ಬೀದರ್‌ | ನಿರಂತರ ಮಳೆಗೆ ಬಾಯ್ತೆರದ ಗುಂಡಿಗಳು : ಸಂಚಾರಕ್ಕೆ ಸಂಕಷ್ಟ

Date:

ಕಮಲನಗರ ತಾಲ್ಲೂಕಿನ ಖೇಡ ಗ್ರಾಮದಿಂದ ಹುಲಸೂರ(ಕೆ) ಗ್ರಾಮದ ರಸ್ತೆಯಲ್ಲಿ ಅಲ್ಲಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿದ್ದು, ವಾಹನಗಳ ಸವಾರರು ಸಂಚಾರಕ್ಕೆ ಪ್ರಯಾಸ ಪಡುವಂತಾಗಿದೆ.

- Advertisement -

ಸಂಗಮ ಗ್ರಾಮದಿಂದ ಖೇಡ ಗ್ರಾಮದ ಮುಖಾಂತರ ಹುಲಸೂರ(ಕೆ), ಚಾಂಡೇಶ್ವರ, ಸೋನಾಳ, ಕಾಳಗಪುರ, ಸೋನಾಳವಾಡಿ ಗ್ರಾಮಗಳಿಗೆ ಸಂಪರ್ಕಿಸುವ ಈ ರಸ್ತೆಯಲ್ಲಿ ಅಲ್ಲಲ್ಲಿ ಹಾಕಿದ ಡಾಂಬರ್ ಕಿತ್ತು ದೊಡ್ಡದಾದ ತೆಗ್ಗು-ಗುಂಡಿಗಳು ಬಿದ್ದಿವೆ. ಇದರಿಂದ ವಾಹನ ಸವಾರರಿಗೆ, ಜಮೀನುಗಳಿಗೆ ತೆರಳುವ ರೈತರಿಗೆ ನಿತ್ಯ ತೊಂದರೆಯಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಮೊದಲೇ ದುರಸ್ತಿಗೆ ಕಾದಿರುವ ರಸ್ತೆಯಲ್ಲಿ ಎರಡು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ಸಮಸ್ಯೆ ಇನ್ನಷ್ಟು ಹೆಚ್ಚಾಗಿದ್ದು,ಗುಂಡಿಗಳಲ್ಲಿ ನೀರು ಸಂಗ್ರಹವಾಗಿದೆ. ಈ ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರು ಸ್ವಲ್ಪ ವೇಗವಾಗಿ ತೆರಳಿದರೂ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದು ಇಲ್ಲಿನ ನಿತ್ಯ ಸಂಚರಿಸುವ ಸವಾರರು ಹೇಳುತ್ತಾರೆ.

ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿಗಳು ತೆಗ್ಗು ಬಿದ್ದ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ ಮಾಡದೇ ನಿರ್ಲಕ್ಷ ಮಾಡುತ್ತಿದ್ದಾರೆ. ರಸ್ತೆ ಹದಗೆಟ್ಟು ದೊಡ್ಡ ಗುಂಡಿಗಳು ಬಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ರಸ್ತೆ ದುರಸ್ತಿಗೆ ಮುಂದಾಗದೆ ಮೌನ ವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

WhatsApp Image 2025 05 29 at 4.20.55 PM
ನಿರಂತರ ಮಳೆಯಿಂದ ಕೆಸರು ಗದ್ದೆಯಂತಾದ ಖೇಡ-ಹುಲಸೂರ(ಕೆ) ರಸ್ತೆ

ʼಖೇಡ ದಿಂದ ಹುಲಸೂರ(ಕೆ) ಗ್ರಾಮಕ್ಕೆ ಹೋಗುವ ಸುಮಾರು 4 ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟು ತೆಗ್ಗು-ಗುಂಡಿಗಳು ಬಿದ್ದಿವೆ. ಮಳೆಗಾಲ ಆರಂಭವಾಗಿದ್ದರಿಂದ ಈ ರಸ್ತೆಯಲ್ಲಿ ಸಂಚಾರ ಮಾಡುವುದು ಹರಸಾಹಸ ಎಂಬಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಗುಂಡಿಗಳನ್ನು ಮುಚ್ಚಿ ಸವಾರರ ಜೀವ ಉಳಿಸಬೇಕುʼ ಎಂದು ಖೇಡ ಗ್ರಾಮದ ನಿವಾಸಿ ಉತ್ತಮ ಸುತಾರ್ ಒತ್ತಾಯಿಸಿದ್ದಾರೆ.

