ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತವಾಗಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಯಿತು.
ಹುಲಸೂರ ತಾಲ್ಲೂಕಿನ ಮುಚಳಂಬ ಗ್ರಾಮದ ಬಾಬಾ ಸಾಹೇಬ್ ಅಂಬೇಡ್ಕರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ಏರ್ಪಡಿಸಲಾಯಿತು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನಾಧಾರಿತ ಕುರಿತಾದ 60 ಅಂಕಗಳ ಬಹುಆಯ್ಕೆ ಮಾದರಿ ಪರೀಕ್ಷೆ ಬರೆದರು. ಪರೀಕ್ಷೆಯಲ್ಲಿ ಸುಮಾರು 50ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಹಾಜರಿದ್ದರು ಎಂದು ಟ್ರಸ್ಟ್ ಮುಖ್ಯಸ್ಥರು ತಿಳಿಸಿದ್ದಾರೆ.
ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದವರಿಗೆ 5 ಸಾವಿರ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ 3 ಸಾವಿರ ಬಹುಮಾನವನ್ನು ಏ.14ರಂದು ಗ್ರಾಮದಲ್ಲಿ ಜರುಗುವ ಡಾ.ಅಂಬೇಡ್ಕರ್ ಅವರ ಜಯಂತಿ ದಿನದಂದು ವಿತರಿಸಲಾಗುವುದು ಎಂದು ಸಂಯೋಜಕ ಸಂದೀಪ ಮುಕಿಂದೆ ತಿಳಿಸಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷರಾದ ರಾಮಲಿಂಗ ಸಿಂಗಾರೆ, ಸಂಯೋಜಕರಾದ ಪ್ರವೀಣ ಮುಕಿಂದೆ, ವಿಷ್ಣು ಸಿಂಗಾರೆ ದೇವಾನಂದ್ ಟೋಳೆ, ಅಜಿತ್ ಸಿಂಗಾರೆ, ಸಾಗರ್ ಟೋಳೆ, ಜೈವಂತ ಸಿಂಗಾರೆ ಮತ್ತಿತರರಿದ್ದರು.