ಬೀದರ್‌ | ವಿದ್ಯುತ್‌ ಗುತ್ತಿಗೆದಾರರ ಬೇಡಿಕೆಗೆ ಸ್ಪಂದಿಸುವಂತೆ ಆಗ್ರಹ

Date:

ದೊಡ್ಡ ಗುತ್ತಿಗೆ ರದ್ದು ಪಡಿಸುವುದು ಸೇರಿದಂತೆ ಸುಮಾರು 14 ಬೇಡಿಕೆ ಈಡೇರಿಸುವಂತೆ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಭಾಲ್ಕಿ ತಾಲೂಕು ಘಟಕ ಒತ್ತಾಯಿಸಿದೆ.

ಬೀದರ್‌ ಜಿಲ್ಲೆ ಭಾಲ್ಕಿ ಪಟ್ಟಣದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಯಲ್ಲಿ ಗುತ್ತಿಗೆದಾರರ ಸಂಘದ ಕಾರ್ಯಕರ್ತರು ಎಇಇ ಮೂಲಕ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

“ವಿದ್ಯುತ್ ಕಂಪನಿಗಳ ಹಿರಿಯ ಅಧಿಕಾರಿಗಳು ವಿದ್ಯುತ್ ಕಾಮಗಾರಿಗಳನ್ನು ದೊಡ್ಡ-ದೊಡ್ಡ ಏಜೆನ್ಸಿಗಳಿಗೆ ನೀಡುವ ಮೂಲಕ ಇಲ್ಲಿನ ಸ್ಥಳೀಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗುತ್ತಿದೆ” ಎಂದು ದೂರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಗುತ್ತಿಗೆದಾರರಿಗೆ ₹5 ಲಕ್ಷದವರೆಗೆ ತುಂಡು ಗುತ್ತಿಗೆ ನೀಡಬೇಕು. ಪೂರ್ಣಗೊಂಡ ಎಲ್ಲ ಕಾಮಗಾರಿಗಳ ಬಿಲ್ ಕೂಡಲೇ ಪಾವತಿಸಬೇಕು. ಮೀಟರ್ ಔಟ್‌ಲೆಟ್‌ಗಳಲ್ಲಿ ಸರಿಯಾದ ಸಮಯಕ್ಕೆ ವಿದ್ಯುತ್ ಮಾಪಕಗಳು ದೊರೆಯದ ಕಾರಣ ಹೊಸ ವಿದ್ಯುತ್ ಸಂಪರ್ಕ ಪಡೆಯಲು ಗ್ರಾಹಕರಿಗೆ ತುಂಬಾ ತೊಂದರೆಯಾಗಿದೆ. ಕಾರಣ ವಿದ್ಯುತ್ ಮಾಪಕಗಳನ್ನು ಸರಿಯಾದ ಸಮಯಕ್ಕೆ ವಿತರಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಕುಟುಂಬದ ಆರ್ಥಿಕ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ದೊಡ್ಡದು: ಅನಿತಾ ಡಿಸೋಜಾ

ಈ ಸಂದರ್ಭದಲ್ಲಿ ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮುರಳಿ ಪೊದ್ದಾರ್, ಪ್ರಮುಖರಾದ ಶೈಲೇಶ ಚಳಕಾಪೂರೆ, ರಾಹೀಲ್ ಪಾಶಾ, ದತ್ತು ಪಾಟೀಲ್, ರಾಜು ರಾಠೋಡ್, ಸಿದ್ದು, ವಿಲಾಸ ರಾಠೋಡ್, ಸೋಮನಾಥ ಟೋಕರೆ, ಶರಣಕುಮಾರ ಭೋರಾಳೆ, ಪ್ರಕಾಶ್, ವಿಜಯಕುಮಾರ ಕಣಜಿ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಎಂಟಿಸಿ | 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಸುಮಾರು 2,500...

ದಾವಣಗೆರೆ | ಗೌರವಧನ ಹೆಚ್ಚಳಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿಯವರ ಗಮನಕ್ಕೆ ತರುವಂತೆ...

ದಾವಣಗೆರೆ | ಎರಡು ಕ್ವಿಂಟಲ್ ಬೆಳ್ಳುಳ್ಳಿ ಕದ್ದ ಕಳ್ಳರು; ರೈತ ಕಂಗಾಲು

ಈವರೆಗೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಡಿಕೆ, ತೆಂಗಿನಕಾಯಿಗಳನ್ನು ಕುದಿಯುತ್ತಿದ್ದ ಕಳ್ಳರು, ಈಗ...

ಮೈಸೂರು | ಸ್ಥಳೀಯರ ಬೇಡಿಕೆಗೆ ಮಣಿದ ಎಂಸಿಸಿ; ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಕಾರ್ಯಾರಂಭ

ಮೈಸೂರು ನಗರದ ಹೊರವಲಯದಲ್ಲಿರುವ ಆರ್ ಆರ್ ನಗರ, ದಟ್ಟಗಳ್ಳಿ, ಬೋಗಾದಿ ಮತ್ತು...