ಬೀದರ್‌ | ಶಿಷ್ಟಾಚಾರ ಉಲ್ಲಂಘನೆ ಆರೋಪ : ವೇದಿಕೆಯಲ್ಲೇ ಪ್ರತಿಭಟಿಸಿದ ʼಕೈʼ ಕಾರ್ಯಕರ್ತರು

Date:

Advertisements

ಔರಾದ ತಾಲೂಕಾ ಪಂಚಾಯತ್‌, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶನಿವಾರ ಔರಾದ್ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಕಾರ್ಯಕ್ರಮದ ವೇದಿಕೆ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.

ಕೆಪಿಸಿಸಿ ಸಾಮಾಜಿಕ ಮಾಧ್ಯಮ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ ಕೊಳ್ಳುರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಅಗೌರವ ತೋರಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಸಕ ಪ್ರಭು ಚವ್ಹಾಣ ವಿರುದ್ಧ ಧಿಕ್ಕಾರ ಕೂಗಿದರು.

ʼಸರ್ಕಾರದ ನಿಯಮದಂತೆ ಶಿಕ್ಷಣ ಇಲಾಖೆ ಕಾರ್ಯಕ್ರಮ ಏರ್ಪಡಿಸಿದೆ. ಆದರೆ, ಬ್ಯಾನರ್‌ ಮೇಲೆ ಸಿಎಂ. ಡಿಸಿಎಂ, ಶಿಕ್ಷಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಭಾವಚಿತ್ರ ಹಾಕದೆ ಕೇವಲ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರ ಭಾವಚಿತ್ರ ಹಾಕದೆ ಅಗೌರವ ತೋರಲಾಗಿದೆ. ತಾಲ್ಲೂಕು ಶಿಕ್ಷಣ ಇಲಾಖೆ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸಿದ್ದು ಖಂಡನೀಯ‌ʼ ಎಂದು ಮುಖಂಡ ಸುಧಾಕರ್ ಕೊಳ್ಳುರ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ವೇದಿಕೆ ಮೇಲೆ ಶಾಸಕ ಪ್ರಭು ಚವ್ಹಾಣ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ಮಧ್ಯೆ ಕೆಲಹೊತ್ತು ಮಾತಿನ ಚಕಮಕಿ ನಡೆಯಿತು. ಪೊಲೀಸರು ಮಧ್ಯೆ ಪ್ರವೇಶಿಸಿ ಕಾಂಗ್ರೆಸ್ ಮುಖಂಡರನ್ನು ಕರೆದೊಯ್ದು ವಾತಾವರಣ ತಿಳಿಗೊಳಿಸಿದರು. ಬಳಿಕ ಕಾರ್ಯಕ್ರಮ ಜರುಗಿತು.

ಇದನ್ನೂ ಓದಿ : ಬೀದರ್‌ | ವಿದ್ಯಾರ್ಥಿಗಳ ʼಬರʼ : ಬಾಗಿಲು ಮುಚ್ಚಿದ ಸರ್ಕಾರಿ ಪದವಿ ಪೂರ್ವ ಕಾಲೇಜು!

ಈ ವೇಳೆ ಮುಖಂಡರಾದ ಸುನೀಲ್ ಮಿತ್ರಾ, ಚಂದು ಡಿಕೆ, ರಾಜು ಮುದಾಳೆ, ರತ್ನದೀಪ ಕಸ್ತೂರೆ, ಮಾರುತಿ ಸೂರ್ಯವಂಶಿ, ಆನಂದ್ ಕಾಂಬಳೆ, ರಾಹುಲ್ ಜಾದವ್, ಅನೀಲ್ ಒಡೆಯಾರ್, ಸೂರ್ಯಕಾಂತ ಕಾಂಬ್ಳೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X