ಬೀದರ್‌ | ಬೆಳೆ ಸಮೀಕ್ಷೆದಾರರಿಗೆ ಸೇವಾ ಭದ್ರತೆ ಒದಗಿಸಲು ಒತ್ತಾಯ

Date:

ರಾಜ್ಯದ ಬೆಳೆ ಸಮೀಕ್ಷೆದಾರರಿಗೆ (ಪಿಆರ್) ಕಾಯಂಗೊಳಿಸಬೇಕು ಮತ್ತು ಜೀವವಿಮೆ ಹಾಗೂ ಸೇವಾ ಭದ್ರತೆ ನೀಡಬೇಕು ಎಂದು ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದ ಮುಖಂಡರು ಬೀದರ್‌ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರಿಗೆ ಮನವಿ ಸಲ್ಲಿಸಿದರು.

- Advertisement -

ʼರಾಜ್ಯದಲ್ಲಿ 7-8 ವರ್ಷಗಳಿಂದ ಬೆಳೆ ಸಮೀಕ್ಷೆದಾರರೆಂದು ಸೇವೆ ಸಲ್ಲಿಸುತ್ತಾ ಬರಲಾಗಿದೆ. ಸೇವೆ ಸಲ್ಲಿಸುತ್ತಿರುವಾಗ ಹೊಲದಲ್ಲಿಹಾವು, ಚೇಳು ಕಚ್ಚಿರುತ್ತವೆ ಹಾಗೂ ಕಾಡು ಹಂದಿಗಳು, ದಾಳಿಯಿಂದ ಗಾಯಗೊಂಡ ಘಟನೆಗಳು ಜರುಗಿವೆ. ಆದರೂ ರೈತರ ಏಳಿಗೆಗಾಗಿ ಹಲವು ಅಡಚಣೆಗಳ ಮಧ್ಯೆಯೂ ಸಮೀಕ್ಷೆ ಕೈಗೊಳ್ಳುತ್ತಿದ್ದೇವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ʼರೈತರಿಗೆ ಸರ್ಕಾರದ ಸೌಲಭ್ಯಗಳಾದ ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಸೇರಿದಂತೆ ಹಲವು ಯೋಜನೆಗಳಿಗಾಗಿ ನಾವು ಜೀವದ ಆಸೆ ಬಿಟ್ಟು ಶ್ರದ್ಧೆಯಿಂದ ಸೇವೆ ಮಾಡುತ್ತಿದ್ದೇವೆ. ಸಮೀಕ್ಷೆ ಮಾಡುವಾಗ ಕೆಲವು ರೈತರು ನೀವು ಯಾರೆಂದು ಪ್ರಶ್ನೆ ಮಾಡುತ್ತಾರೆ. ಕೆಲವೊಮ್ಮೆ ಅವಾಚ್ಯ ಶಬ್ದಗಳಿಂದ ಬೈಯ್ಯುತ್ತಾರೆʼ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸರ್ಕಾರವಾಗಲಿ, ಅಧಿಕಾರಿಗಳಾಗಲಿ ಯಾರೂ ನಮ್ಮ ಸಂಕಷ್ಟಗಳಿಗೆ ಕಿವಿಗೊಡುತ್ತಿಲ್ಲ. ಈಗಲಾದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಬೆಳೆ ಸಮೀಕ್ಷೆದಾರರಿಗೆ ಜೀವ ವಿಮೆ, ಸೇವಾ ಭದ್ರತೆ ನೀಡಿ ಕಾಯಂಗೊಳಿಸಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ʼಅಕ್ಕ ಕೆಫೆʼ ಮಹಿಳಾ ಸಬಲೀಕರಣಕ್ಕೆ ದಾರಿಯಾಗಲಿದೆ : ಸಚಿವ ಈಶ್ವರ ಖಂಡ್ರೆ

ಈ ಸಂದರ್ಭದಲ್ಲಿ ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲಾಧ್ಯಕ್ಷ ಮೋಹನ ಮಾನೆ, ಬೀದರ್‌ ತಾಲೂಕಾಧ್ಯಕ್ಷ ಶಿವಕುಮಾರ್‌ ಶಿವಗೊಂಡ ಹಾಗೂ ಲಕ್ಷ್ಮಣ ಮರಖಲ್‌, ನರಸಗೊಂಡ ಮಿರ್ಜಾಪುರ, ಶಿವಕುಮಾರ್‌ ಧುಮಸಪುರ, ಮುಶಾ ಪಟೇಲ್‌, ಸಂತೋಷ ಠಾಕೂರ್‌ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ...

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...