ಬೀದರ್ | ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ : ಅದ್ದೂರಿ ಆಚರಣೆಗೆ ನಿರ್ಧಾರ

Date:

Advertisements

ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ ಎಂದು ಬೀದರ್ ಸಹಾಯಕ ಆಯುಕ್ತ ಎಂ.ಡಿ.ಶಕೀಲ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂದು ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದು, ನಂತರ ಬೆಳಿಗ್ಗೆ 9 ಗಂಟೆಗೆ ಡಾ.ಅಂಬೇಡ್ಕರ್ ವೃತ್ತದಲ್ಲಿ ಪೂಜೆ ಹಾಗೂ ಮಾಲಾರ್ಪಣೆ ಕಾರ್ಯಕ್ರಮ ನೆರವೇರಿಸಿ ನಂತರ ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆ ನಡೆಸಲಾಗುತ್ತದೆ.

Advertisements

ನಗರದ ಭಗತ್ ಸಿಂಗ್ ವೃತ್ತ, ಬಸವೇಶ್ವರ ವೃತ್ತ, ನಯಾ ಕಮಾನ್, ಚೌಬಾರಾ, ಗವಾನ್ ಚೌಕ್ ಮಾರ್ಗದ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಮುಕ್ತಾಯಗೊಳಿಸಲಾಗುವುದು ಎಂದರು.

ಸಂಜೆ 5 ಗಂಟೆಗೆ ಛತ್ರಪತಿ ಶಿವಾಜಿ ವೃತ್ತದ ಹತ್ತಿರದಲ್ಲಿ ಜಿಲ್ಲಾಡಳಿತ ವತಿಯಿಂದ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ವಿವಿಧ ಗ್ರಾಮಗಳಿಂದ ಆಗಮಿಸುವ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ, ಮೆರವಣಿಗೆ ನಡೆಯುವ ಮಾರ್ಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಚತೆ ಕಾಪಾಡುವಂತೆ ನಗರಸಭೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

1003375577
ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

‘ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ಮತ್ತು ಸಂಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಆರೋಗ್ಯ ಇಲಾಖೆಯಿಂದ ಮೆರವಣಿಗೆಯಲ್ಲಿ ಅಂಬುಲೈನ್ಸ್ ವ್ಯವಸ್ಥೆ ಮಾಡಬೇಕು‌. ವಿವಿಧ ಇಲಾಖೆಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಸಕಾಲದಲ್ಲಿ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುಕ್ತಣ್ಣ ಕರಿಗಾರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಸಿಂಧು ಎಚ್.ಎಸ್, ನಗರಸಭೆ ಆಯುಕ್ತ ಶಿವರಾಜ ರಾಠೋಡ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸುಭಾಷ ನಾಗೂರೆ ಉಪಸ್ಥಿತರಿದ್ದರು.

ಸಭೆಯಲ್ಲಿ ಮುಖಂಡರಾದ ಮಾರುತಿ ಬೌದ್ಧೆ, ಅನೀಲಕುಮಾರ್ ಬೆಲ್ದಾರ, ರೋಹಿದಾಸ ಘೋಡೆ, ಬಾಬುರಾವ ಪಾಸ್ವಾನ್, ಅಭಿ ಕಾಳೆ, ಈಶ್ವರ ಕನ್ನೇರಿ, ವಿಷ್ಣುವರ್ಧನ್ ವಾಲ್ದೊಡ್ಡಿ, ಪ್ರಶಾಂತ ಭಾವಿಕಟ್ಟಿ, ಬಾಬುರಾವ ಮುಲ್ಕಾಪೂರೆ, ವಿಜಯಕುಮಾರ ಸೋನಾರೆ, ರಾಜು ಸಾಗರ, ಮಹೇಶ ಗೋರನಾಳಕರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು, ಗಣ್ಯರು ಸಭೆಯಲ್ಲಿ ಹಾಜರಾಗಿ ಸಲಹೆ ನೀಡಿದರು.

ಭಾಲ್ಕಿ : ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಗೈರಾಗದಿರಲಿ

ಭಾಲ್ಕಿ ಪಟ್ಟಣದ ತಹಸೀಲ್ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೆಯ ಜಯಂತಿ ಅಂಗವಾಗಿ ಗುರುವಾರ ಪೂರ್ವಭಾವಿ ಸಭೆ ಜರುಗಿತು.

ಸಭೆಯಲ್ಲಿ ವಿವಿಧ ದಲಿತರ ಸಂಘಟನೆ, ಕನ್ನಡಪರ ಸಂಘಟನೆ ಸೇರಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಮುಖಂಡರು ಮಾತನಾಡಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಲಹೆ ಸೂಚನೆ ನೀಡಿದರು.

1003375581
ಭಾಲ್ಕಿಯ ತಹಸೀಲ್ ಕಚೇರಿಯಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ ಪೂರ್ವಭಾವಿ ಸಭೆ ನಡೆಯಿತು.

ಪಟ್ಟಣದಲ್ಲಿ ಏ.14ರಂದು ನಡೆಯುವ ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡುವುದರ ಜತೆಗೆ ಪಟ್ಟಣದ ಎಲ್ಲ ಮಹಾತ್ಮರ ಮೂರ್ತಿ ಸ್ವಚ್ಛಗೊಳಿಸಿವುದು, ಪ್ರಮುಖ ರಸ್ತೆಗಳಲ್ಲಿ ಕಮಾನು ಹಾಕಲಾಗುತ್ತದೆ.

ಅಂದು ಬೆಳಿಗ್ಗೆ 8.30ಕ್ಕೆ ಪುರಸಭೆ ಆವರಣದಿಂದ ಟೌನ್ ಹಾಲ್ ವರೆಗೂ ಮೆರವಣಿಗೆ ನಡೆಸಿ ಬೆಳಿಗ್ಗೆ 10.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್ | ಮಹಿಳೆ ಯಶಸ್ಸಿಗೆ ಪುರುಷ ಬೆನ್ನಲುಬಾಗಲಿ : ಆರತಿ ಪಾಟೀಲ್

ಪುರಸಭೆ ಅಧ್ಯಕ್ಷೆ ಶಶಿಕಲಾ ಅಶೋಕ, ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ ಸಂಗನ್ ಸೇರಿದಂತೆ ಎಲ್ಲ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X