ಬೀದರ್‌ ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ʼಬೀದರ್‌ ದರ್ಶನʼ ವಿಶೇಷ ಬಸ್‌ಗೆ ಚಾಲನೆ

Date:

Advertisements

ಬೀದರ್‌ ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ಶನಿವಾರ ಬೀದರ ನಗರದ ಕೋಟೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅವರು ಪ್ರಸ್ತುತಪಡಿಸಿರುವ ವಿನೂತನ ಪ್ರವಾಸ ಕಾರ್ಯಕ್ರಮ ‘ಬೀದರ ದರ್ಶನ’ ಒಂದು ದಿನದ ಪ್ರೇಕ್ಷಣೀಯ ಸ್ಥಳಗಳ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ʼಬೀದರ ಜಿಲ್ಲೆಯಲ್ಲಿರುವ ಐತಿಹಾಸಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಪರಿಸರ ಪ್ರವಾಸಿ ತಾಣಗಳಾದ ಬೀದರ ಕೋಟೆ, ಗುರುದ್ವಾರ, ಬರಿದ್ ಶಾಹಿ ಉದ್ಯಾನವನ, ಪಾಪನಾಶ ದೇವಸ್ಥಾನ, ಝರಣಿ ನರಸಿಂಹ ದೇವಸ್ಥಾನ, ಅಷ್ಟೂರ ಟೊಂಬ್ಸ್ ಮತ್ತು ಚೌಖಂಡಿ, ಬ್ಯಾಕ್ ಬಕ್ ಸಪಾರಿ, ಬಸವಕಲ್ಯಾಣದ ಅನುಭವ ಮಂಟಪ, ಬಸವಕಲ್ಯಾಣ ಕೋಟೆ, ಭಾಲ್ಕಿ ಕೋಟೆ, ಹುಮನಾಬಾದ ವಿರಭದ್ರೇಶ್ವರ ದೇವಸ್ಥಾನ, ಚಳಕಾಪುರ ಸಿದ್ಧಾರೂಢ ಮಠ, ಹನುಮಾನ ದೇವಸ್ಥಾನ ಸೇರಿದಂತೆ ಹಲವು ತಾಣಗಳಿಗೆ ಭೇಟಿ ನೀಡಲು ಈ ಬಸ್ ಸೌಲಭ್ಯ ಅನುಕೂಲ ಮಾಡಲಿದೆʼ ಎಂದರು.

Advertisements

ʼಪ್ರವಾಸಿಗರು ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು, ವಯಸ್ಕರಿಗೆ ₹685 ಮತ್ತು ಶಾಲಾ ಮಕ್ಕಳಿಗೆ ₹400 ಟಿಕೆಟ್ ದರ ಇರುತ್ತದೆ. ರಾಜ್ಯ ಮತ್ತು ಜಿಲ್ಲೆಯ ಪ್ರವಾಸಿಗರಿಗೆ ಬಹಳ ಅನುಕೂಲವಾಗಲಿದ್ದು, ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆʼ ಎಂದರು.

ಪ್ರವಾಸಿ ಬಸ್‌ ವೇಳಾಪಟ್ಟಿ ಹೀಗಿದೆ :

ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಮಾತನಾಡಿ, ʼಪ್ರತಿದಿನ ಪ್ರವಾಸಿ ಬಸ್ ಬರಿದ್ ಶಾಹಿ ಉದ್ಯಾನವನದಿಂದ ಆರಂಭವಾಗಲಿದೆ, 6:30 ಪ್ರಾರಂಭವಾಗಿ 7:30ಕ್ಕೆ ಬ್ಲಾಕ್ ಬಕ್ ಸಪಾರಿ, 9:30ಕ್ಕೆ ಝರಣಾ, 11:30ಕ್ಕೆ ಅಷ್ಟೂರ ಟೊಂಬ್ಸ್ ಮತ್ತು ಚೌಖಂಡಿ, 1:30ಕ್ಕೆ ಗುರುನಾನಕ, 2:30 ಊಟದ ವಿರಾಮ, 4:30ಕ್ಕೆ ಬರಿದ್ ಶಾಹಿ ಉದ್ಯಾನ, 5:30ಕ್ಕೆ ಪಾಪನಾಶ ದೇವಸ್ಥಾನ, 6:30ಕ್ಕೆ ಮುಕ್ತಾಯವಾಗಲಿದೆ. ನೊಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗೆ (9845624001) ಸಂಪರ್ಕಿಸಬಹುದುʼ ಎಂದರು.

ಇದನ್ನೂ ಓದಿ : ಬೀದರ್‌ | ʼಗೃಹ ಆರೋಗ್ಯʼ ಯೋಜನೆಗೆ ಚಾಲನೆ; ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ : ಸಚಿವ ಈಶ್ವರ ಖಂಡ್ರೆ

ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿ ಅನುರುದ್ಧ ದೇಸಾಯಿ, ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ ಮ್ಯಾನೇಜರ್ ಶಿವಕುಮಾರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X