ಬೀದರ್‌ | ‘ಈ ದಿನ’ ಫಲಶೃತಿ : ವರ್ಷದ ಬಳಿಕ ನಿಟ್ಟೂರ್ ಬಸ್‌ ನಿಲ್ದಾಣ‌ ಕಾರ್ಯಾರಂಭ

Date:

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ನಿರ್ಮಾಣಗೊಂಡಿದ್ದ ಕೆಕೆಆರ್‌ಟಿಸಿ ಬಸ್ ನಿಲ್ದಾಣ ಉದ್ಘಾಟನೆಯಾಗಿ ವರ್ಷದ ಬಳಿಕ ಕಾರ್ಯಾರಂಭವಾಗಿದೆ. ಈ ದಿನ.ಕಾಮ್ ವರದಿಯ ಬೆನ್ನಲ್ಲೇ ಎಚ್ಚೆತ್ತ ಕೆಕೆಆರ್‌ಟಿಸಿ ಅಧಿಕಾರಿಗಳು, ಶುಕ್ರವಾರ ನಿಲ್ದಾಣ‌ದಲ್ಲಿ ಬಸ್‌ ಕಾರ್ಯಾರಂಭ ಮಾಡಿದ್ದಾರೆ.

- Advertisement -

ಲಕ್ಷಾಂತರ ರೂಪಾಯಿ ವೆಚ್ಚದಿಂದ ನಿರ್ಮಾಣಗೊಂಡ ಬಸ್ ತಂಗುದಾಣ ಉದ್ಘಾಟನೆಯಾಗಿ ವರ್ಷ ಕಳೆದರೂ ಸಾರ್ವಜನಿಕರ ಸೇವೆಗೆ ಒದಗಿಸಿರಲಿಲ್ಲ. ಬಸ್ ನಿಲ್ದಾಣ ಇದ್ದೂ ಇಲ್ಲದಂತಾಗಿ ಪ್ರಯಾಣಿಕರು ಎಂದಿನಂತೆ ತೊಂದರೆ ಅನುಭವಿಸುತ್ತಿರುವ ಬಗ್ಗೆ ಈ ದಿನ.ಕಾಮ್ ಗುರುವಾರ “ಉದ್ಘಾಟನೆಯಾಗಿ ವರ್ಷ ಕಳೆದರೂ ಉಪಯೋಗಕ್ಕಿಲ್ಲದ ʼಬಸ್‌ ನಿಲ್ದಾಣ” ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ವರದಿಗೆ ಸ್ಪಂದಿಸಿದ ಬೀದರ್ ಜಿಲ್ಲೆಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ನಿಲ್ದಾಣಕ್ಕೆ ಬಸ್‌ ಓಡಿಸುವ ಮೂಲಕ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಸ್ಥರು, ಬಸ್‌ ಚಾಲಕ-ನಿರ್ವಾಹಕರು ಇದ್ದರು.

ಬೀದರ್ 7

ಬೀದರ್-ನಿಟ್ಟೂರ್‌ ಹಾಗೂ ಭಾಲ್ಕಿ-ಔರಾದ್‌ ಮಾರ್ಗ ಚಲಿಸುವ ಸಾರಿಗೆ ಇಲಾಖೆ ಬಸ್‌ಗಳು ನಿಲ್ದಾಣಕ್ಕೆ ಬಂದಿರುವುದರಿಂದ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ, ಪ್ರಯಾಣಿಕರಿಗೆ ಹೊಸ ಭರವಸೆ ಮೂಡಿದೆ.

ಇದನ್ನು ಓದಿದ್ದೀರಾ? ರಾಜಭವನ ಚಲೋ | ಬಾಕಿ ಪ್ರಕರಣಗಳ ಪರಿಶೀಲನೆ: ಕಾಂಗ್ರೆಸ್‌ ನಿಯೋಗಕ್ಕೆ ರಾಜ್ಯಪಾಲರ ಭರವಸೆ

ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿರ್ಮಿಸಲಾದ ಬಸ್ ನಿಲ್ದಾಣ ಇನ್ಮುಂದೆ ಜನರ ಸೇವೆಗೆ ಸಿದ್ಧವಾಗಿದೆ. ವರದಿಗೆ ಸ್ಪಂದಿಸಿದ ಕೆಕೆಆರ್‌ಟಿಸಿ ಅಧಿಕಾರಿಗಳಿಗೆ ಗ್ರಾಮಸ್ಥರು ಧನ್ಯವಾದ ತಿಳಿಸಿದರು. ಈ ಕುರಿತು ವಿಶೇಷ ವರದಿ ಪ್ರಕಟಿಸಿದ ಈ ದಿನ.ಕಾಮ್‌ ಗೆ ಗ್ರಾಮಸ್ಥರು ಧನ್ಯವಾದ ತಿಳಿಸಿದ್ದಾರೆ.

ಬಸ್‌ ನಿಲ್ದಾಣದ ಕೋಣೆಯಲ್ಲಿ ಶೇಖರಿಸಿದ ಸಾಮಾಗ್ರಿಗಳು ಖಾಲಿ ಮಾಡಲಾಗಿದೆ. ನಿಲ್ದಾಣದ ಆವರಣ ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...