ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾಗಿದ್ದು, ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಆರೋಪಿತನಿಗೆ 20 ವರ್ಷ ಜೈಲು ಹಾಗೂ ₹5 ಸಾವಿರ ದಂಡ ವಿಧಿಸಿ ಆದೇಶಿಸಿದೆ.
2024ರಲ್ಲಿ ಭಾಲ್ಕಿ ತಾಲ್ಲೂಕಿನ ಮೇಹಕರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಅಳವಾಯಿ ಗ್ರಾಮದಲ್ಲಿ ಘಟನೆ ಜರುಗಿತು. ಈ ಸಂಬಂಧ ಮೇಹಕರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಮೇಹಕರ್ ಠಾಣೆಯ ಅಂದಿನ ಪಿಎಸ್‌ಐ ಚಂದ್ರಕಾಂತ ಅವರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ಮುಂದಿನ ತನಿಖೆಯನ್ನು ಭಾಲ್ಕಿ ಗ್ರಾಮೀಣ ಪೊಲೀಸ್ ವೃತ ನಿರೀಕ್ಷಕ ಜಿ.ಎಸ್ ಬಿರಾದಾರ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೊಷರೋಪಣಾಪಟ್ಟಿ ಸಲ್ಲಿಸಿದರು.
ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಕೆ ಕೊಮಲಾ ಅವರು ಆರೋಪಿತನಿಗೆ 20 ವರ್ಷ ಕಾರಾವಾಸ ಶಿಕ್ಷೆ ಮತ್ತು ₹5 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸಂತೋಷಕುಮಾರ ವಾದ ಮಂಡಿಸಿದ್ದರು.