ಬೀದರ್ | ಜನವಾಡದಲ್ಲಿ ₹5 ಕೋಟಿ ವೆಚ್ಚದ ಸರ್ಕಾರಿ ಆಸ್ಪತ್ರೆ ನಿರ್ಮಾಣ : ಸಚಿವ ರಹೀಂ ಖಾನ್

Date:

Advertisements

ಬೀದರ್ ತಾಲೂಕಿನ ಜನವಾಡ ಗ್ರಾಮದಲ್ಲಿ ₹5 ಕೋಟಿ ವೆಚ್ಚದಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣ ಆಗಲಿದೆ ಎಂದು ಪೌರಾಡಳಿತ ಸಚಿವ, ಬೀದರ್ ಶಾಸಕರೂ ಆದ ರಹೀಂ ಖಾನ್ ಹೇಳಿದರು.

ಮಂಗಳವಾರ ಜನವಾಡ ನಾಡ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ನಡೆದ ತಾಲೂಕಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸ್ಥಳದಲ್ಲಿಯೇ ಜನರ ಸಮಸ್ಯೆಗಳನ್ನು ಬಗೆಹರಿಸುವ ರಾಜ್ಯ ಸರ್ಕಾರದ ಜನಪ್ರಿಯ ಕಾರ್ಯಕ್ರಮ ಜನಸ್ಪಂದನ ಆಗಿದೆ. ಜನವಾಡ ಭಾಗದಲ್ಲಿ ಏನೇ ಸಮಸ್ಯೆಯಾಗಿರಲಿ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ನೇರವಾಗಿ ಭೇಟಿ ಮಾಡಿ ಸಮಸ್ಯೆ ಬಗೆಹರಿಸಲಿದ್ದಾರೆ. ಈ ವಿಭಾಗದಲ್ಲಿ ಅನೇಕ ರಸ್ತೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿವೆ’ ಎಂದರು.

Advertisements

‘ಆಸ್ತಿಯ ಎ ಮತ್ತು ಬಿ ಖಾತಾ ಸೇವೆಗಳು ಪಂಚಾಯಿತಿ ಮಟ್ಟದಲ್ಲಿ ಕೂಡ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ಫಲಾನುಭವಿಗಳಿಗೆ ನೇರವಾಗಿ ಸೌಲಭ್ಯ ಒದಗಿಸುವ ಪಂಚ ಗ್ಯಾರಂಟಿಗಳು ಜನರ ಜೀವನ ಮಟ್ಟ ಸುಧಾರಿಸುತ್ತಿವೆ’ ಎಂದರು.

1004007531
ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಕಾರ್ಯಕ್ರಮ ಉದ್ಘಾಟಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ‘ಜನಸ್ಪಂದನ ಕಾರ್ಯಕ್ರಮವು ಜನರಿಗೆ ಅತ್ಯಂತ ಉಪಯುಕ್ತವಾದ ಕಾರ್ಯಕ್ರಮವಾಗಿದೆ, ಇದರಿಂದ ಜನರು ನೇರವಾಗಿ ಸ್ಥಳದಲ್ಲಿಯೇ ಪರಿಹಾರ ಪಡೆದುಕೊಳ್ಳಬಹುದು’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ್ ಬದೋಲೆ ಮಾತನಾಡಿ, ತಮ್ಮ ವ್ಯಾಪ್ತಿಯಲ್ಲಿ ಬರುವ ಸಮಸ್ಯೆಗಳು ಈಗಾಗಲೇ ಕೆಲವು ಇತ್ಯಾರ್ಥಗೊಳಿಸಲಾಗಿದ್ದು, ಇನ್ನುಳಿದವು ಶೀಘ್ರವಾಗಿ ಪರಿಹರಿಸಿ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗುವಂತೆ ಮಾಡುವುದಾಗಿ ತಿಳಿಸಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 253 ಅರ್ಜಿಗಳು ಬಂದವು. ಅದರಲ್ಲಿ ರಸ್ತೆ , ಮನೆ , ನೀರು, ಸಾರಿಗೆ, ವಿದ್ಯುತ್, ಜಮೀನು, ಒಳಚರಂಡಿ, ಸ್ವಚ್ಛತೆ, ಪಿಂಚಣಿ, ರೇಷನ್ ಕಾರ್ಡ್, ಗಂಗಾ ಕಲ್ಯಾಣ ಯೋಜನೆಯಡಿ ಬೋರವೆಲ್, ದೈಹಿಕ ಅಂಗವಿಕಲತೆ ಪ್ರಮಾಣ ಪತ್ರ ಸಮಸ್ಯೆ ಮತ್ತು ಜನವಾಡ ಮುಖ್ಯ ರಸ್ತೆಯಲ್ಲಿರುವ ಮದ್ಯ ಅಂಗಡಿ ಸ್ಥಳಾಂತರಿಸುವ ಕುರಿತು ಅರ್ಜಿಗಳು ಸ್ವೀಕರಿಸಿದರು. ಹಲವು ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಯಿತು. ಉಳಿದ ಅರ್ಜಿಗಳು 7 ದಿನದ ಒಳಗಾಗಿ ಇತ್ಯರ್ಥಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

1004007530
ಸಾರ್ವಜನಿಕರಿಂದ ಅಧಿಕಾರಿಗಳು ಅಹವಾಲು ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ವಿಧವಾ ಆದೇಶ ಪತ್ರ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮಂಜೂರಾದ ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರ , ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಲು ಜಾಬ್ ಕಾರ್ಡ್‌ಗಳನ್ನು ವಿತರಿಸಲಾಯಿತು.

ಇದನ್ನೂ ಓದಿ : ಕಲ್ಯಾಣ ಕರ್ನಾಟಕದ ಏಕೈಕ ಕೃಷಿ ಡಿಪ್ಲೋಮಾ ಕಾಲೇಜು : ಕೃಷಿಕರ ಮಕ್ಕಳಿಗೆ ಶೇ.50 ಸೀಟು ಮೀಸಲು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಅಪರ ಜಿಲ್ಲಾಧಿಕಾರಿ ಈಶ್ವರ ಉಳ್ಳಾಗಡ್ಡಿ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ಬೀದರ ತಹಸಿಲ್ದಾರ್ ಡಿ. ಮೆಹತ್ , ತಾಲೂಕಾ ಪಂಚಾಯತ್ ಇಒ ಮಾಣಿಕರಾವ ಪಾಟೀಲ , ನಾಡ ತಹಸಿಲ್ದಾರ್ ಅಶೋಕ್ ರಾಜಗಿರಾ, ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ್ ಕಿರಣ್ ಕುಮಾರ್, ಜನವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೈಜಯಂತಿಬಾಯಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಜನವಾಡ ಹೋಬಳಿಯ ವಿವಿಧ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X