ಬೀದರ್‌ | ಬಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ಸಿಎಂ ಬಳಿಗೆ ನಿಯೋಗ ತೆರಳಲು ನಿರ್ಧಾರ

Date:

Advertisements

ದುರಾಡಳಿತದ ಫಲವಾಗಿ ಕಾರ್ಮಿಕರ ವೇತನ ಹಾಗೂ ವಿವಿಧ ಬ್ಯಾಂಕ್‌ಗಳ ಸುಮಾರು ₹430 ಕೋಟಿಗೂ ಅಧಿಕ ಬಾಕಿ ಉಳಿಸಿಕೊಂಡು ಪ್ರಸ್ತುತ ಸ್ಥಗಿತಗೊಂಡಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ)ಯಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಸಚಿವರಾದ ಈಶ್ವರ ಬಿ. ಖಂಡ್ರೆ ಮತ್ತು ರಹೀಂ ಖಾನ್ ಒತ್ತಾಯಿಸಿದ್ದಾರೆ.

ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ಗುರುವಾರ ನಡೆದ ಹುಮನಾಬಾದ್‌ ತಾಲ್ಲೂಕಿನ ಹಳ್ಳಿಖೇಡ(ಬಿ)ನ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸುವ ಮತ್ತು ಕಾರ್ಖಾನೆಯು ವಿವಿಧ ಸಹಕಾರಿ ಬ್ಯಾಂಕ್‌ನಿಂದ ಪಡೆದಿರುವ ಸಾಲದ ಮರುಪಾವತಿ ಕುರಿತ ಸಭೆಯಲ್ಲಿ ಚರ್ಚಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, ʼಈ ಹಿಂದೆಯೂ ಬಿಎಸ್‌ಎಸ್‌ಕೆ ಅವ್ಯವಹಾರದ ಬಗ್ಗೆ ತನಿಖೆಗೆ ಆದೇಶ ಆಗಿದೆ. ಆದರೆ, ತಾರ್ಕಿಕ ಅಂತ್ಯ ಕಂಡಿಲ್ಲ. ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರಿಗೆ ದಂಡನೆ ಆಗಬೇಕುʼ ಎಂದು ಆಗ್ರಹಿಸಿದರು.

Advertisements

ʼಕಾರ್ಖಾನೆ ಡಿಸಿಸಿ ಬ್ಯಾಂಕ್‌ನಿಂದ ₹115 ಕೋಟಿ ಸಾಲ ಪಡೆದಿದೆ. ಬಡ್ಡಿ ಸೇರಿ ₹233 ಕೋಟಿ ಬಾಕಿ ಪಾವತಿಸಬೇಕಿದೆ. ಕಾರ್ಖಾನೆ ಮತ್ತು ಡಿಸಿಸಿ ಬ್ಯಾಂಕ್ ಎರಡೂ ರೈತರದ್ದೇ ಆಗಿದೆ. ಬೆಟ್ಟದಷ್ಟು ಸಾಲದ ಹೊರೆ ಇದ್ದು, ಸಕ್ಕರೆ ಕಾರ್ಖಾನೆಯೂ ಮುಚ್ಚಿದೆ. ಬ್ಯಾಂಕ್ ಕೂಡ ಚೇತರಿಸಿಕೊಳ್ಳದಂತಾಗಿದೆ. ಈ ನಿಟ್ಟಿನಲ್ಲಿ ಕಾರ್ಖಾನೆಯ ಪುನಶ್ಚೇತನ ಕುರಿತಂತೆ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಬೇಕುʼ ಎಂದು ಸಲಹೆ ನೀಡಿದರು.

ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿ, ʼಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ಮಾಡಿದವರ ವಿರುದ್ಧ ಕ್ರಮ ಆಗದಿದ್ದರೆ ಮತ್ತೆ ಅವರೇ ಚುನಾಯಿಸಿ ಬಂದು ಕಾರ್ಖಾನೆಯನ್ನು ನಾಶ ಮಾಡುತ್ತಾರೆ. ಈ ಬಗ್ಗೆ ತನಿಖೆ ಆಗಿ ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮ ಆಗಬೇಕುʼ ಎಂದರು.

WhatsApp Image 2025 06 26 at 4.08.10 PM
ಸಭೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು.

ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ, ʼಕಾರ್ಖಾನೆಯ ಸ್ವಾಧೀನದಲ್ಲಿರುವ 173 ಎಕರೆ ಜಮೀನಿನ ಪೈಕಿ ಕಾರ್ಖಾನೆಗೆ ಬೇಕಾದಷ್ಟು ಜಾಗ ಇಟ್ಟುಕೊಂಡು ಭಾಗಶಃ ಮಾರಾಟ ಮಾಡಿ, ಬ್ಯಾಂಕ್‌ಗಳ ಸಾಲ ತೀರಿಸಿ, ಯಂತ್ರೋಪಕರಣಗಳಿಗೆ ಹೊಸ ಸಾಲ ಪಡೆದು ಕಾರ್ಖಾನೆ ಆರಂಭಿಸಲು ಸಾಧ್ಯವೇ ಎಂಬ ಬಗ್ಗೆ ಪರಿಶೀಲಿಸಬೇಕುʼ ಎಂದು ಸಲಹೆ ನೀಡಿದರು.

ಓಟಿಎಸ್ ಯೋಜನೆಯಡಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಮತ್ತು ಖಾಸಗಿಯವರಿಗೆ ಗುತ್ತಿಗೆ ನೀಡಿ ಸಕ್ಕರೆ ಕಾರ್ಖಾನೆ ಪುನಾರಂಭ ಮಾಡುವ ಬಗ್ಗೆ ಪರಿಶೀಲಿಸುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸಲಹೆ ನೀಡಿದರು.

ಬೀದರ್ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಸಹಕಾರಿ ಸಕ್ಕರೆ ಕಾರ್ಖಾನೆ ಪುನಾರಂಭಕ್ಕಾಗಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ಮತ್ತು ಕಾರ್ಖಾನೆಯ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಅಧಿಕಾರಸ್ಥರು ಅನ್ನ ತಿನ್ನುವವರೇ ಆದರೆ, ಭೂ ಸ್ವಾಧೀನ ಕೈಬಿಡಲಿ

ಸಭೆಯಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಚಂದ್ರಶೇಖರ ಪಾಟೀಲ್, ಎಂ.ಜಿ.ಮುಳೆ, ಮಾಜಿ ಸಚಿವ ರಾಜಶೇಖರ ಪಾಟೀಲ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ್ ಬಿ. ಖಂಡ್ರೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X