ಬೀದರ್‌ | 3 ದಿನಕ್ಕೊಮ್ಮೆ ಕುಡಿಯುವ ನೀರು : ಸಮಸ್ಯೆ ಬಗೆಹರಿಸದಿದ್ದರೆ ಹೋರಾಟದ ಎಚ್ಚರಿಕೆ

Date:

ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸದ ಕಮಲನಗರ ತಾಲ್ಲೂಕಿನ ಡೋಣಗಾಂವ(ಎಂ) ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ವಿರುದ್ಧ ಡೋಣಗಾಂವ್‌ (ಎಂ) ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ʼಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಡೋಣಗಾಂವ್‌ (ಎಂ) ಗ್ರಾಮದಲ್ಲಿ ಮೂರು ವಾರ್ಡ್‌ಗಳಿದ್ದು, ಸುಮಾರು 4 ಸಾವಿರ ಜನಸಂಖ್ಯೆ ಹೊಂದಿದೆ. ಜೆಜೆಎಂ ಕಾಮಗಾರಿ ಕೈಗೊಂಡರೂ ಸಹ ನೀರಿನ ಸಮಸ್ಯೆಗೆ ಮುಕ್ತಿ ಸಿಕ್ಕಿಲ್ಲ. ನೀರು ಪೂರೈಕೆಗೆ ತೆರೆದ ಬಾವಿಯಿದ್ದರೂ ನೀರಿನ ಸಮಸ್ಯೆ ತಲೆದೋರಿದೆ. ಹೀಗಾಗಿ 3 ದಿನಕ್ಕೊಮ್ಮೆ ನೀರು ಬರುತ್ತದೆ. ಈ ಬಗ್ಗೆ ಅನೇಕ ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನೆ ಆಗಿಲ್ಲʼ ಎಂದು ಗ್ರಾಮಸ್ಥರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಕುರಿತು ಶುಕ್ರವಾರ ಗ್ರಾಮದ ಪ್ರಮುಖರು ಗ್ರಾಮ ಪಂಚಾಯಿತಿ ಪಿಡಿಒ ವಿಜಯಕುಮಾರ್‌ ಪಾಟೀಲ್‌ ಅವರಿಗೆ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ʼಗ್ರಾಮದಲ್ಲಿ ನೀರಿನ ಸಮಸ್ಯೆಯಿಂದ ಜನರು ನೀರಿಗಾಗಿ ಕೊಡ ಹಿಡಿದು ಅಲೆದಾಡಬೇಕಾದ ಪರಿಸ್ಥಿತಿ ಇದೆ. ಜೆಜೆಎಂ ಕಾಮಗಾರಿ ಕೈಗೊಂಡರೂ ನೀರು ಪೂರೈಸುವಲ್ಲಿ ಗ್ರಾಮ ಆಡಳಿತ ವ್ಯವಸ್ಥೆ ವಿಫಲವಾಗಿದೆ. ಈ ಸಮಸ್ಯೆ ಮುಂದಿನ ತಿಂಗಳು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ 5 ದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮದ ಮುಖಂಡರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಶಿವು ದೇಸಾಯಿ, ಅಪ್ಪಾಸಾಹೇಬ್‌ ದೇಶಮುಖ, ಉತ್ತಮರಾವ್‌ ಮಾನೆ, ವಿಲಾಸ ಗಂದಗೆ, ಮಹಾದೇವ ಚಾಕುರೆ, ಅನೀಲ್‌ ಗಂದಗೆ, ತುಳಸಿರಾಮ ಮಾನೆ, ವಿಜಯಕುಮಾರ್‌ ಪಾಟೀಲ್‌, ರಾಜಪ್ಪಾ ತೇಲಿ, ಸಂಗಮೇಶ ವಲ್ಲೂರೆ ಮತ್ತಿತರರಿದ್ದರು.

ಈ ಬಗ್ಗೆ ಗ್ರಾಮ ಪಂಚಾಯಿತಿ ಪಿಡಿಒ ವಿಜಯಕುಮಾರ್‌ ಅವರಿಗೆ ʼಈದಿನ.ಕಾಮ್‌ʼ ಸಂಪರ್ಕಿಸಿದರೆ, ಅವರು ಕರೆ ಸ್ವೀಕರಿಸಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಬೀದರ್‌ | ಒತ್ತಡ ನಿವಾರಣೆಗೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯ: ಡಿಸಿ ಶಿಲ್ಪಾ ಶರ್ಮಾ

ಯುವಜನರಲ್ಲಿರುವ ಪ್ರತಿಭೆಯನ್ನು ಹೊರತರುವುದರ ಜೊತೆಗೆ, ದೈನಂದಿನ ಜೀವನದ ಮಾನಸಿಕ ಒತ್ತಡ ನಿವಾರಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...