ʼಚುನಾವಣೆ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ಮಾಡಿಸಿಕೊಡುತ್ತೇವೆ ಎಂದು ಭರವಸೆ ನೀಡಿದ ಜನಪ್ರತಿನಿಧಿಗಳು ಜನರಿಗೆ ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಿಕೊಡಬೇಕು. ಈ ಮಾರ್ಗದ ರಸ್ತೆಯಲ್ಲಿ ಸಾಕಷ್ಟು ಗುಂಡಿಗಳಿವೆ. ದ್ವಿಚಕ್ರ ಸೇರಿದಂತೆ ಆಟೊ, ಕಾರು, ಸೈಕಲ್‌, ಟ್ರ್ಯಾಕ್ಟರ್​ ಸೇರಿದಂತೆ ಹಲವು ವಾಹನಗಳ ಸವಾರರಿಗೆ ನುಂಗಲಾರದ ತುತ್ತಾಗಿದೆ. ಮಳೆ ಬಂದರಂತೂ ವಾಹನ ಸವಾರರ ಪಾಡು ದೇವರಿಗೆ ಪ್ರೀತಿ ಎಂಬಂತಾಗುತ್ತದೆʼ ಎಂದು ಚಾಂಡೇಶ್ವರ ಗ್ರಾಮದ ಶರಣು ಕುಶನೂರೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಕೆಕೆಆರ್‌ಟಿಸಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ : ಸವಾರ ಸಾವು

ಈ ಕುರಿತು ʼಈದಿನ.ಕಾಮ್‌ʼ ಜೊತೆಗೆ ಔರಾದ್‌ ತಾಲ್ಲೂಕು ಪಂಚಾಯತ್‌ ರಾಜ್ ಇಲಾಖೆ ಇಂಜಿನಿಯರ್‌ ವೆಂಕಟ ಸಿಂಧೆ ಮಾತನಾಡಿ, ʼಮಳೆಯಿಂದ ಹಾನಿಯಾದ ರಸ್ತೆಗಳ ಕುರಿತು ಮಾಹಿತಿ ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತಿದ್ದು, ಅನುದಾನ ಬಂದ ಬಳಿಕ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದುʼ ಎಂದು ತಿಳಿಸಿದರು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮರಣಾನಂತರ ದೇಹದಾನಕ್ಕೆ ಮುಂದಾದ ಮೂವರು ಶಿಕ್ಷಕರು, ಸಾಹಿತಿ

ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನ ಮತ್ತು ಸಂಶೋಧನೆಗೆ ನೆರವಾಗುವ ಉದ್ದೇಶದಿಂದ ಮರಣಾನಂತರ ತಮ್ಮ...

ಇಂಡಿ |‌ ಜೋಡೆತ್ತು ಕೃಷಿಕರ ಪ್ರತಿಭಟನೆ; ಅಹವಾಲು ಆಲಿಸಿದ ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಜೋಡೆತ್ತಿನ ಕೃಷಿಕರ ಬೇಡಿಕೆಗಳನ್ನು...

ಹಾವೇರಿ | ಕಬ್ಬು ಬೆಳೆಗಾರರು ಹುಬ್ಬಳ್ಳಿಗೆ ಪಾದಯಾತ್ರೆ; ಕೇಂದ್ರ ಸಚಿವರ ಅಣಕು ಶವಯಾತ್ರೆ

ಕಬ್ಬಿಗೆ ಪ್ರತಿ ಟನ್‌ಗೆ ₹5500 ನೀಡಬೇಕು. ಎಮ್.ಎಸ್.ಪಿ. ದರ 31ರೂ ಇದ್ದದ್ದು,...

ಭಾಲ್ಕಿ | ಪತ್ರಿಕಾ ಭವನ ನಿರ್ಮಾಣಕ್ಕೆ ಪತ್ರಕರ್ತರ ಮನವಿ

ಭಾಲ್ಕಿ ನಗರದಲ್ಲಿ ಪತ್ರಕರ್ತರ ಸಂಘಕ್ಕೆ ನಿವೇಶನ ಒದಗಿಸಿ, ಪತ್ರಿಕಾ ಭವನ ನಿರ್ಮಿಸಿಕೊಡಬೇಕೆಂದು...