ವಿಶ್ವ ಬಸವ ಧರ್ಮ ಟ್ರಸ್ಟ್ ಅನುಭವ ಮಂಟಪದಿಂದ ಬಸವಕಲ್ಯಾಣದ ಅನುಭವ ಮಂಟಪ ಪರಿಸರದಲ್ಲಿ ಎರಡು ದಿನ ಆಯೋಜಿಸಿದ್ದ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕೆ ಶನಿವಾರ ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ನಾಲ್ವರು ಸಾಧಕರಿಗೆ ಅನುಭವ ಮಂಟಪ ಟ್ರಸ್ಟ್ ವತಿಯಿಂದ ಕೊಡಮಾಡುವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಕೆ.ಎಸ್. ರಾಜಣ್ಣ ಅವರಿಗೆ ಡಾ.ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪ ರಾಷ್ಟ್ರೀಯ ಪ್ರಶಸ್ತಿ, ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರಿಗೆ ಡಾ.ಎಂ.ಎಂ. ಕಲಬುರಗಿ ಸಾಹಿತ್ಯ ಸಂಶೋಧನ ರಾಷ್ಟ್ರೀಯ ಪ್ರಶಸ್ತಿ, ಮಹಾರಾಷ್ಟ್ರ ಬಸವ ಪರಿಷತ್ ಅಧ್ಯಕ್ಷ ಬಿ.ಎಂ.ಪಾಟೀಲ್ ಅವರಿಗೆ ಬಸವ ಭಾಸ್ಕರ್ ರಾಷ್ಟ್ರೀಯ ಪ್ರಶಸ್ತಿ ಹಾಗೂ ಬಸವ ಟಿವಿ ಸಂಸ್ಥಾಪಕ ಈ.ಕೃಷ್ಣಪ್ಪ ಅವರಿಗೆ ಅನುಭವ ಮಂಟಪ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಅನುಭವ ಮಂಟಪ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು, ಗದಗನ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ, ಇಳಕಲ್ ಗುರುಮಹಾಂತ ಸ್ವಾಮೀಜಿ, ಹಾರಕೂಡ ಡಾ.ಚನ್ನವೀರ ಶಿವಾಚಾರ್ಯ, ಹುಲಸೂರಿನ ಡಾ.ಶಿವಾನಂದ ಸ್ವಾಮೀಜಿ, ಭೈರಮಂಗಲದ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಈ ಸುದ್ದಿ ಓದಿದ್ದೀರಾ? ಬೀದರ್ | 10 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬುಡಾ ಆಯುಕ್ತ
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಶಾಸಕ ಶರಣು ಸಲಗರ, ವಿಧಾನ ಪರಿಷತ್ ಎಂ.ಜಿ. ಮುಳೆ, ಶಶೀಲ್ ನಮೋಶಿ, ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಇತರರಿದ್ದರು.