲಗರ ಅವರು ಹುಲಸೂರ ತಾಲ್ಲೂಕಿನ ವಿವಿಧೆಡೆ ಅಧಿಕಾರಿಗಳೊಂದಿಗೆ ತೆರಳಿ ಬೆಳೆ ಹಾನಿ ವೀಕ್ಷಿಸಿದರು.

ಇದನ್ನೂ ಓದಿ : ಯಾದಗಿರಿ | ಕೊಡಲಿಯಿಂದ ಕೊಚ್ಚಿ ಇಬ್ಬರು ಮಕ್ಕಳನ್ನು ಕೊಲೆಗೈದ ತಂದೆ!

ಹುಲಸೂರ ತಾ.ಪಂ ಇಒ ಮಹಾದೇವ ಜಮ್ಮು, ಪಿಡಿಒ ರಮೇಶ ಮಿಲಿಂದಕರ, ಕಂದಾಯ ನಿರೀಕ್ಷಕ ನಾಗರಾಜ, ಸೇರಿದಂತೆ ಅಶೋಕ ವಕಾರೆ, ಓಂಕಾರ ಪಟ್ನೆ, ಸುಧೀರ ಕಾಡಾದಿ, ಗೋವಿಂದರಾವ ಸೋಮವಂಶಿ, ಸೋಮನಾಥ ನಂದಗೆ, ರಣಜೀತ ಗಾಯಕವಾಡ, ರಾಮ ಸಾಯಗಾಂವೆ, ರೂಪಾತಾಯಿ ಜಾಧವ, ರಮೇಶ ಧಬಾಲೆ, ಅರವಿಂದ ಹರಿಪಲ್ಲೆ, ಜಗದೀಶ ದೆಟ್ನೆ, ಚಂದ್ರಕಾಂತ ದೆಟ್ನೆ, ದೇವಿಂದ್ರ ಭೋಪಳೆ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...