ಬೀದರ್‌ | ಬೆಳೆ ಹಾನಿ : ರೈತರಿಗೆ ಶೀಘ್ರ ಪರಿಹಾರ ವಿತರಿಸಲು ಶಾಸಕ ಪ್ರಭು ಚವ್ಹಾಣ ಸೂಚನೆ

Date:

ಭಾರಿ ಮಳೆಯಿಂದಾಗಿ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಸಾಕಷ್ಟು ಬೆಳೆ ಹಾನಿಯಾಗಿದ್ದು, ಪ್ರತಿ ಗ್ರಾಮ ಮತ್ತು ಹೊಲಗಳಿಗೆ ಭೇಟಿ ನೀಡಿ ಸಮೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಿ ರೈತರಿಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಔರಾದ(ಬಿ) ತಾಲ್ಲೂಕು ಪಂಚಾಯತ ಕಛೇರಿ ಸಭಾಂಗಣದಲ್ಲಿ ಸೆ.12ರಂದು ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಮಳೆ ಪ್ರಮಾಣ ಮತ್ತು ಬೆಳೆಹಾನಿಯ ಬಗ್ಗೆ ಸಹಾಯಕ ಕೃಷಿ ನಿರ್ದೇಶಕರಾದ ಧೂಳಪ್ಪ‌ ವಿವರಣೆ ನೀಡಿದರು. ಸಮೀಕ್ಷೆ ಕುರಿತ ಮಾಹಿತಿಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕರು, ಜುಲೈ ಮತ್ತು ಆಗಸ್ಟ್ ನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕ್ಷೇತ್ರದಲ್ಲಿನ ಅಂದಾಜು ಒಂದು ಲಕ್ಷ ಹೆಕ್ಟೇರ್ ಕೃಷಿ ಭೂಮಿಯ ಪೈಕಿ ಸುಮಾರು 60 ಸಾವಿರ ಹೆಕ್ಟೇರ್ ಗಿಂತ ಹೆಚ್ಚು ಬೆಳೆ ಹಾನಿಯಾಗಿದೆ. ಆದರೆ 30 ಸಾವಿರ ಹೆಕ್ಟೇರ್ ಮಾತ್ರ ಸಮೀಕ್ಷೆ ಮಾಡಿರುವುದು ಸರಿಯಲ್ಲʼ ಎಂದು ಬೇಸರ ಹೊರಹಾಕಿದರು.

ನದಿ ಸಮೀಪದ ಪ್ರದೇಶ, ಹಳ್ಳ, ತಗ್ಗು ಪ್ರದೇಶದಲ್ಲಿನ ಎಲ್ಲ ಬೆಳೆಗಳು ಸಂಪೂರ್ಣ ಮುಳುಗಡೆಯಾಗಿವೆ. ಕೆರೆ-ಕಟ್ಟೆಗಳು ಒಡೆದು  ಮಣ್ಣಿನ ಸಹಿತ ಬೆಳೆಗಳು ಕೊಚ್ಚಿಕೊಂಡು ಹೋಗಿವೆ. ಬಿತ್ತನೆಯಾದ ಸೋಯಾಅವರೆ, ತೊಗರಿ, ಹತ್ತಿ ನಷ್ಟವಾಗಿದ್ದು, ಕಟಾವಿಗೆ ಬಂದಿದ್ದ ಉದ್ದು, ಹೆಸರು ಸಂಪೂರ್ಣ ಹಾಳಾಗಿದೆ. ಸಮೀಕ್ಷೆಗೆ ನಿಯೋಜಿಸಿದ ಹಲವು ಸಿಬ್ಬಂದಿ ಗ್ರಾಮಗಳಿಗೆ ಭೇಟಿ ನೀಡದೇ ಕಚೇರಿಯಲ್ಲಿ ಕುಳಿತು ವರದಿ ಸಲ್ಲಿಸುತ್ತಿದ್ದಾರೆ. ಹೀಗಾದರೆ ರೈತರ ಪರಿಸ್ಥಿತಿ ಏನಾಗಬಹುದುʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಉಪ ಜೀವನಕ್ಕೆ ಆಧಾರವಾಗಿದ್ದ ಬೆಳೆ ಕಳೆದುಕೊಂಡು ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ರೈತರ ನೆರವಿಗೆ ನಿಲ್ಲಬೇಕು. ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆಯನ್ನು ವ್ಯವಸ್ಥಿತವಾಗಿ ಮಾಡಿ ಸರ್ಕಾರಕ್ಕೆ ನಿಖರವಾದ ವರದಿ ಸಲ್ಲಿಸಿ ರೈತರಿಗೆ ಅನುಕೂಲವಾಗುಂತೆ ನೋಡಿಕೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ನಾನು ಸುಮ್ಮನಿರುವುದಿಲ್ಲʼ ಎಂದು ಎಚ್ಚರಿಸಿದರು.

