ಬೀದರ್‌ | ನಶೆ, ಭಿಕ್ಷಾಟನೆ ಮುಕ್ತ ಜಿಲ್ಲೆಗೆ ಸಂಕಲ್ಪ : ಅಬ್ದುಲ್‌ ಖದೀರ್

Date:

ಬೀದರ್ ಜಿಲ್ಲೆಯನ್ನು ನಶೆ, ಭಿಕ್ಷಾಟನೆ ಹಾಗೂ ದ್ವೇಷ ಮುಕ್ತಗೊಳಿಸಲು ಬೀದರ್ ನಾಗರಿಕ ಸನ್ಮಾರ್ಗ ಸಮಿತಿ ಸಂಕಲ್ಪ ತೊಟ್ಟಿದೆ ಎಂದು ಸಮಿತಿಯ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಹೇಳಿದರು.

- Advertisement -

ಬೀದರ್ ನಗರದ ಜಿಲ್ಲಾ ಕನ್ನಡ ಭವನದಲ್ಲಿ‌ ಸಮಿತಿ ವತಿಯಿಂದ ಶುಕ್ರವಾರ ದುಶ್ಚಟಗಳ ನಿಯಂತ್ರಣ ಕುರಿತಾಗಿ ನಡೆದ ಸಂಘ-ಸಂಸ್ಥೆಗಳು ಹಾಗೂ ಸಮಾಜದ ಗಣ್ಯರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿ, ʼಹಿರಿಯರ ಮಾರ್ಗದರ್ಶನದಲ್ಲಿ ಜಿಲ್ಲೆಯ ಪ್ರತಿ ಗ್ರಾಮದಲ್ಲೂ ಯುವಕರ ಸಮಿತಿ ರಚಿಸಲು ನಿರ್ಧರಿಸಲಾಗಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ʼಗುಟ್ಕಾ, ಸಿಗರೇಟ್, ಸಾರಾಯಿ ಸೇವನೆ, ಅತಿಯಾದ ಮೊಬೈಲ್ ಬಳಕೆ ಹಾಗೂ ಭಿಕ್ಷಾಟನೆ ಸಮಾಜದ ಪಿಡುಗುಗಳಾಗಿವೆ. ಯುವಕರೇ ದೇಶದ ಸಂಪತ್ತು ಆಗಿದ್ದು, ಮಾದಕ ವಸ್ತುಗಳು ಹಾಗೂ ಮೊಬೈಲ್ ವ್ಯಸನದಿಂದ 25–30 ವರ್ಷದೊಳಗಿನ ಯುವಕರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಹಣ ವ್ಯರ್ಥ ಮಾಡಿ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದು, ಕುಟುಂಬಕ್ಕೂ ಭಾರವಾಗುತ್ತಿದ್ದಾರೆʼ ಎಂದು ಕಳವಳ ವ್ಯಕ್ತಪಡಿಸಿದರು.

ʼಯುವಕರು ರೋಗಪೀಡಿತರಾದರೆ ದೇಶ ಬಲಹೀನವಾಗುತ್ತದೆ. ಯುವಕರನ್ನು ದುಶ್ಚಟಗಳಿಂದ ಮುಕ್ತಗೊಳಿಸಿ ದೇಶವನ್ನು ಶಕ್ತಿಶಾಲಿ ಮಾಡುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಸಮಾಜದಲ್ಲಿ ಕೆಟ್ಟದ್ದನ್ನು ನಿಲ್ಲಿಸಿ ಒಳ್ಳೆಯದನ್ನು ಹರಡುವುದು, ಪ್ರೀತಿ–ವಿಶ್ವಾಸ–ಸಹೋದರತ್ವದ ವಾತಾವರಣ ನಿರ್ಮಿಸುವುದು ಸಮಿತಿಯ ಉದ್ದೇಶವಾಗಿದೆʼ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಒಕ್ಕೂಟದ ಗೌರವಾಧ್ಯಕ್ಷ ಬಸವರಾಜ ಮಾಳಗೆ ಮಾತನಾಡಿ, ʼದುಶ್ಚಟಗಳ ವಿರುದ್ಧ ಜಿಲ್ಲೆಯಲ್ಲಿ ಜನಜಾಗೃತಿ ಅಭಿಯಾನ ನಡೆಸುತ್ತಿದೆ. ಎಲ್ಲರೂ ಕೈಜೋಡಿಸಿದರೆ ಬರುವ ದಿನಗಳಲ್ಲಿ ಬೀದರ್ ನಶೆ ಹಾಗೂ ಭಿಕ್ಷಾಟನೆ ಮುಕ್ತವಾಗಲಿದೆʼ ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಮಾತನಾಡಿ, ʼಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಸಮಿತಿ ಕೈಗೊಂಡಿರುವ ಅಭಿಯಾನ ಉತ್ತಮ ಬೆಳವಣಿಗೆʼ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ : ಬೀದರ್‌ | ವಿವಾಹೇತರ ಸಂಬಂಧ ಶಂಕೆ : ಪತ್ನಿಯನ್ನು ಕೊಂದ ಪತಿ

ವ್ಯಸನಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕರಪತ್ರ ವಿತರಣೆ, ಮನೆ-ಮನೆಗೆ ಭೇಟಿ ಮುಂತಾದ ಜಾಗೃತಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಜಶೇಖರ ಸೇಡಂಕರ್, ಪ್ರಮುಖರಾದ ಅಬ್ದುಲ್ ಮನ್ನಾನ್ ಸೇಠ್, ಹಾವಶೆಟ್ಟಿ ಪಾಟೀಲ, ಶರಣಪ್ಪ ಮಿಠಾರೆ ಮತ್ತಿತರರು ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಬೀದರ್ | ವಿದ್ಯುತ್ ಸ್ಪರ್ಶಿಸಿ ವಿಬಿ-ಜಿ ರಾಮ್ ಜಿ ಕಾರ್ಮಿಕ ಮಹಿಳೆ ಸಾವು

ಮನೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ...