ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಸೋಯಾ, ಅವರೆ ಜಿಲ್ಲೆಗೆ ಹಂಚಿಕೆಯಾಗಿರುವ ಪ್ರಮಾಣವು ಕಡಿಮೆಯಾಗಿದ್ದು 1.20 ಲಕ್ಷ ಕ್ವಿಂಟಲ್‌ಗಳಷ್ಟು ಬಿತ್ತನೆ ಬೀಜ ದಾಸ್ತಾನಿಕರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈಚೆಗೆ ನಡೆದ 2025ನೇ ಸಾಲಿನ ಮುಂಗಾರು ಹಂಗಾಮಿನ ರಸಗೊಬ್ಬರಗಳ ದಾಸ್ತಾನು ಹಾಗೂ ಸರಬರಾಜು ಕುರಿತು ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಹೆಚ್ಚುವರಿ ಪ್ರಮಾಣದ ಬೀಜ ಹಂಚಿಕೆ ಮಾಡುವಂತೆ ಕೃಷಿ ಆಯುಕ್ತರಿಗೆ ಪತ್ರ ಬರೆಯಲು ಅವರು ಸೂಚಿಸಿದರು.
ಮೇ 26ರಿಂದ ಬಿತ್ತನೆ ಬೀಜಗಳ ವಿತರಣೆ ಕಾರ್ಯ ಪ್ರಾರಂಭಿಸಬೇಕು. ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಕಾಲದಲ್ಲಿ ರೈತರಿಗೆ ಕೊರತೆಯಾಗದಂತೆ ವಿತರಿಸಲು ಕ್ರಮವಹಿಸಬೇಕು. ಸೂಕ್ತ ಪೊಲೀಸ್ ಬಂದೋಬಸ್ತ್ ಕಾನೂನು ಪರಿಪಾಲನೆಯನ್ನು ಅನುಸರಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.
ಜಂಟಿ ಕೃಷಿ ನಿರ್ದೇಶಕ ಜೀಯಾವುಲ್ಲಾ ಅವರು ಪಿಪಿಟಿ ಪ್ರಸೆಂಟೇಶನ್ ಮೂಲಕ ಕೃಷಿ ಇಲಾಖೆ ಸಾಮಾನ್ಯ ಮಾಹಿತಿ, 2024-25ನೇ ಸಾಲಿನ ಜಿಲ್ಲೆಯ ಮಳೆ ವಿವರ, ಮುಂಗಾರು ಹಂಗಾಮಿನಲ್ಲಿ ಪ್ರಮುಖ ಬೆಳೆಗಳ ಬಿತ್ತನೆ ಕ್ಷೇತ್ರ, ಬಿತ್ತನೆ ಬೀಜಗಳ ವಿತರಣಾ ಪ್ರಮಾಣ ಹಾಗೂ ಹೆಚ್ಚುವರಿ ವಿತರಣಾ ಕೇಂದ್ರಗಳ ವಿವರ ನೀಡಿದರು.
2025ರ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಪ್ರಮುಖ ಬೆಳೆಗಳ ಬಿತ್ತನೆ ಕ್ಷೇತ್ರ ಗುರಿ, ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮ, ಬಿತ್ತನೆ ಬೀಜಗಳ ದಾಸ್ತಾನು ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಹೆಚ್ಚುವರಿ ವಿತರಣಾ ಕೇಂದ್ರಗಳು, ಮುಂಗಾರು ಹಂಗಾಮಿನ ರಸಗೊಬ್ಬರ ತಿಂಗಳವಾರು ಬೇಡಿಕೆ ಪ್ರಮಾಣ ಮತ್ತು ಪ್ರಸ್ತುತ ದಾಸ್ತಾನು ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು.
ಇದನ್ನೂ ಓದಿ : ಬೀದರ್ ವಿಶ್ವವಿದ್ಯಾಲಯಕ್ಕೆ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರಿಡಿ : ಶಿವಯ್ಯ ಸ್ವಾಮಿ
ಸಭೆಯಲ್ಲಿ ಬಸವಕಲ್ಯಾಣ ಉಪ ಕೃಷಿ ನಿರ್ದೇಶಕರು, ತಾಲ್ಲೂಕು ಮಟ್ಟದ ಅಧಿಕರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು