ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಕುಡಿಯುವ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು, ಸಮಸ್ಯೆಗಳಿದ್ದರೆ ಜಿಲ್ಲಾ ಹಾಗೂ ಆಯಾ ತಾಲ್ಲೂಕಿನ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಬೇಕೆಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯವಾಣಿ ಸಂಖ್ಯೆಗಳ ವಿವರ:
ಜಿಲ್ಲಾ ಮಟ್ಟದ ಸಹಾಯವಾಣಿ (9480587444), ಔರಾದ (ಬಿ) (9448196200), ಕಮಲನಗರ (9448196207), ಬಸವಕಲ್ಯಾಣ (9448196201), ಹುಲಸೂರು (9448195205), ಹುಮನಾಬಾದ (9448196206), ಚಿಟಗುಪ್ಪಾ (9448196204), ಬೀದರ (9448196203) ಹಾಗೂ ಭಾಲ್ಕಿ (9448196202) ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬೇಕೆಂದು ತಿಳಿಸಿದ್ದಾರೆ.