ಬೀದರ್‌ | ಅರ್ಥಪೂರ್ಣ ʼಕಲ್ಯಾಣ ಕರ್ನಾಟಕ ಉತ್ಸವʼ ಆಚರಣೆಗೆ ನಿರ್ಧಾರ : ಡಿಸಿ ಶಿಲ್ಪಾ ಶರ್ಮಾ

Date:

ಪ್ರತಿ ವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

- Advertisement -

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ, ʼ ವಿವಿಧ ಇಲಾಖೆಯ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದ ಅವರು, ಸೆಪ್ಟೆಂಬರ್ 17ರಂದು ಬೆಳಿಗ್ಗೆ 7:45 ಗಂಟೆಗೆ ಎಲ್ಲಾ ಸರಕಾರಿ ಹಾಗೂ ಅರೆ ಸರಕಾರಿ ಕಚೇರಿ ಮತ್ತು ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ʼಅಂದು ಬೆಳಿಗ್ಗೆ 8:15 ಗಂಟೆಗೆ ಬೀದರ್ ನಗರದ ಬಸವೇಶ್ವರ ವೃತ್ತದಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಭಾವಚಿತ್ರದೊಂದಿಗೆ ಮೆರವಣಿಗೆ ಮೂಲಕ ಭಗತ್ ಸಿಂಗ್ ವೃತ್ತ, ಅಂಬೇಡ್ಕರ್ ವೃತ್ತ, ಜನರಲ್ ಕರಿಯಪ್ಪ ವೃತ್ತದ ಮಾರ್ಗವಾಗಿ ಜಿಲ್ಲಾ ನೆಹರು ಕ್ರೀಡಾಂಗಣಕ್ಕೆ ತೆರಳಬೇಕು. ಬಳಿಕ 9 ಗಂಟೆಗೆ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯುತ್ತದೆ. ಸೆಪ್ಟೆಂಬರ್ 16 ಮತ್ತು 17 ರಂದು ಎಲ್ಲಾ ಸರಕಾರಿ ಕಚೇರಿಗಳ ಮೇಲೆ ದೀಪಾಲಂಕಾರ ಮಾಡಬೇಕುʼ ಎಂದು ತಿಳಿಸಿದರು.

ʼಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಒಂದು ಸಮಿತಿಯನ್ನು ರಚಿಸಲಾಗಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಮಳೆಯಿಂದ ಸಮಸ್ಯೆ ಆಗದಂತೆ ಮತ್ತು ವೇದಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ನಗರಸಭೆ ವತಿಯಿಂದ ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕುʼ ಎಂದು ನಿರ್ದೇಶಿಸಿದರು.

ʼಶಿಕ್ಷಣ ಇಲಾಖೆ ವತಿಯಿಂದ ಕಲ್ಯಾಣ ಕರ್ನಾಟಕ ವಿಮೋಚನೆಗೆ ಸಂಬಂಧಿಸಿದಂತೆ ಪ್ರಬಂಧ, ನಿಬಂಧ, ಭಾಷಣ, ವೇಷಭೂಷಣ ಸ್ಪರ್ಧೆಗಳನ್ನು ಆಯಾ ಶಾಲಾ-ಕಾಲೇಜುಗಳಲ್ಲಿ ಏರ್ಪಡಿಸುವುದು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕುʼ ಎಂದು ಹೇಳಿದರು.

ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ದಿನಾಚರಣೆಗೆ ಸಂಬಂಧಿಸಿದಂತೆ ತಮ್ಮ ಸಲಹೆಗಳನ್ನು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ನಿರಂತರ ಅಧ್ಯಯನದಿಂದ ಶಿಕ್ಷಕ ವೃತ್ತಿ ಯಶಸ್ವಿ : ಕಿರಣ ಗಾಜನೂರು

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಬೀದರ ಸಹಾಯಕ ಆಯುಕ್ತ ಎಂ.ಡಿ.ಶಕೀಲ್, ನಗರಸಭೆ ಆಯುಕ್ತ ಶಿವರಾಜ ರಾಥೋಡ್, ಡಿವೈಎಸ್ಪಿ ಶಿವನಗೌಡ ಪಾಟೀಲ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಪ್ರೊ.ಜಗನ್ನಾಥ ಹೆಬ್ಬಾಳೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...