ಬೀದರ್ | ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Date:

ತಂದೆ ಹಾಗೂ ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಭಾಲ್ಕಿ ತಾಲೂಕಿನ ಮೂರೂರು ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಜರುಗಿದೆ.

- Advertisement -

ಬೀದರ್ ನಗರದ ಮೈಲೂರು ಬಡಾವಣೆಯ ನಿವಾಸಿಗಳಾದ ತಿಪ್ಪಣ್ಣ (ಶಿವಮೂರ್ತಿ) (45) ಅವರ ಮಕ್ಕಳಾದ ಶ್ರೀಶಾಂತ್ (9), ರಿತೀಕ್ (7) ಹಾಗೂ ರಾಕೇಶ (7 ತಿಂಗಳು) ಮೃತರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮೃತ ಶಿವಮೂರ್ತಿ ಅವರ ಪತ್ನಿ ರಮಾಬಾಯಿ ತಮ್ಮ ನಾಲ್ಕು ಜನ ಮಕ್ಕಳೊಂದಿಗೆ ಕಾಲುವೆಗೆ ಹಾರಿದ್ದಾರೆ ಎನ್ನಲಾಗಿದೆ. ತಂದೆ ಶಿವಮೂರ್ತಿ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಪತ್ನಿ ರಮಾಬಾಯಿ (35) ಹಾಗೂ ಮಗ ಶ್ರೀಕಾಂತ್ (7) ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಮೂಲತಃ ಬೀದರ್ ತಾಲೂಕಿನ ಸಂಗೊಳಗಿ ಗ್ರಾಮದವರಾದ ಶಿವಮೂರ್ತಿ ಅವರು ಹಲವು ವರ್ಷಗಳಿಂದ ಮೈಲೂರುನಲ್ಲಿ ವಾಸವಿದ್ದರು. ಮೃತ ಶಿವಮೂರ್ತಿ ಟಿ.ವಿ. ಮೆಕಾನಿಕ್ ಕೆಲಸ ಮಾಡುತ್ತಿದ್ದರು ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

ಸಹೋದರರ ಆಸ್ತಿ ವಿವಾದ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಧನ್ನೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ಬೀದರ್‌ | ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಪ್ರತಿಭಟನೆ

ವಿಷಯ ತಿಳಿದು ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...