ಬೀದರ್ ತಾಲ್ಲೂಕಿನ ಜನವಾಡದ ಸರಕಾರಿ ಪ್ರೌಢ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ದಿಢೀರ್ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
‘ದಿನನಿತ್ಯ ಪಠ್ಯವನ್ನು ಪುನರ್ ಮನನ ಮಾಡಿಕೊಂಡು ಪರೀಕ್ಷೆಗೆ ಸಿದ್ಧರಾಗಿ ಪರೀಕ್ಷೆಯಲ್ಲಿ ಶಾಲೆಗೆ ಉತ್ತಮ ಫಲಿತಾಂಶ ತರಬೇಕು. ಈ ಮೂಲಕ ಜಿಲ್ಲೆಯ ಫಲಿತಾಂಶ ಹೆಚ್ಚಳಕ್ಕೆ ಕೈಜೋಡಿಸಬೇಕು’ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭಾರತ ದೇಶದ ಭೌಗೋಳಿಕತೆ ಕುರಿತು ವಿದ್ಯಾರ್ಥಿಗಳಿಗೆ ಪಾಠ ಮಾಡಿದರು.
Good job 👏