ಬೀದರ್‌ | ಏ.26ಕ್ಕೆ ಸಂವಿಧಾನ ಸಂರಕ್ಷಕರ ಸಮಾವೇಶ

Date:

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯಕಾರಿ ಹಂತಕ್ಕೆ ತಲುಪಿದೆ. ಆದ್ದರಿಂದ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಯಾನದ ಭಾಗವಾಗಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ಏ.26ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ‘ಎದ್ದೇಳು ಕರ್ನಾಟಕ’ ಜಿಲ್ಲಾ ಸಂಯೋಜಕ ಓಂಪ್ರಕಾಶ ರೊಟ್ಟೆ ತಿಳಿಸಿದರು.

- Advertisement -

ಬೀದರ್‌ ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನದ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಹೋರಾಟಗಾರ್ತಿ ಮೇಧಾ ಪಾಟ್ಕರ್‌, ಗುಜರಾತ್‌ ಕಾಂಗ್ರೆಸ್‌ ಶಾಸಕ ಜಿಗ್ನೇಶ್‌ ಮೇವಾನಿ, ಆರ್ಥಿಕ ತಜ್ಞ ಪರಕಾಲ ಪ್ರಭಾಕರ್‌, ನಟ ಪ್ರಕಾಶ್‌ ರೈ, ಚಿಂತಕ ಬರಗೂರು ರಾಮಚಂದ್ರಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ, ತಮಿಳುನಾಡು ಸಂಸದ ಶಶಿಕಾಂತ್‌ ಸೆಂಥಿಲ್‌ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ. ಕೇರಳ, ಪಂಜಾಬ್‌, ದೆಹಲಿ, ಮಹಾರಾಷ್ಟ್ರ ಸೇರಿ ಇತರ ರಾಜ್ಯಗಳಿಂದ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆʼ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ʼಯಾವ ರಾಜಕೀಯ ಪಕ್ಷವೂ ಸಂವಿಧಾನ ಉಳಿಸಿಕೊಳ್ಳುವ ಆಸಕ್ತಿ ತೋರಿಲ್ಲ. ಸಂವಿಧಾನ ರಕ್ಷಣೆ ಮಾಡಿಕೊಳ್ಳುವ ಹೊಣೆಗಾರಿಕೆ ದೇಶದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನ ಮೇಲಿದೆ. ಸಂವಿಧಾನ ಉಳಿದರೆ ದೇಶ ಹಾಗೂ ಜನರು ಉಳಿಯುತ್ತಾರೆ. ಸಂವಿಧಾನದ ಆಶಯ ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಕನಸಿ ಭಾರತವನ್ನು ರಕ್ಷಿಸಿಕೊಳ್ಳುವ ತುರ್ತು ಎದುರಾಗಿದೆʼ ಎಂದು ಹೇಳಿದರು.

ʼಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಪ್ರಯತ್ನ ಜ.26ರಿಂದ ಶುರುವಾಗಿದೆ. 3 ತಿಂಗಳ ಅವಧಿಯಲ್ಲಿ 10 ಸಾವಿರ ಜನರನ್ನು ತಲುಪಿದ್ದು, ಈ ಎಲ್ಲರೂ ಸಮಾವೇಶಕ್ಕೆ ಬರಲಿದ್ದಾರೆ. ರಾಜ್ಯದ ಎಲ್ಲ ಸಮಾನ ಮನಸ್ಕ ಸಂಘಟನೆಗಳು ಒಂದಾಗಿ ಈ ಪ್ರಯತ್ನ ಮಾಡುತ್ತಿದ್ದೇವೆ. ರೈತ, ದಲಿತ, ಕನ್ನಡ ಪರ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯಗಳು ಇದಕ್ಕೆ ಕೈಜೋಡಿಸಿವೆʼ ಎಂದು ಮುಖಂಡ ನಿಜಾಮುದ್ದೀನ್‌ ಹೇಳಿದರು.

