ಬೀದರ್‌ | ಮತಗಳ್ಳತನ ಪತ್ತೆಗೆ ಕಾಂಗ್ರೆಸ್ ಪ್ರಚಾರ ಸಮಿತಿ ಸಿದ್ಧ : ಮಾಜಿ ಸಚಿವ ಸೊರಕೆ

Date:

Advertisements

ರಾಜ್ಯದಲ್ಲಿ ಮತಗಳ್ಳತನ ನಡೆದಿರುವುದು ಜಗಜ್ಜಾಹಿರವಾಗಿದ್ದು, ಇದಕ್ಕೆ ಕಳೆದ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ಮಹಾದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತದಾರರು ಪತ್ತೆ ಹಚ್ಚಲಾಗಿದೆ. ರಾಜ್ಯದ ಇತರೆ ಕ್ಷೇತ್ರದಲ್ಲಿ ಇಂಥ ಘಟನೆ ನಡೆದಿದ್ದು, ಅದನ್ನು ಪತ್ತೆ ಹಚ್ಚುವ ಕೆಲಸ ಕೆಪಿಸಿಸಿ ಪ್ರಚಾರ ಸಮಿತಿ ಮಾಡಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ ಸೊರಕೆ ತಿಳಿಸಿದರು.

ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿರುವ ಅವರು, ಕಳೆದ ವರ್ಷ ಮಹಾರಾಷ್ಟ್ರದಲ್ಲಿ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದಕ್ಕೆ ಅನೇಕ ಸಾಕ್ಷಾಧಾರಗಳು ದೊರೆತಿವೆ. ತಾನು ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಚುನಾವಣೆ ಉಸ್ತುವಾರಿ ಆಗಿದ್ದಾಗೂ ಅಲ್ಲಿ ಬೋಗಸ್ ಮತದಾರರ ಯಾದಿ ಕಂಡು ಬಂದಿತ್ತು. ಈ ವರ್ಷ ಬಿಹಾರದಲ್ಲಿ ಚುನಾವಣೆ ನಡೆಯುತ್ತಿದ್ದು, ನಮ್ಮ ನಾಯಕ ರಾಹುಲ ಗಾಂಧಿ ಅವರು ಸುಮಾರು 800 ಕಿ.ಮೀಟರ್ ಪಾದಯಾತ್ರೆ ಹಮ್ಮಿಕೊಂಡು ಮತಗಳ್ಳತನದ ಕಡಿವಾಣಕ್ಕಾಗಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆʼ ಎಂದು ಸ್ಪಷ್ಟಪಡಿಸಿದರು.

ʼನಮ್ಮ ರಾಜ್ಯದಲ್ಲಿ ಮುಂಬರುವ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಎಲೆಕ್ರಾನಿಕ್ ಮತಯಂತ್ರ ಬದಲು ಬ್ಯಾಲೆಟ್ ಪೇಪರ್ ಮೂಲಕವೇ ಮತದಾನ ಮಾಡಲು ನಮ್ಮ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಜಿಲ್ಲಾ ಹಾಗೂ ಬ್ಲಾಕ್ ಮಟ್ಟದಲ್ಲಿ 23 ಜನ ಕಾರ್ಯಕರ್ತರ ತಂಡ ರಚಿಸಲಾಗುತ್ತಿದೆʼ ಎಂದರು.

ʼಬ್ಲಾಕ್ ಮಟ್ಟದ ಸಮಿತಿಗಳಲ್ಲಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಎಲ್ಲ ಸಮುದಾಯಗಳ ಕಾರ್ಯಕರ್ತರನ್ನು ನೇಮಿಸಿಕೊಳ್ಳಲಾಗುತ್ತದೆ. ಅದರಲ್ಲಿ ಮಹಿಳೆಯರು ಸೇರಿದಂತೆ ಎಲ್ಲ ವರ್ಗದವರಿಗೆ ಆದ್ಯತೆ ನೀಡಲಾಗುತ್ತದೆ. ಪ್ರಾಂತವಾರು ಕಾರ್ಯಕರ್ತರನ್ನು ಸಹ ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ರಾಜ್ಯದಲ್ಲಿ ಒಟ್ಟು 59 ಸಾವಿರ ಬುತ್‌ಗಳಿದ್ದು, ಪ್ರತಿ ಬೂತ್‌ನಿಂದ ತಲಾ ಇಬ್ಬರು ಕಾರ್ಯಕರ್ತರನ್ನು ನೇಮಿಸಿ ಅವರನ್ನು ಡಿಜಿಟಲ್ ಯುತ್ ಎಂದು ಕರೆಯಲಾಗುತ್ತದೆʼ ಎಂದು ಹೇಳಿದರು.

