ಬೀದರ್‌ | ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ.17ಕ್ಕೆ ಸಿಎಂ ಭೇಟಿ

Date:

ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ವಿವಿಧ ಬೇಡಿಕೆಗಳ ಶೀಘ್ರ ಈಡೇರಿಕೆಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಧರಿಸಿದೆ.

- Advertisement -

ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ಸಂಘದ ರಾಜ್ಯಮಟ್ಟದ ವಿಷಯ ಸಭೆಯಲ್ಲಿ ಸಂಘದ ರಾಜ್ಯ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಅವರು ಮಾತನಾಡಿ, ʼಈಗಾಗಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಅರಣ್ಯ ಸಚಿವರ ಜತೆಗೆ ನಡೆದ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಸರ್ಕಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒಪ್ಪಿಗೆ ಸೂಚಿಸಿದೆ. ಈ ದಿಸೆಯಲ್ಲಿ ತ್ವರಿತ ಆದೇಶಕ್ಕಾಗಿ ಆಡಳಿತದ ಗಮನ ಸೆಳೆಯಲು ನಿರ್ಣಯಿಸಲಾಗಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸೆ. 17 ರಂದು ಕಲಬುರಗಿಯಲ್ಲಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಗುವುದು. 1995 ರ ನಂತರ ಆರಂಭವಾದ ಖಾಸಗಿ ಅನುದಾನ ರಹಿತ ಶಾಲೆ, ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು ಕೂಡಲೇ ಆದೇಶ ಹೊರಡಿಸದಿದ್ದರೆ ರಾಜ್ಯಮಟ್ಟದಲ್ಲಿ ಬೃಹತ್ ಹೋರಾಟ ಮಾಡಲಾಗುವುದುʼ ಎಂದರು.

ʼರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕುಗಳ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾವಿರಾರು ಸಿಬ್ಬಂದಿಯೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಸಂಘವು ಈ ಬಾರಿ ನ್ಯಾಯಕ್ಕಾಗಿ ʼಮಾಡು ಇಲ್ಲವೇ ಮಡಿʼ ಮಾದರಿಯಲ್ಲಿ ಹೋರಾಟಕ್ಕೆ ಅಣಿಯಾಗಲಿದೆ. ಇದಕ್ಕಾಗಿ ರಾಜ್ಯದಾದ್ಯಂತ ಸಂಘಟನೆ ಸಂಚರಿಸಿ ಸಂಘಟನೆ ಬಲಪಡಿಸಲಿದೆʼ ಎಂದು ಹೇಳಿದರು.

ಬೇಡಿಕೆಗಳೇನು?

1995 ರ ನಂತರ ಆರಂಭಿಸಲಾದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಬಡ ಮಕ್ಕಳಿಗೆ ಆಸರೆಯಾಗಿದ್ದ ಆರ್‍ಟಿಇ ಖಾಸಗಿ ಶಾಲೆಗಳಲ್ಲಿ ಮರು ಜಾರಿಗೊಳಿಸಬೇಕು. ಅನುದಾನಿತ ಶಾಲೆ, ಕಾಲೇಜುಗಳ ಖಾಲಿ ಹುದ್ದೆ ಭರ್ತಿ ಮಾಡಬೇಕು. ಖಾಸಗಿ ಅನುದಾನ ರಹಿತ ಶಾಲೆ, ಕಾಲೇಜು ಕಟ್ಟಡಗಳಿಗೆ ಕರ ವಿನಾಯಿತಿ ನೀಡಬೇಕು. ಉಚಿತ ವಿದ್ಯುತ್ ಒದಗಿಸಬೇಕು. ಕನ್ನಡ ಶಾಲೆ ಬಂದ್ ಮಾಡಿ ಕರ್ನಾಟಕ ಪಬ್ಲಿಕ್ ಶಾಲೆ ಹೆಸರಲ್ಲಿ ಆಂಗ್ಲ ಮಾಧ್ಯಮ ಶಾಲೆ ತೆರೆಯುವುದನ್ನು ಕೈಬಿಡಬೇಕು. ಕನ್ನಡ ಮಾಧ್ಯಮ ಶಾಲೆ, ಕಾಲೇಜುಗಳ ನವೀಕರಣ ಪ್ರಕ್ರಿಯೆ ಸರಳೀಕರಿಸಬೇಕು. ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಅನುದಾನ ರಹಿತ ಶಾಲೆ, ಕಾಲೇಜುಗಳಿಗೆ ಸಂವಿಧಾನದ 371(ಜೆ) ತಿದ್ದುಪಡಿ ಕಾಯ್ದೆ ಅನ್ವಯ ಸೌಲಭ್ಯ ಕಲ್ಪಿಸಬೇಕು ಎನ್ನುವುದು ಪ್ರಮುಖ ಸಂಘದ ಪ್ರಮುಖ  ಬೇಡಿಕೆಗಳಾಗಿವೆ ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅರುಣಕುಮಾರ ಶಹಾಪುರ ಹಾಗೂ ಮಾಧ್ಯಮಿಕ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಜಾಧ್ಯಕ್ಷ ಸಂದೀಪ್ ಬೂದಿಹಾಳ್ ಸಂಘದ ಹೋರಾಟವನ್ನು ಬೆಂಬಲಿಸುವುದಾಗಿ ಪ್ರಕಟಿಸಿದರು.

ಇದನ್ನೂ ಓದಿ : ನಮಗ್ಯಾರಿಗೂ ಬರೆಯಲು ಆಗದೇ ಇದ್ದದ್ದನ್ನು ತೇಜಸ್ವಿ ಬರೆದರು ಎಂದ ಅನಂತಮೂರ್ತಿ

ಸಂಘದ ರಾಜ್ಯ ಸಂಚಾಲಕ ಜೆ.ಸಿ. ಶಿವಪ್ಪ, ಉಪಾಧ್ಯಕ್ಷರಾದ ಎಂ.ಮೌಲಾಲಿ, ಡಿ.ಬಿ.ನದಾಫ್, ನಂಜುಂಡಸ್ವಾಮಿ ಮೈಸೂರು, ಕೃಷ್ಣಮೂರ್ತಿ ಬೆಂಗಳೂರು, ಕೃಷ್ಣಪ್ಪ ಕೋಲಾರ್, ಐ.ಎಸ್. ಸ್ವರ್ಗಿನಮಠ ಬೆಳಗಾವಿ, ಕಾರ್ಯದರ್ಶಿ ಕೆ.ಗುರುನಾಥ ರೆಡ್ಡಿ, ಹುಬ್ಬಳ್ಳಿ ವಿಭಾಗ ಪ್ರಮುಖ ಅನಿಲ್ ಜಾಧವ್, ಕಲಬುರ್ಗಿ ವಿಭಾಗ ಪ್ರಮುಖರಾದ ರಾಜೇಂದ್ರ ಯರನಾಳೆ, ಮಹಾಲಿಂಗಗೌಡ, ಜಿ.ಎಸ್.ದೇಸಾಯಿ, ಮಾಣಿಕಪ್ಪ ಗೊರನಾಳೆ ಬೀದರ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...