ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲು

Date:

ವರದಕ್ಷಿಣೆ ತರುವಂತೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೀದರ್‌ ನಗರದ ಶಹಾಗಂಜ ಬಡಾವಣೆಯು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ʼ2022ರಲ್ಲಿ ಮದುವೆ ಸಮಯದಲ್ಲಿ 5 ತೊಲೆ ಬಂಗಾರ ಹಾಗೂ ₹5 ಲಕ್ಷ ವರದಕ್ಷಿಣೆ ನೀಡುವುದಾಗಿ ಮಾತಾಗಿತ್ತು. 2022ರ ಡಿಸೆಂಬರ್‌ನಲ್ಲಿ ಮದುವೆ ನಿಗದಿಯಾಗಿತ್ತು. ಮದುವೆ ಮುಂಚೆಯೇ ₹5 ಲಕ್ಷ ವರದಕ್ಷಿಣೆ ಗಂಡನ ಮನೆಯವರು ತೆಗೆದುಕೊಂಡಿದ್ದರು. ಮದುವೆ ವೇಳೆ ನನ್ನ ಹಾಗೂ ಗಂಡನಿಗೆ 5 ತೊಲೆ ಬಂಗಾರದ ಆಭರಣಗಳು ಮಾಡಿಕೊಟ್ಟಿದ್ದರುʼ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ʼಮದುವೆಯಾದ ವರ್ಷದವರೆಗೆ ಎಲ್ಲರೂ ಚನ್ನಾಗಿಯೇ ಇದ್ದರು. ಬಳಿಕ ಮದುವೆ ಸಂದರ್ಭದಲ್ಲಿ ಹೆಚ್ಚಿನ ವರದಕ್ಷಿಣೆ ನೀಡಲಿಲ್ಲ. ಇನ್ನೂ 2 ತೊಲೆ ಬಂಗಾರ ₹2 ಲಕ್ಷ ವರದಕ್ಷಿಣೆ ತೆಗೆದುಕೊಂಡು ಬರುವಂತೆ ಗಂಡ ಸೇರಿದಂತೆ ಅತ್ತೆ, ಮಾವ, ಮೈದುನ ಎಲ್ಲರೂ ಕಿರುಕುಳ ಕೊಟ್ಟು ನನ್ನ ಗಂಡ ದೈಹಿಕ ಹಲ್ಲೆ ಮಾಡಿದ್ದಾರೆ. ಈ ವಿಷಯ ನನ್ನ ತವರು ಮನೆಯವರಿಗೆ ತಿಳಿಸಿದಾಗ ನನ್ನ ತಂದೆ, ಸಹೋದರ ಬಂದು ಕಲಬುರಗಿ ಜಿಲ್ಲೆಯ ನನ್ನ ತವರೂರು ಆಳಂದಗೆ ಕರೆದುಕೊಂಡು ಹೋಗಿದ್ದರುʼ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ʼಎರಡು ತಿಂಗಳ ಕಳೆದ ನಂತರ ಗಂಡ ಸೇರಿದಂತೆ ಎಲ್ಲರೂ ನನ್ನ ತವರು ಮನೆಗೆ ಬಂದು ʼನಮ್ಮಿಂದ ತಪ್ಪಾಗಿದೆ, ಚನ್ನಾಗಿ ಇರುತ್ತೇವೆʼ ಎಂದು ಹೇಳಿ ಬೀದರ್‌ಗೆ ಕರೆದುಕೊಂಡು ಬಂದಿದ್ದರು. ಸ್ವಲ್ಪ ದಿನಗಳ ಬಳಿಕ ʼನಿನಗೆ ವರದಕ್ಷಿಣೆ ತರಲು ಹೇಳಿದರೂ ತಂದಿಲ್ಲʼ ಪುನಃ ಕಿರುಕುಳ ಕೊಟ್ಟು ಅವಾಚ್ಯ ಶಬ್ದಗಳಿಂದ ಬೈಯುವುದು ಮಾಡಿದ್ದಾರೆ. 2025ರ ಜುಲೈ 9ರಂದು ರಾತ್ರಿ ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಗಂಡ, ಮಾವ, ಅತ್ತೆ, ಮೈದುನ ಹಾಗೂ ನೆಗೆಣಿ ಸೇರಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಹೊಡೆಯುವುದು ಮಾಡುತ್ತಿದ್ದರುʼ ಎಂದು ಆರೋಪಿಸಿದರು.

ʼಗಂಡ, ಮಾವ, ಅತ್ತೆ ಸೇರಿದಂತೆ ಮನೆಯವರೆಲ್ಲರೂ ನನ್ನನ್ನು ಹೊಡೆದು ಗಾಯಗೊಳಿಸಿದ್ದರು. ವರದಕ್ಷಿಣೆ ತರದಿದ್ದರೆ ನಮ್ಮ ಮನೆಗೆ ಬರಬೇಡಾ, ನಮ್ಮ ಮಗನಿಗೆ ಬೇರೆ ಮದುವೆ ಮಾಡುತ್ತೇವೆ. ಬಂದರೆ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಜೀವ ಭಯದಿಂದ ನಮ್ಮ ಪೋಷಕರು ನನ್ನ ತವರು ಮನೆಗೆ ಜುಲೈ 10ರಂದು ತವರು ಮನೆಗೆ ಕರೆದು ಹೋಗಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಶಾಲಾ ಮೇಲ್ಚಾವಣಿ ಕುಸಿದು ವಿದ್ಯಾರ್ಥಿಗೆ ಗಾಯ : ಜಿಲ್ಲಾಡಳಿತಕ್ಕೆ ಖಡಕ್‌ ಸೂಚನೆ ನೀಡಿದ ಸಚಿವ ಈಶ್ವರ ಖಂಡ್ರೆ

ದೂರಿನ್ವಯ ಶಹಾಗಂಜನ ಮಹಿಳೆ ಪೂಜಾ ಅವರ ಪತಿ ಆಕಾಶ, ಮಾವ ಸೂರ್ಯಕಾಂತ, ಮೈದುನ ಸಾಗರ, ರಾಹುಲ್‌ ಹಾಗೂ ನೆಗೆಣಿ ವಿಜಯಲಕ್ಷ್ಮಿ ಸೇರಿ ಒಟ್ಟು ಏಳು ಜನರ ವಿರುದ್ಧ ವಿರುದ್ಧ ಐಪಿಸಿಯ ಕಲಂ 85, 115(2), 352, 351(2) ಜೊತೆ 3 (5) ಬಿಎನ್‌ಎಸ್ ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಕಲಂ 3 ಮತ್ತು 4ರಡಿ ಬೀದರ್‌ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...