ʼಬೆಳೆವಿಮೆ ನೀಡುವ ಕಂಪನಿಗಳಿಂದ ರೈತರಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ. ಔರಾದ ಕ್ಷೇತ್ರದಲ್ಲಿ ಅತಿ ಹೆಚ್ಚು ರೈತರು ಯೋಜನೆಯಡಿ ನೋಂದಣಿಯಾಗಿದ್ದಾರೆ. ಕಂಪನಿಯವರು ತಮ್ಮಷ್ಟಕ್ಕೆ ತಾವೇ ಸಮೀಕ್ಷೆ ಮಾಡದೇ ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸೇವಕರು, ಪಿಡಿಓಗಳನ್ನು ಕರೆದೊಯ್ಯಬೇಕು. ಎಲ್ಲ ರೈತರಿಗೆ ತಂತ್ರಾಂಶದ ಜ್ಞಾನ ಇರುವುದಿಲ್ಲ. ಹಾಗಾಗಿ ರೈತರಿಗೆ ಆಫ್‌ಲೈನ್ ಮೂಲಕ ಮಾಹಿತಿ ಸಲ್ಲಿಸಲು ಅವಕಾಶ ಕಲ್ಪಿಸಿ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕುʼ ಎಂದರು.

ʼಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು. ಕೆಲವು ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಸರಿಯಾಗಿ ಓದಲು ಬರೆಯಲು ಬರುತ್ತಿಲ್ಲ. ಹೀಗಾದರೆ ಫಲಿತಾಂಶ ಸುಧಾರಣೆ ಹೇಗೆ ಸಾಧ್ಯ? ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಶಿಕ್ಷಣದ ಗುಣಮಟ್ಟ ಸುಧಾರಿಸಬೇಕು. ಸರ್ಕಾರಿ ಶಾಲೆಗಳ ನಿವೇಶನ ಸಮಸ್ಯೆ ಇತ್ಯರ್ಥಪಡಿಸಬೇಕುʼ ಎಂದು ಸೂಚಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಅವ್ಯವಹಾರಗಳು ಆಗುತ್ತಿವೆ. ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರ ಸಾಮಗ್ರಿಗಳು ಸಂಪೂರ್ಣ ಕಳಪೆಯಿಂದ‌ ಕೂಡಿವೆ. ಬೆಲ್ಲ ಮತ್ತು ಪೌಡರ್ ಸೇವಿಸಲು ಯೋಗ್ಯವಾಗಿರುವುದಿಲ್ಲ. ಆದರೂ ಸಿಡಿಪಿಓ ಸುಮ್ಮನಿದ್ದಾರೆ ಎಂದು ಶಾಸಕರು ಕೋಪಗೊಂಡರು. 

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ನೇಮಕಾತಿಯಲ್ಲಿ ಇಲಾಖೆ ಸಿಬ್ಬಂದಿ ಹಣ ವಸೂಲಿಗೆ ಇಳಿದಿರುವುದು ಗಮನಕ್ಕೆ ಬಂದಿದೆ. ಅಧಿಕಾರಿಗಳು ಇಂಥವುಗಳನ್ನು ಗಂಭೀರವಾಗಿ ಪರಿಗಣಿಸಿ ಭ್ರಷ್ಟ ಸಿಬ್ಬಂದಿಯನ್ನು ಮನೆಗೆ ಕಳುಹಿಸಬೇಕುʼ ಎಂದು ಸೂಚಿಸಿದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು, ಆರೋಗ್ಯ, ತೋಟಗಾರಿಕೆ, ಪಂಚಾಯತ ರಾಜ್, ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ, ಜೆಸ್ಕಾಂ, ಅರಣ್ಯ, ರೇಷ್ಮೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಬೀದರ್‌ | ಪಿಡಿಒಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ : ಸಿಇಒ ಗಿರೀಶ ಬದೋಲೆ

ತಾಲ್ಲೂಕು ಪಂಚಾಯತ ಆಡಳಿತಾಧಿಕಾರಿ ಸೂರ್ಯಕಾಂತ ಬಿರಾದಾರ, ತಹಸೀಲ್ದಾರರಾದ ಮಹೇಶ ಪಾಟೀಲ, ರಮೇಶ ಪೆದ್ದೆ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ, ಹಣಮಂತರಾವ ಕೌಟಗೆ, ಪೊಲೀಸ್ ವೃತ್ತ ನಿರೀಕ್ಷಕ ರಘುವೀರಸಿಂಗ್ ಠಾಕೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಗಾಂಧೀಜಿ ಅಹಿಂಸಾ ತತ್ವ ಬದುಕಿನಲ್ಲಿ ಅನುಸರಿಸಿ : ಮಲ್ಲಿಕಾರ್ಜುನ ಹಲ್ಮಂಡಗೆ

ಭಾಲ್ಕಿಯ ನಿರ್ಮಲಾ ಹಲ್ಮಂಡಗೆ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಅವರ 157ನೇ...

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ಬೀದರ್‌ | ಎಚ್‌ಐವಿ ಬಾಧಿತರು ಆತಂಕಕ್ಕೊಳಗಾಗದೆ ನಿಯಮಿತ ಔಷಧಿ ಸೇವಿಸಿ

ಎಚ್‌ಐವಿ ಬಾಧಿತರು ಯಾವುದೇ ರೀತಿಯ ಭಯ, ಆತಂಕಕ್ಕೆ ಒಳಗಾಗದೆ ವೈದ್ಯರ ಸಲಹೆಯಂತೆ...