ʼರಾಜ್ಯದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಡಿಜಿಟಲ್ ಯುತ್‌ಗಳು ಪಕ್ಷದ ಸಾಮಾಜಿಕ ಜಾಲತಾಣ ಕಾರ್ಯನಿರ್ವಹಿಸುವರು. ಪ್ರಚಾರ ಸಮಿತಿಯಿಂದ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ವಿಶೇಷ ತರಬೇತಿ ನೀಡುವ ಉದ್ದೇಶ ಹೊಂದಿದ್ದೇವೆ. ಒಟ್ಟಾರೆ ನಮ್ಮ ಸಮಿತಿ ಕೇವಲ ಚುನಾವಣೆಗೆ ಸೀಮಿತವಾಗಿರದೆ ಇಡೀ 5 ವರ್ಷ ಪ್ರಚಾರ ಕಾರ್ಯ ಮಾಡುತ್ತದೆ. ಈಲ್ಲಾ ಮಟ್ಟದಲ್ಲಿ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷರೇ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಹಾಗೂ ಆಯಾ ಬ್ಲಾಕ್ ಮಟ್ಟದಲ್ಲಿ ಸಾರ್ವಜನಿಕರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಚಾರ ಹಾಗೂ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದೇವೆʼ ಎಂದರು.

ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಾಗ ವಿರೋಧ ಪಕ್ಷದವರು ಬಹಳಷ್ಟು ಟೀಕೆ ಟಿಪ್ಪಣಿ ಮಾಡಿದರು. ಆದರೆ ಕಳೆದ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4.6 ಲಕ್ಷ ಕೋಟಿ ಬಜೆಟ್ ಮಂಡಿಸುವ ಮೂಲಕ ವಿರೋಧ ಪಕ್ಷದವರಿಗೆ ಉತ್ತರ ನೀಡಿದ್ದಾರೆ. ಅದರಲ್ಲಿ 55 ಸಾವಿರ ಕೋಟಿ ಗ್ಯಾರಂಟಿಗಾಗಿ ವಿನಿಯೋಗಿಸಿ, ಉಳಿದ ಹಣ ಅಭಿವೃದ್ಧಿಗಾಗಿ ವಿನಿಯೋಗಿಸಲಾಗಿದೆ. ಕೇಂದ್ರ ಸರ್ಕಾರ ಘೋಷಿಸಿರುವಂತೆ ತಲಾ ಆದಾಯದಲ್ಲಿ 2.4 ಲಕ್ಷ ತಲಾ ಆದಾಯ ತೋರಿಸಿದೆ. ಇದು ಇಡೀ ದೇಶದಲ್ಲೆ ನಂಬರ್‌ ಒನ್ ಆಗಿ ಕಂಡು ಬಂದಿದೆ. ಜಿಡಿಪಿಯಲ್ಲಿ 8, ವಿದೇಶಿ ಬಂಡವಾಳ ಹುಡಿಕೆಯಲ್ಲಿ ಇಡೀ ದೇಶದಲ್ಲಿ ಮೂರನೇ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿʼ ಎಂದರು.

ಇದನ್ನೂ ಓದಿ : Breaking News | ಆಳಂದ ಮತದಾರರ ಪಟ್ಟಿ ಅಕ್ರಮ; ತನಿಖೆಗೆ ಎಸ್‌ಐಟಿ ರಚನೆ ಸಾಧ್ಯತೆ

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷ ಭೀಮಣ್ಣ ಮೇಟಿ, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೊಡೆ, ಭಾಲ್ಕಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹಣಮಂತರಾವ ಚವ್ಹಾಣ, ಬೂಡಾ ಸದಸ್ಯ ಮಹಮ್ಮದ್ ಸಮಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾರ್ಜ್ ಫರ್ನಾಂಡಿಸ್ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ ಎಚ್.ಪಟ್ಟಣ ಗ್ರಾಪಂ ನಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಎಂ. ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ...

ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತ ಅವಮಾನಿಸಿದ ಮೋದಿ: ಬಿ ಕೆ ಹರಿಪ್ರಸಾದ್‌ ಕಿಡಿ

ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ...

ವಿಜಯನಗರ | ಭಾರತ ಸ್ವಾವಲಂಬಿಯಾಗಲು ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು: ಡಾ. ವೀರೇಶ ಬಡಿಗೇರ

ವರ್ಣ, ವರ್ಗ, ಲಿಂಗರಹಿತ ಸಮಾಜ ಸ್ಥಾಪನೆಯು ಗಾಂಧಿಯ ಕನಸಾಗಿತ್ತು. ಸ್ವದೇಶಿ ಚಳವಳಿ,...

ತುಮಕೂರು ದಸರಾ ಜಂಬೂಸವಾರಿ : ಸಾಂಸ್ಕೃತಿಕ ವೈಭವ

 ತುಮಕೂರು ದಸರಾ ಉತ್ಸವದ ಅಂಗವಾಗಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

Download Eedina App Android / iOS

X