ಬೀದರ್‌ | ಡಿ.6ರಂದು ಡಾ.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನ : ಪದಾಧಿಕಾರಿಗಳ ಆಯ್ಕೆ

Date:

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನ ಅಂಗವಾಗಿ ಡಿಸೆಂಬರ್‌ 6ರಂದು ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಯೋಜನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ.

- Advertisement -

ಮಂಗಳವಾರ ಬೀದರ್‌ ನಗರದ ಶಹಾಗಂಜ್‌ನ ಅಂಬೇಡ್ಕರ್ ಭವನ ಬೆಳಿಗ್ಗೆ ವಿವಿಧ ದಲಿತ ಸಂಘಟನೆಗಳ ಮುಖಂಡರು, ಹೋರಾಟಗಾರರು, ಚಿಂತಕರು ಮತ್ತು ಅಂಬೇಡ್ಕರ್ ಅವರ ಅನುಯಾಯಿಗಳ ನೇತೃತ್ವದಲ್ಲಿ ಸಭೆ ಕರೆಯಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಹಿರಿಯ ಸಮಾಜ ಸೇವಕರಾದ ಈಶ್ವರ ಕನ್ನೇರಿ ಅವರು ಸಭೆಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಡಿಸೆಂಬರ್‌ 6ರಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ಪ್ರಯುಕ್ತ ಬೀದರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ಮತ್ತು ಮಹಾಪರಿನಿರ್ವಾಣ ಕಾರ್ಯಕ್ರಮ ಆಯೋಜನಾ ಸಮಿತಿ ವತಿಯಿಂದ ಡಾ.ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಲಾಗುವುದು ಎಂದು ತೀರ್ಮಾನಿಸಲಾಯಿತು.

ಬಳಿಕ 11 ಗಂಟೆಗೆ ಅಂಬೇಡ್ಕರ್ ವೃತ್ತದ ಎದುರುಗಡೆ ಭೀಮ ಗೀತೆಗಳ ಗಾಯನ ಮತ್ತು ನುಡಿನಮನ ಕಾರ್ಯಕ್ರಮ ನಡೆಸಲಾಗುವುದು. ಸಂಜೆ 5 ಗಂಟೆಗೆ ಪ್ರತಿವರ್ಷದಂತೆ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಹಾಗೂ ರಾಜ್ಯ, ರಾಷ್ಟ್ರ ಮಟ್ಟದ ಚಿಂತಕರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಪದಾಧಿಕಾರಿಗಳು ಆಯ್ಕೆ :

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ಕಾರ್ಯಕ್ರಮ ಆಯೋಜನಾ ಸಮಿತಿಗೆ ಅಧ್ಯಕ್ಷರಾಗಿ ರಮೇಶ ಡಾಕುಳಗಿ, ಕಾರ್ಯಾಧ್ಯಕ್ಷರಾಗಿ ಮಹೇಶ ಗೋರನಾಳಕರ್, ಗೌರವ ಅಧ್ಯಕ್ಷರಾಗಿ ಪ್ರಕಾಶ ಮಾಳಗೆ, ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ ನಿಲಿಕಟ್ಟಿ ಹಾಗೂ ಕಾರ್ಯದರ್ಶಿಗಳಾಗಿ ವಿನಯಕುಮಾರ ಮಾಳಗೆ, ಸಾಯಿ ಶಿಂಧೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಸಲಹೆಗಾರರಾಗಿ ಅನೀಲಕುಮಾರ ಬೆಲ್ದಾರ, ಮಾರುತಿ ಬೌದ್ಧೆ, ಬಾಬುರಾವ ಪಾಸ್ವಾನ್, ಬಕ್ಕಪ್ಪಾ ದಂಡಿನ್,‌ ಅಶೋಕ ಮಾಳಗೆ, ಶ್ರೀಪತರಾವ ದೀನೆ, ಡಾ.ಕಾಶಿನಾಥ ಚೆಲ್ವಾ, ವಿಠಲದಾಸ ಪ್ಯಾಗೆ, ಅಂಬಾದಾಸ ಗಾಯಕವಾಡ, ಈಶ್ವರಪ್ಪಾ ಗಾಯಕವಾಡ ಹಾಗೂ ದಶರಥ ಗುರು.

ಇದನ್ನೂ ಓದಿ : ಕಲಬುರಗಿಯಲ್ಲೇಕೆ ಓದುಗರ ಸಮಾವೇಶ? ಈ ಒಂದು ಒಲವಿನೋಲೆ ಓದಿ

ಉಪಾಧ್ಯಕ್ಷರಾಗಿ ಮಾರುತಿ ಕಂಟಿ, ಬಾಬುರಾವ ಮಿಠಾರೆ,ಸುನೀಲ ಸಂಗಮ್, ಜಗನಾಥ ಗಾಯಕವಾಡ, ರಮೇಶ ಮಂದಕನಳ್ಳಿ, ರಮೇಶ ಪಾಸ್ವಾನ, ಮೊಗಲಪ್ಪಾ ಮಾಳಗೆ, ಸಂದೀಪ ಕಾಂಟೆ, ಪ್ರದೀಪ ನಾಟೆಕರ್, ಪ್ರಸನ್ನ ಡಾಂಗೆ, ಮುಕೇಶ ರಾಯ್, ಶಾಲಿವಾನ ಬಡಿಗೆರ್, ಪುಟ್ಟರಾಜ ದೀನೆ, ನಾಗೇಶ ಸಾಗರ, ವಿನೋದ ಅಪ್ಪೆ, ಅವಿನಾಶ್ ದೀನೆ, ಸಂಜುಕುಮಾರ ಸಾಗರ, ನರಸಿಂಗ ಸಾಮ್ರಾಟ, ಸತೀಶ್ ಲಕ್ಕಿ, ಅಂಬೇಡ್ಕರ್ ಸಾಗರ, ಅರುಣ ಪಟೇಲ್, ಅಜಯ ದೀನೆ, ಪವನ ಮಿಠಾರೆ, ರಾಹುಲ್ ಡಾಂಗೆ, ಪ್ರಕಾಶ ರಾವಣ ರಂಜೀತಾ ಜೈನೋರ್, ಸುಧಾಮಣಿ ಗುಪ್ತಾ, ಜಗದೇವಿ ಭಂಡಾರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಿಲಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದಾರೆ.

WhatsApp Image 2025 11 24 at 4.19.22 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...