ಬೀದರ್‌ | ಮಕ್ಕಳು ಪೊಲೀಸರಿಗೆ ಹೆದರುವ ಅಗತ್ಯವಿಲ್ಲ : ಸಿಪಿಐ ಅಲಿಸಾಬ್

Date:

ಮಕ್ಕಳು ಯಾವುದೇ ಸಮಸ್ಯೆಗಳಿದ್ದರೂ ಪೊಲೀಸ್ ಇಲಾಖೆಯನ್ನು ನೇರವಾಗಿ ಸಂಪರ್ಕಿಸಬಹುದು. ಯಾವುದೇ ಕಾರಣಕ್ಕೂ ಮಕ್ಕಳು ಪೊಲೀಸರಿಗೆ ಹೆದರುವ ಅವಶ್ಯಕತೆ ಇಲ್ಲ ಎಂದು ಬಸವಕಲ್ಯಾಣ ಸಿಪಿಐ ಅಲಿಸಾಬ್ ಹೇಳಿದರು.

- Advertisement -

ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಮೈಸೂರು, ಬೀದರ್ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸಹಯೋಗದಲ್ಲಿ ಬಸವಕಲ್ಯಾಣದ ಬಸವ ಮಹಾಮನೆ ಆವರಣದಲ್ಲಿ ಸೋಮವಾರ ಜರುಗಿದ ʼಮಕ್ಕಳ ಸಂವಾದʼ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

‘ಮಕ್ಕಳು ಇಂದಿನ ಸಭೆಯಲ್ಲಿ ಹೇಳಿಕೊಂಡಿರುವ ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ನಮ್ಮ ಪೊಲೀಸ್ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ಪ್ರತಿ ಹಳ್ಳಿಗಳಿಗೂ ಭೇಟಿ ಮಾಡುವಂತೆ ತಿಳಿಸಲಾಗುವುದು’ ಎಂದರು.

ಬಸವಕಲ್ಯಾಣ ತಹಶೀಲ್ದಾರ್ ದತ್ತಾತ್ರೇಯ ಗಾದಾ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸಂಸ್ಥೆಯು 9 ಗ್ರಾಮ ಪಂಚಾಯಿತಿಗಳಿಂದ 40 ಗ್ರಾಮಗಳಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಮಕ್ಕಳ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಬಗೆಹರಿಸುವ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡುತ್ತೇನೆ’ ಎಂದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ನಾವು ಆಯೋಗದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂತಹ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ಆದರೆ, ಇಂದು ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮ ಶ್ಲಾಘನೀಯ’ ಎಂದರು.

WhatsApp Image 2024 11 12 at 7.37.43 PM 1

ʼಮಕ್ಕಳ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಿ ಸೂಕ್ತ ನಿರ್ದೇಶನ ನೀಡುತ್ತೇವೆ. ಸರ್ಕಾರ ಮತ್ತು ಸ್ವಯಂ ಸೇವಾ ಸಂಸ್ಥೆಗಳು ಈ ರೀತಿಯ ಮಕ್ಕಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹರಿಸಿದರೆ ಮಕ್ಕಳಿಗೆ ತಮ್ಮ ಹಕ್ಕುಗಳು ಸಂಪೂರ್ಣವಾಗಿ ಪಡೆಯುವಂತಾಗುತ್ತದೆ’ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಡಿಟಿಐ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 4 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆ!

ಸಂಸ್ಥೆಯ ನಿರ್ದೇಶಕಿ ಸರಸ್ವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ  ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ್ ಶಿಂಧೆ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ಹಾಗೂ  ಸಂಸ್ಥೆಯ ಸಿಬ್ಬಂದಿಗಳಾದ ಸಂಪತ್ ಕುಮಾರ, ಶಶಿಕುಮಾರ್ ಎಸ್. ನಾಗರಾಜ ಶೀಲವಂತ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ...

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...