ಬೀದರ್‌ | ಮಕ್ಕಳ ಸಹಾಯವಾಣಿ-1098 ಬರಹ ಕಡ್ಡಾಯ : ಡಿಸಿ ಶಿಲ್ಪಾ ಶರ್ಮಾ

Date:

ಜಿಲ್ಲೆಯ ಎಲ್ಲ ಜಿಲ್ಲಾ, ತಾಲೂಕು, ಹೋಬಳಿ, ಗ್ರಾಮ ಪಂಚಾಯಿತಿ ಮತ್ತು ಗ್ರಾಮ ಮಟ್ಟದ ಸರ್ಕಾರಿ ಕಚೇರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸ್ವಯಂ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ-1098 ಅಳವಡಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.

- Advertisement -

ʼರಾಜ್ಯ ಸರ್ಕಾರದಿಂದ ಮಕ್ಕಳ ಸಹಾಯವಾಣಿ-1098 ನಾಮ ಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸುವಂತೆ ಸೂಚಿಸಿ, ಸುತ್ತೋಲೆ ಹೊರಡಿಸಿದೆ ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆʼ ಎಂದು ಪ್ರಕಟಣೆಯಲ್ಲಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ʼಈಗಾಗಲೇ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯೂ ಮಕ್ಕಳ ಅಭಿವೃದ್ಧಿ ಹಾಗೂ ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದ್ದು, ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತ ರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೆ ಹಾಗೂ ಪುನರ್ವಸತಿ ಸೇವೆ ಒದಗಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರ ವಹಿಸುತ್ತದೆ. ಈ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದ್ದಲ್ಲಿ ಬಾಲ್ಯ ವಿವಾಹ, ಬಾಲಕಾರ್ಮಿಕತೆ, ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಲಿದೆʼ ಎಂದರು.

ಇದನ್ನೂ ಓದಿ : ಬೀದರ್‌ | ಡಿ.13ರಂದು ಬೃಹತ್‌ ಲೋಕ ಅದಾಲತ್

ಬಾಲ್ಯವಿವಾಹ, ಪೋಕ್ಸೋ, ಬಾಲಗರ್ಭಿಣಿ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಮಕ್ಕಳ ಸಹಾಯವಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಇತ್ಯಾದಿ ಸುರಕ್ಷಿತ ಬೆಂಬಲ ವ್ಯವಸ್ಥೆ ಇರುವುದರ ಕುರಿತು ಮಕ್ಕಳಿಗೆ ಮಾಹಿತಿ ಇರಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು, ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೂ ಸಹ ಈ ಕುರಿತು ಮಾಹಿತಿ ಇದ್ದಲ್ಲಿ ಮಕ್ಕಳಿಗೆ ಸಕಾಲದಲ್ಲಿ ಸ್ಪಂದನೆ ಮತ್ತು ಅಗತ್ಯ ಬೆಂಬಲ ಪಡೆಯಲು ಸಾಧ್ಯವಾಗುತ್ತದೆʼ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....

ಉಡುಪಿ | ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಗೆ ಆಯುರ್ವೇದ–ಆಧುನಿಕ ವಿಜ್ಞಾನ ಸಂಯೋಜನೆ ಅಗತ್ಯ

ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಸಾಂಪ್ರದಾಯಿಕ ಜ್ಞಾನವನ್ನು ಆಧುನಿಕ ವೈಜ್ಞಾನಿಕ...

ಉಡುಪಿ ನೂತನ ಜಿಲ್ಲಾಸ್ಪತ್ರೆ ಸಿದ್ಧ, ಉದ್ಘಾಟನೆಗೆ ಮೀನಮೇಷ, ಹೋರಾಟದ ಎಚ್ಚರಿಕೆ

ಹಲವು ವರ್ಷಗಳ ನಿರೀಕ್ಷೆಯ ಬಳಿಕ ನಿರ್ಮಾಣಗೊಂಡಿರುವ ಉಡುಪಿ ನೂತನ ಜಿಲ್ಲಾ ಆಸ್ಪತ್ರೆ...