ಬೀದರ್‌ | ಶ್ರೀಕಾಂತ ಸ್ವಾಮಿ ವಿರುದ್ಧದ ಸುಳ್ಳು ಆಪಾದನೆಗೆ ಖಂಡನೆ

Date:

ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ಮುಖಂಡರೂ ಆದ ಸಾಮಾಜಿಕ ಹೋರಾಟಗಾರ ಶ್ರೀಕಾಂತ ಸ್ವಾಮಿ ಅವರ ವಿರುದ್ಧ ಬ್ರಾಹ್ಮಣ ಸಮುದಾಯದ ಮುಖಂಡರು ಮಾಡಿರುವ ಸುಳ್ಳು ಮಾನಹಾನಿ ಆರೋಪಗಳು ಖಂಡನಾರ್ಹ ಎಂದು ವಿವಿಧ ಸಂಘಟನೆಗಳ ಮುಖಂಡರು, ಸಾಮಾಜಿಕ ಹೋರಾಟಗಾರರು ತಿಳಿಸಿದ್ದಾರೆ.

- Advertisement -

ಈ ಸಂಬಂಧ ಗುರುವಾರ ಜಂಟಿ ಪ್ರಕಟಣೆ ಹೊರಡಿಸಿ ತಿಳಿಸಿದ ಸಾಮಾಜಿಕ ಹೋರಾಟಗಾರರಾದ ಬಾಬುರಾವ್‌ ಹೊನ್ನಾ, ಮಚ್ಚೇಂದ್ರ ವಾಘಮಾರೆ, ವಿಶ್ವಗುರು ಬಸವಧರ್ಮ ಕೇಂದ್ರದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ, ನಿವೃತ್ತ ಪ್ರಾಚಾರ್ಯರಾದ ವಿಠ್ಠಲದಾಸ್‌ ಪ್ಯಾಗೆ, ನಿಜಾಮುದ್ದೀನ್‌ ಸ್ವಾಮಿ ವಿರುದ್ಧದ ಆರೋಪಕ್ಕೆ ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ʼಕಳೆದ ಅಕ್ಟೋಬರ್ 17ರಂದು ಬೀದರ್‌ನ ಅಂಬೇಡ್ಕರ್‌ ವೃತ್ತದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಶ್ರೀಕಾಂತ ಸ್ವಾಮಿ ಅವರು ಆರ್‌ಎಸ್‌ಎಸ್ ವಿರುದ್ಧ ತಮ್ಮ ಅನುಭವದ ಆಧಾರದ ಮೇಲೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಕೆಲವು ಬ್ರಾಹ್ಮಣ ಮುಖಂಡರು ಅದನ್ನು ವಿಕೃತಗೊಳಿಸಿ ಅವರ ಮಾನಹಾನಿ ಮಾಡಲು ಪ್ರಯತ್ನಿಸುತ್ತಿದ್ದಾರೆʼ ಎಂದು ಆರೋಪಿಸಿದ್ದಾರೆ.

ʼಶ್ರೀಕಾಂತ ಸ್ವಾಮಿ ಅವರು ಲಿಂಗಾಯತ ಸಮುದಾಯದ ಗೌರವಯುತ ನಾಯಕರಾಗಿದ್ದಾರೆ. ಧರ್ಮ, ಜಾತಿ ಭೇದವಿಲ್ಲದೆ ಅಭಿವೃದ್ಧಿ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿದ್ದಾರೆ. ಕೋವಿಡ್ ಸಮಯದಲ್ಲಿ ಜೀವದ ಹಂಗಿಲ್ಲದೆ ಜನಸೇವೆ ಮಾಡಿದ್ದಾರೆ. ಬ್ರಾಹ್ಮಣ ಸಮುದಾಯದ ಕಾರ್ಯಕ್ರಮಗಳಲ್ಲಿಯೂ ಅವರು ಭಾಗವಹಿಸಿ ಬೆಂಬಲ ನೀಡಿರುವುದು ಎಲ್ಲರಿಗೂ ತಿಳಿದ ಸಂಗತಿʼ ಎಂದು ತಿಳಿಸಿದ್ದಾರೆ.

ಈ ಆರೋಪಗಳು ರಾಜಕೀಯ ಷಡ್ಯಂತ್ರದಿಂದ ಕೂಡಿವೆ. ಬ್ರಾಹ್ಮಣ–ಲಿಂಗಾಯತ ಸಮಾಜಗಳ ನಡುವೆ ಅಸಮಾಧಾನ ಸೃಷ್ಟಿಸಲು ಪ್ರಯತ್ನಿಸುತ್ತಿರುವುದು ಖಂಡನಾರ್ಹ. ಶ್ರೀಕಾಂತ ಸ್ವಾಮಿ ಅವರ ವಿರುದ್ಧದ ಮಾನಹಾನಿ ಆರೋಪ ತಕ್ಷಣ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಕಾರು ಡಿಕ್ಕಿ : ವೃದ್ಧ ಸಾವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...