ಬೀದರ್‌ | ಬತ್ತಿದ ಜಲಮೂಲ : ವನ್ಯಜೀವಿಗಳ ದಾಹ ತಣಿಸಲು ಮುಂದಾದ ಅರಣ್ಯ ಇಲಾಖೆ

Date:

Advertisements

ಬೇಸಿಗೆ ಆರಂಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಜನ-ಜಾನುವಾರುಗಳಿಗೆ ಮಾತ್ರವಲ್ಲ ಕಾಡು ಪ್ರಾಣಿಗಳಿಗೂ ತಪ್ಪಿಲ್ಲ. ಬಿಸಿಲಿನ ತಾಪಕ್ಕೆ ಕಾಡು ಒಣಗಿ ಹೋಗುತ್ತಿದೆ. ಕಾಡಿನಲ್ಲಿರುವ ಹಳ್ಳ, ಕೊಳ್ಳ, ಕೆರೆಕಟ್ಟೆಗಳು ನೀರಿಲ್ಲದೇ ಬತ್ತಿ ಹೋಗುತ್ತಿವೆ. ಇದರಿಂದ ನೀರಿನ ಅಭಾವ ಎದುರಾಗಿದ್ದು, ವನ್ಯಜೀವಿಗಳ ದಾಹ ನೀಗಿಸಲು ಟ್ಯಾಂಕರ್‌ಗಳ ಮೂಲಕ ಕೃತಕ ತೊಟ್ಟಿ ತುಂಬಿಸಲು ಅರಣ್ಯ ಇಲಾಖೆ ಮುಂದಾಗಿದೆ.

ಔರಾದ್-ಕಮಲನಗರ ತಾಲ್ಲೂಕು ಸೇರಿ ಸುಮಾರು 2 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವಿದೆ. ಜಿಂಕೆ, ನವಿಲು, ಕೃಷ್ಣ ಮೃಗ, ನರಿ, ಕಾಡು ಹಂದಿ, ಮುಳ್ಳಹಂದಿ, ತೋಳ ಸೇರಿದಂತೆ ವಿವಿಧ ಜಾತಿಯ ಪ್ರಾಣಿ, ಪಕ್ಷಿಗಳು ಈ ಅರಣ್ಯ ಪ್ರದೇಶದಲ್ಲಿವೆ.

ಪ್ರಾಣಿ-ಪಕ್ಷಿಗಳಿಗೆ ಕಾಡಿನಲ್ಲಿರುವ ಕೆರೆ ಕಟ್ಟೆಗಳೇ ನೀರಿನ ಮೂಲ. ಅವು ಆ ನೀರು ಕುಡಿಯಬೇಕು, ಅಲ್ಲೇ ವಿಶ್ರಾಂತಿ ಪಡೆದು ಜೀವ ತಂಪಾಗಿಸಿಕೊಳ್ಳಬೇಕು. ಆದರೆ ಕೆಂಡದಂತಹ ಬಿಸಿಲಿಗೆ ತಾಲ್ಲೂಕಿನ ಜಲಮೂಲ ಬತ್ತಿ ಹೋಗಿದ್ದು, ಪ್ರಾಣಿ, ಪಕ್ಷಿಗಳು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ.

Advertisements

ಅರಣ್ಯ ಪ್ರದೇಶದ ಒಳಭಾಗದಲ್ಲಿರುವ ಕೆರೆ–ಕಟ್ಟೆ, ಹಳ್ಳಗಳು ಬತ್ತಿ ಹೋಗಿದ್ದು, ಎಲ್ಲೆಡೆ ನೀರಿಗಾಗಿ ಹಾಹಾಕಾರ ಕಂಡು ಬಂದಿದೆ. ವನ್ಯಜೀವಿಗಳು ನೀರನ್ನು ಅರಸಿ ವಸತಿ ಪ್ರದೇಶಗಳು ಹಾಗೂ ರೈತರ ತೋಟಗಳತ್ತ ಧಾವಿಸುತ್ತಿವೆ. ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ಅರಣ್ಯ ಇಲಾಖೆ ಅಧಿಕಾರಿಗಳು ವಿವಿಧ ಅರಣ್ಯ ಪ್ರದೇಶಗಳಲ್ಲಿ ನೀರು ಸಂಗ್ರಹ ತೊಟ್ಟಿ ವ್ಯವಸ್ಥೆ ಮಾಡಿದ್ದಾರೆ.

