ರಸ್ತೆ ಸುರಕ್ಷತೆ ನಿಯಮ ಉಲ್ಲಂಘಿಸಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಾಹನ ಚಾಲಕರಿಗೆ ಒಟ್ಟು ₹23 ಸಾವಿರ ದಂಡವನ್ನು ಬೀದರ್ ಜೆಎಂಎಫ್‌ಸಿ ನ್ಯಾಯಾಲಯ ವಿಧಿಸಿದೆ.
ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರ ವಿರುದ್ದ ಬೀದರ್ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಬಾಪುಗೌಡ ಪಾಟೀಲ್ ಅವರು ಡ್ರಿಂಕ್ ಮತ್ತು ಡ್ರೈವ್ ಅಡಿಯಲ್ಲಿ ಎರಡು ಪ್ರಕರಣಗಳು ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಬೀದರ್ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯವು ಒಬ್ಬ ಚಾಲಕನಿಗೆ ₹10,500 ಇನ್ನೋರ್ವ ಚಾಲಕನಿಗೆ ₹12,500 ದಂಡ ವಿಧಿಸಿ ಆದೇಶಿಸಿದೆ.
ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ಮತ್ತು ಅಪಘಾತದಲ್ಲಿ ಅಮಾಯಕರ ಪ್ರಾಣ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಮದ್ಯ ಸೇವಿಸಿ ವಾಹನ ಚಲಾವಣೆ ಮಾಡುತ್ತಿರುವವರ ವಿರುದ್ದ ಅಭಿಯಾನ ಹಮ್ಮಿಕೊಂಡಿದೆ.
ಇದನ್ನೂ ಓದಿ : ಬೀದರ್ | ವಚನ ಸಾಹಿತ್ಯ ಭಾರತೀಯ ತತ್ವಶಾಸ್ತ್ರ ಪರಂಪರೆಯ ಭಾಗ: ಡಾ.ಮಯೂರ ಪೂಜಾರಿ
ಸಾರ್ವಜನಿಕರು ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ, ಹೆಲ್ಮೆಟ್ ಧರಿಸಿ ಜೀವ ಕಾಪಾಡಿಕೊಳ್ಳಿ, ತಪ್ಪದೇ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.