ಬೀದರ್‌ | ಬಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ಸಿಎಂ ಬಳಿಗೆ ನಿಯೋಗ ತೆರಳಲು ನಿರ್ಧಾರ

Date:

ದುರಾಡಳಿತದ ಫಲವಾಗಿ ಕಾರ್ಮಿಕರ ವೇತನ ಹಾಗೂ ವಿವಿಧ ಬ್ಯಾಂಕ್‌ಗಳ ಸುಮಾರು ₹430 ಕೋಟಿಗೂ ಅಧಿಕ ಬಾಕಿ ಉಳಿಸಿಕೊಂಡು ಪ್ರಸ್ತುತ ಸ್ಥಗಿತಗೊಂಡಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ)ಯಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಸಚಿವರಾದ ಈಶ್ವರ ಬಿ. ಖಂಡ್ರೆ ಮತ್ತು ರಹೀಂ ಖಾನ್ ಒತ್ತಾಯಿಸಿದ್ದಾರೆ.

- Advertisement -

ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ಗುರುವಾರ ನಡೆದ ಹುಮನಾಬಾದ್‌ ತಾಲ್ಲೂಕಿನ ಹಳ್ಳಿಖೇಡ(ಬಿ)ನ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸುವ ಮತ್ತು ಕಾರ್ಖಾನೆಯು ವಿವಿಧ ಸಹಕಾರಿ ಬ್ಯಾಂಕ್‌ನಿಂದ ಪಡೆದಿರುವ ಸಾಲದ ಮರುಪಾವತಿ ಕುರಿತ ಸಭೆಯಲ್ಲಿ ಚರ್ಚಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, ʼಈ ಹಿಂದೆಯೂ ಬಿಎಸ್‌ಎಸ್‌ಕೆ ಅವ್ಯವಹಾರದ ಬಗ್ಗೆ ತನಿಖೆಗೆ ಆದೇಶ ಆಗಿದೆ. ಆದರೆ, ತಾರ್ಕಿಕ ಅಂತ್ಯ ಕಂಡಿಲ್ಲ. ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರಿಗೆ ದಂಡನೆ ಆಗಬೇಕುʼ ಎಂದು ಆಗ್ರಹಿಸಿದರು.

ʼಕಾರ್ಖಾನೆ ಡಿಸಿಸಿ ಬ್ಯಾಂಕ್‌ನಿಂದ ₹115 ಕೋಟಿ ಸಾಲ ಪಡೆದಿದೆ. ಬಡ್ಡಿ ಸೇರಿ ₹233 ಕೋಟಿ ಬಾಕಿ ಪಾವತಿಸಬೇಕಿದೆ. ಕಾರ್ಖಾನೆ ಮತ್ತು ಡಿಸಿಸಿ ಬ್ಯಾಂಕ್ ಎರಡೂ ರೈತರದ್ದೇ ಆಗಿದೆ. ಬೆಟ್ಟದಷ್ಟು ಸಾಲದ ಹೊರೆ ಇದ್ದು, ಸಕ್ಕರೆ ಕಾರ್ಖಾನೆಯೂ ಮುಚ್ಚಿದೆ. ಬ್ಯಾಂಕ್ ಕೂಡ ಚೇತರಿಸಿಕೊಳ್ಳದಂತಾಗಿದೆ. ಈ ನಿಟ್ಟಿನಲ್ಲಿ ಕಾರ್ಖಾನೆಯ ಪುನಶ್ಚೇತನ ಕುರಿತಂತೆ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಬೇಕುʼ ಎಂದು ಸಲಹೆ ನೀಡಿದರು.

ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿ, ʼಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ಮಾಡಿದವರ ವಿರುದ್ಧ ಕ್ರಮ ಆಗದಿದ್ದರೆ ಮತ್ತೆ ಅವರೇ ಚುನಾಯಿಸಿ ಬಂದು ಕಾರ್ಖಾನೆಯನ್ನು ನಾಶ ಮಾಡುತ್ತಾರೆ. ಈ ಬಗ್ಗೆ ತನಿಖೆ ಆಗಿ ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮ ಆಗಬೇಕುʼ ಎಂದರು.

WhatsApp Image 2025 06 26 at 4.08.10 PM
ಸಭೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು.

ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ, ʼಕಾರ್ಖಾನೆಯ ಸ್ವಾಧೀನದಲ್ಲಿರುವ 173 ಎಕರೆ ಜಮೀನಿನ ಪೈಕಿ ಕಾರ್ಖಾನೆಗೆ ಬೇಕಾದಷ್ಟು ಜಾಗ ಇಟ್ಟುಕೊಂಡು ಭಾಗಶಃ ಮಾರಾಟ ಮಾಡಿ, ಬ್ಯಾಂಕ್‌ಗಳ ಸಾಲ ತೀರಿಸಿ, ಯಂತ್ರೋಪಕರಣಗಳಿಗೆ ಹೊಸ ಸಾಲ ಪಡೆದು ಕಾರ್ಖಾನೆ ಆರಂಭಿಸಲು ಸಾಧ್ಯವೇ ಎಂಬ ಬಗ್ಗೆ ಪರಿಶೀಲಿಸಬೇಕುʼ ಎಂದು ಸಲಹೆ ನೀಡಿದರು.

ಓಟಿಎಸ್ ಯೋಜನೆಯಡಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಮತ್ತು ಖಾಸಗಿಯವರಿಗೆ ಗುತ್ತಿಗೆ ನೀಡಿ ಸಕ್ಕರೆ ಕಾರ್ಖಾನೆ ಪುನಾರಂಭ ಮಾಡುವ ಬಗ್ಗೆ ಪರಿಶೀಲಿಸುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸಲಹೆ ನೀಡಿದರು.

ಬೀದರ್ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಸಹಕಾರಿ ಸಕ್ಕರೆ ಕಾರ್ಖಾನೆ ಪುನಾರಂಭಕ್ಕಾಗಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ಮತ್ತು ಕಾರ್ಖಾನೆಯ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಅಧಿಕಾರಸ್ಥರು ಅನ್ನ ತಿನ್ನುವವರೇ ಆದರೆ, ಭೂ ಸ್ವಾಧೀನ ಕೈಬಿಡಲಿ

ಸಭೆಯಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಚಂದ್ರಶೇಖರ ಪಾಟೀಲ್, ಎಂ.ಜಿ.ಮುಳೆ, ಮಾಜಿ ಸಚಿವ ರಾಜಶೇಖರ ಪಾಟೀಲ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ್ ಬಿ. ಖಂಡ್ರೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...