ಸ್ಥಳಾಂತರಗೊಂಡ ಜಿಲ್ಲಾಧಿಕಾರಿಗಳ ಕಚೇರಿಗೆ ನೂತನ ಬಸ್ ನಿಲ್ದಾಣದಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗುಲಾಮ್ ದಸ್ತಗೀರ್ ಅವರು ಅಪರ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಟ್ಟಡ ಶಿಥಿಲಗೊಂಡಿರುವ ಹಿನ್ನೆಲೆ ನೂತನ ಪ್ರಜಾ ಸೌಧ ಕಟ್ಟಡ ನಿರ್ಮಾಣ ಕಾರ್ಯ ಮುಕ್ತಾಯ ಆಗುವವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿರುವ ವಿವಿಧ ಇಲಾಖೆಗಳ ಕಚೇರಿಗಳು ಬೇರೆ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯು ಚಿಕ್ಕಪೇಟ ರಸ್ತೆಯ ಗಾಂಧಿ ಭವನದಲ್ಲಿ ಕಾರ್ಯನಿರ್ವಹಿಸುತ್ತಿದೆ.
ಸ್ಥಳಾಂತರಗೊಂಡ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಇತರೆ ಕಚೇರಿಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಹೊಸ ಬಸ್ ನಿಲ್ದಾಣದಿಂದ ಎರಡು ಬಸ್‌ಗಳನ್ನು ಹಳೆ ನಿಲ್ದಾಣ, ಅಂಬೇಡ್ಕರ್ ವೃತ್ತ, ಜನವಾಡ ರಸ್ತೆ ಮಾರ್ಗವಾಗಿ ಚಿಕಪೇಟ್ ರಿಂಗ್ ರಸ್ತೆ, ಗುರುನಾನಕ್ ಝೀರಾ ಮುಖಾಂತರ ಹೊಸ ಬಸ್ ನಿಲ್ದಾಣಕ್ಕೆ ಚಲಿಸಬೇಕುʼ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ʼಸಾರಿಗೆ ಇಲಾಖೆ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಬಸ್ ವ್ಯವಸ್ಥೆ ಕಲ್ಪಿಸಿದರೆ ವಿವಿಧ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿಗಳಿಗೆ ಹಾಗೂ ನಗರ ಸೇರಿದಂತೆ ಬೇರೆ ತಾಲೂಕುಗಳಿಂದ ಬರುವ ಜನಸಾಮಾನ್ಯರಿಗೆ ಇದರಿಂದ ತುಂಬಾ ಅನುಕೂಲ ಆಗಲಿದೆʼ ಎಂದು ಗಮನ ಸೆಳೆದರು.
ಇದನ್ನೂ ಓದಿ : ಬೀದರ್ ಜಿಲ್ಲಾಡಳಿತ ಭವನ ನಿರ್ಮಾಣ : ಜಿಲ್ಲಾ ಕಚೇರಿಗಳ ಸ್ಥಳಾಂತರ : ಡಿಸಿ ಶಿಲ್ಪಾ ಶರ್ಮಾ