ಬೀದರ್‌ | ನಿರಂತರ ಮಳೆ : ಜಮೀನು ಜಲಾವೃತ, ಸೇತುವೆ ಮೇಲೆ ಹರಿದ ನೀರು!

Date:

Advertisements

ಬೀದರ್ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈತರ ಜಮೀನುಗಳು ಜಲಾವೃತಗೊಂಡಿವೆ.

ಶುಕ್ರವಾರ ಬೆಳಿಗ್ಗೆ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ ಖಡಕ್‌ ಬಿಸಿಲಿನೊಂದಿಗೆ ಮೋಡ ಬಯಲಾಯಿತು. ಪುನಃ ರಾತ್ರಿಯಿಂದ ಬಿರುಸಿನ ಮಳೆ ಆರಂಭವಾಯಿತು.

ಇಂದು (ಶನಿವಾರ) ಬೆಳಿಗ್ಗೆಯಿಂದ ದಟ್ಟ ಕಾರ್ಮೋಡ ಕವಿದಿದ್ದು, ಜಿಟಿ ಜಿಟಿ ಮಳೆ, ಕೆಲವೊಮ್ಮೆ ಜೋರು ವರ್ಷಧಾರೆ ಆಗುತ್ತಿದೆ. ಇದರಿಂದಾಗಿ ವಾತಾವರಣ ಸಂಪೂರ್ಣ ತಂಪಾಗಿದ್ದು, ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಪರದಾಡಿದರು. ಬೈಕ್‌ ಸವಾರರು ಹೊರಗಡೆ ಹೋಗಲು ಯೋಚಿಸುವಂತಾಗಿದೆ.

Advertisements

ಮಳೆಗೆ ನೀರಿನ ಹರಿವು ಹೆಚ್ಚಾದ ಪರಿಣಾಮ ಕಮಲನಗರ ತಾಲೂಕಿನ ಕೋರಿಯಾಳ-ಬಸನಾಳ ಗ್ರಾಮಗಳ ಮಧ್ಯೆದ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಜನರು ಸೇತುವೆ ಮೇಲಿಂದ ತೆರಳಲು ತೊಂದರೆಯಾಗಿದೆ. ಹೊಸ ಸೇತುವೆ ನಿರ್ಮಿಸಬೇಕೆಂದು ಎಂದು ಬಸವನಾಳ ಗ್ರಾಮದ ರೈತ ಸದಾನಂದ ಪಾಟೀಲ್‌ ಆಗ್ರಹಿಸಿದರು.

WhatsApp Image 2025 08 16 at 11.33.13 AM
ಜಮೀನಿನಲ್ಲಿ ನೀರು ಸಂಗ್ರಹಗೊಂಡ ಪರಿಣಾಮ ಬೆಳೆ ಹಳದಿ ಬಣ್ಣಕ್ಕೆ ತಿರುಗಿದೆ.

ಸತತ ಮಳೆಯಿಂದ ಜಿಲ್ಲೆಯ ಹಲವೆಡೆ ರೈತರ ಜಮೀನುಗಳಲ್ಲಿ ನೀರು ನಿಂತಿದೆ. ಇದರಿಂದ ಸೋಯಾಅವರೆ, ಉದ್ದು, ಹೆಸರು ಸೇರಿದಂತೆ ಇತರೆ ಬೆಳೆ ಹಾನಿಯಾಗುತ್ತದೆ ಎಂದು ಆತಂಕಗೊಂಡಿದ್ದಾರೆ. ಇನ್ನು ಕೆಲವು ಕಡೆ ಕಟಾವಿಗೆ ಬಂದ ಹೆಸರು ಬೆಳೆ ಮಳೆಯಿಂದ ಹಾನಿಯಾಗುವ ಸಾಧ್ಯತೆಯಿದ್ದು, ರೈತರ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ರೈತ ಲೋಕೇಶ ಗೊಂಡ ಹೇಳುತ್ತಾರೆ.

ಇದನ್ನೂ ಓದಿ : ಬೀದರ್‌ | ಈದಿನ ಫಲಶೃತಿ: ವಿಕಲಚೇತನ ಸಹೋದರಿಯರ ಮನೆಗೆ ದೌಡಾಯಿಸಿದ ಅಧಿಕಾರಿಗಳು; ಮಾಸಾಶನದ ಭರವಸೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X