ಮುಂದಿನ ಮೂರು ವರ್ಷಗಳಲ್ಲಿ 10 ಸಾವಿರ ಕಾರ್ಯಕರ್ತರ ಈ ಸಂವಿಧಾನ ಸಂರಕ್ಷಣಾ ಪಡೆಯನ್ನು ಒಂದು ಲಕ್ಷಕ್ಕೆ ಸಜ್ಜುಗೊಳಿಸಲಿದ್ದು, ಅದಕ್ಕಾಗಿ ರಾಜ್ಯಾದ್ಯಂತ ಎಲ್ಲಾ ತಾಲೂಕು, ಜಿಲ್ಲೆಗಳಲ್ಲಿ ಕೆಲಸ ಮಾಡಲಿದ್ದೇವೆ. ಪ್ರತಿ ಊರು, ಕೇರಿ, ಹಾಡಿ, ಬೀದಿಗಳಲ್ಲಿ, ʼಸಂವಿಧಾನ ಸಂರಕ್ಷಕ ಪಡೆʼ ಹೆಸರಿನಲ್ಲಿ ದೇಶಪ್ರೇಮಿ ತಂಡಗಳನ್ನು ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಒಂದು ಲಕ್ಷಕಾರ್ಯಕರ್ತರ ಪಡೆಯನ್ನು ಸಜ್ಜುಗೊಳಿಸುವ ಗುರಿ ಇಟ್ಟುಕೊಳ್ಳಲಾಗಿದೆʼ ಎಂದು ಜಿಲ್ಲಾ ಸಂಯೋಜಕ ಜಗದೀಶ್ವರ ಬಿರಾದರ್‌ ಹೇಳಿದರು.

ʼಸಂವಿಧಾನ ಬದಲಾವಣೆಯಾದರೆ ದೇಶಕ್ಕೆ ಅಪಾಯ ಖಚಿತ. ದೇಶದ ಜನರನ್ನು ಎಚ್ಚರಿಸುವುದರ ಜೊತೆಗೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಗೊಳಿಸುವ ಸಂದೇಶ ಸಾರುವ ಉದ್ದೇಶದಿಂದ ಈ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶ ಮುಖಾಂತರ ರಾಜ್ಯದ 15 ಸಾವಿರ ಯುವಕರನ್ನು ಜಾಗೃತಿಗೊಳಿಸಲಾಗುತ್ತಿದೆ. ಈ ಸಮಾವೇಶದಲ್ಲಿ ಬೀದರ್‌ ಜಿಲ್ಲೆಯಿಂದ ಸುಮಾರು 200 ಜನ ಯುವಕರು ಭಾಗಿಯಾಗಲಿದ್ದಾರೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವ್ಯಕ್ತಿಯ ಕುತ್ತಿಗೆ ಕಡಿದು ಬರ್ಬರ ಹತ್ಯೆ

ಎದ್ದೇಳು ಕರ್ನಾಟಕ ಸಂಘಟನೆ ಜಿಲ್ಲಾ ಸಂಯೋಜಕ ಸಂದೀಪ ಮುಕಿಂದೆ ಸೇರಿದಂತೆ ಮಾನವ ಬಂಧುತ್ವ ವೇದಿಕೆಯಾ ಮಹೇಶ ಗೊರನಾಳಕರ್‌, ದಲಿತ ಯುನಿಟಿ ಮ್ಯೂಮೆಂಟ್‌ ರಾಜ್ಯಾಧ್ಯಕ್ಷ ಪ್ರಕಾಶ ರಾವಣ, ಸಾಮಾಜಿಕ ಚಿಂತಕರಾದ ಜೈವಂತ ಸಿಂಗಾರೆ, ಬಾಲಾಜಿ ಸೂರ್ಯವಂಶಿ ಜಮಾಅತೆ ಇಸ್ಲಾಂ ಹಿಂದ್ ಸಂಘಟನೆಯ ಸೈಯದ್‌ ಇಬ್ರಾಹಿಂ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...