ಔರಾದ್‌-ಕಮಲನಗರ ಅವಳಿ ತಾಲ್ಲೂಕಿನ ಚಟ್ನಾಳ, ಗಡಿಕುಶನೂರ, ಆಲೂರ(ಕೆ), ಬಾಲೂರ್(ಕೆ), ಖಾನಾಪುರ, ಆಲೂರ(ಬಿ) ಹಾಗೂ ಚಿಂತಾಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ 5 ಅಡಿ ಆಳ ಮತ್ತು 3 ಮೀಟರ್ ಸುತ್ತಳತೆಯ ಕೃತಕ ಸಿಮೆಂಟ್ ತೊಟ್ಟಿಗಳು ನಿರ್ಮಿಸಲಾಗಿದೆ.

WhatsApp Image 2025 03 16 at 8.19.11 PM
ಔರಾದ್‌ ತಾಲ್ಲೂಕಿನ ಗಡಿಕುಶನೂರ ಅರಣ್ಯ ಪ್ರದೇಶ ನಿರ್ಮಿಸಲಾದ ಸಿಮೆಂಟ್‌ ತೊಟ್ಟಿಯಲ್ಲಿ ನೀರು ತುಂಬುತ್ತಿರುವ ಅರಣ್ಯ ಸಿಬ್ಬಂದಿ

ʼಕಳೆದ ಎರಡ್ಮೂರು ವರ್ಷದ ಹಿಂದೆ ಔರಾದ್ ವಲಯದ ಅರಣ್ಯ ಪ್ರದೇಶದಲ್ಲಿ 7 ನೀರಿನ ಸಿಮೆಂಟ್‌ ಗುಂಡಿ ನಿರ್ಮಿಸಲಾಗಿದೆ. ಪ್ರತಿ ವರ್ಷ ಬೇಸಿಗೆ ಸಂದರ್ಭದಲ್ಲಿ ನೀರು ತುಂಬಿಸಿ ವನ್ಯಜೀವಿಗಳಿಗೆ ಅನುಕೂಲ ಮಾಡಲಾಗುತ್ತಿದೆ. ಪ್ರತಿಯೊಂದು ನೀರಿನ ಗುಂಡಿಗೆ 2 ಟ್ಯಾಂಕರ್‌ ನೀರನ್ನು ಪ್ರತಿ 20 ರಿಂದ 25 ದಿನಗಳಿಗೆ ಒಮ್ಮೆ ಪೂರೈಕೆ ಮಾಡಲಾಗುತ್ತಿದೆʼ ಎಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಔರಾದ್‌ ಕ್ಷೇತ್ರದ 40 ಸರ್ಕಾರಿ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ : ಶಾಸಕ ಪ್ರಭು ಚವ್ಹಾಣ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರ

ʼಬೇಸಿಗೆಯಲ್ಲಿ ಸಹಜವಾಗಿ ನೀರಿನ ಮೂಲಗಳು ಬತ್ತಿ ಹೋಗುತ್ತವೆ. ಪ್ರತಿ ವರ್ಷದಂತೆ ಈ ಬಾರಿಯೂ ಅರಣ್ಯ ಪ್ರದೇಶದ ವಿವಿಧೆಡೆ ಸಿಮೆಂಟ್‌ ತೊಟ್ಟಿಗಳಲ್ಲಿ ಟ್ಯಾಂಕರ್ ಮೂಲಕ ನೀರು ತುಂಬಿಸಿ ವನ್ಯಜೀವಿಗಳ ಬಾಯಾರಿಕೆ ತಣಿಸಲಾಗುತ್ತಿದೆ. ಬೇಸಿಗೆ ಮುಗಿಯುವರೆಗೆ ನೀರಿನ ತೊಟ್ಟಿಗಳಲ್ಲಿ ನೀರು ಸಂಗ್ರಹ ಮಾಡಲಾಗುತ್ತದೆʼ ಎಂದು ವಲಯ ಅರಣ್ಯಾಧಿಕಾರಿ ಮುದಾಶೀರ್‌ ಅಹ್ಮದ್‌ ʼಈದಿನ.ಕಾಮ್‌ʼಗೆ ತಿಳಿಸಿದ್ದಾರೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X