ಬೀದರ್ ನಗರದ ನೆಹರು ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ನಡೆಯಿತು. ಸಚಿವರು ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾ ಜ್ಯೋತಿಯನ್ನು ನೀಡಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಚಿವ ಈಶ್ವರ ಖಂಡ್ರೆ ಅವರು ಮಾತನಾಡಿ, ʼಕ್ರೀಡೆ ನಮ್ಮನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರನಾಗಿ ಮಾಡುತ್ತದೆ ಹಾಗೂ ಆರೋಗ್ಯವಂತ ಜೀವನಕ್ಕೆ ಕ್ರೀಡೆ ಬಹುಮುಖ್ಯ. ಪ್ರಾಚೀನ ಕಾಲದಿಂದಲೂ ಕ್ರೀಡೆಗೆ ಮಹತ್ವವಾದ ಸ್ಥಾನವನ್ನು ಪಡೆದಿದೆ. ರಾಮಾಯಣ, ಮಹಾಭಾರತದ ಕಾಲದಲ್ಲಿ ರಾಜರು ಕ್ರೀಡಾಕೂಟಗಳನ್ನು ಏರ್ಪಡಿಸುತ್ತಿದ್ದರು. ಕುಸ್ತಿ, ಬಿಲ್ಲುಗಾರಿಕೆ ಮುಂತಾದವು ಕಾಣಬಹುದಾಗಿದೆʼ ಎಂದರು.

ʼಕ್ರೀಡೆ ಆಧುನಿಕ ಜಗತ್ತಿನಲ್ಲಿ ಅತ್ಯಂತ ಜನಪ್ರಿಯ ಮತ್ತು ಮಹತ್ವವನ್ನು ಪಡೆದಿರುವುದನ್ನು ನಾವು ಕಾಣಬಹುದಾಗಿದೆ. ರಾಜ್ಯ ಮಟ್ಟದ ಕ್ರೀಡಾಕೂಟ, ರಾಷ್ಟ್ರೀಯ ಕ್ರೀಡಾಕೂಟ, ಏಷ್ಯನ್ ಕ್ರೀಡಾಕೂಟ ಮತ್ತು ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಿವೆ, ಅದರಲ್ಲಿ ಅನೇಕ ಯುವ ಪೀಳಿಗೆ ತಮ್ಮ ಪ್ರತಿಭೆಯ ಮೂಲಕ ಜಗತ್ತಿಗೆ ಗುರುತಿಸಿಕೊಳ್ಳುತ್ತಾರೆ. ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಅನೇಕ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಏಕಲವ್ಯ ಪ್ರಶಸ್ತಿ, ಮೇಜರ್ ಧ್ಯಾನಚಂದ್ ಖೇಲ್ ರತ್ನಾ ಪ್ರಶಸ್ತಿ, ಪದ್ಮ ಪ್ರಶಸ್ತಿಗಳು ಮತ್ತು ಸಚೀನ ತೆಂಡುಲ್ಕರ್ ಅವರಿಗೆ ಕ್ರೀಡಾ ವಿಭಾಗದಲ್ಲಿ ಭಾರತ ರತ್ನವನ್ನು ನೀಡಲಾಗಿದೆ. ಯುವ ಪೀಳಿಗೆ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಜೀವನವನ್ನು ಕಟ್ಟಿಕೊಳ್ಳಬೇಕುʼ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಗ್ರಾ.ಪಂ.ಸದಸ್ಯನ ಕೊಲೆ : 7 ಗಂಟೆಯಲ್ಲಿ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ವಿಧಾನ ಪರಿಷತ್ ಸದಸ್ಯರಾದ ಶಶೀಲ ಜಿ.ನಮೋಶಿ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಮಠ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಪ್ರಭುಲಿಂಗ ತುಗಾಂವೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ರಾಜಕುಮಾರ ಮಾಳಿಗೆ, ಕೋಶಾಧ್ಯಕ್ಷ ದೇವಪ್ಪ ಚಾಂಬೋಳೆ, ಗೌರವಾಧ್ಯಕ್ಷ ಸೂರ್ಯಕಾಂತ ಬಿರಾದಾರ, ಕಾರ್ಯಾಧ್ಯಕ್ಷ ಶಿವರಾಜ ಕಮಲಾಪೂರೆ, ಹಿರಿಯ ಉಪಾಧ್ಯಕ್ಷರಾದ ಗೌತಮ ಚಿಂತಲಗೇರಾ, ಮಹ್ಮದ ಅಬ್ದುಲ್ ಸುತ್ತಾರ, ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆಯ ಎಲ್ಲಾ ತಾಲ್ಲೂಕಾಧ್ಯಕ್ಷರು ಸೇರಿದಂತೆ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸರ್ಕಾರಿ ನೌಕರರು ಉಪಸ್ಥಿತರಿದ್ದರು