ಬೀದರ್‌ | ʼಈದಿನʼ ಫಲಶೃತಿ : ನಾಗಮಾರಪಳ್ಳಿ ಶಾಲೆಗೆ ತಾಲೂಕು ಪಂಚಾಯತ್ ಇಒ ಭೇಟಿ

Date:

ಔರಾದ್‌ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್‌ ಅವರು ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇತರೆ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ಬುಧವಾರ ಗ್ರಾಮಸ್ಥರ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್‌ ಕಾರ್ಯಾಲಯ ಎದುರು ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಕುರಿತು ʼಈದಿನ.ಕಾಮ್‌ʼ ಗುರುವಾರ ʼಕುಡಿಯುವ ನೀರಿಗಾಗಿ ಗ್ರಾ.ಪಂ. ಕಚೇರಿ ಎದುರು ವಿದ್ಯಾರ್ಥಿಗಳಿಂದ ಪ್ರತಿಭಟನೆ’ ಎಂಬ ಶೀರ್ಷಿಕೆಯಡಿ ಮೊದಲು ಸುದ್ದಿ ಪ್ರಕಟಿಸಿ ಗಮನ ಸೆಳೆದಿತು.

ವರದಿಗೆ ಸ್ಪಂದಿಸಿದ ತಾಲೂಕು ಪಂಚಾಯತ್‌ ಇಒ ಕಿರಣ ಪಾಟೀಲ್‌ ಅವರು ಶುಕ್ರವಾರ ಅಧಿಕಾರಿಗಳೊಂದಿಗೆ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿರುವ ಸಮಸ್ಯೆಗಳನ್ನು ಪರಿಶೀಲಿಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಕಲಿಕೆ ಕುರಿತು ತಿಳಿಸಿದರು.

WhatsApp Image 2025 11 07 at 3.47.52 PM

ತಾಲೂಕು ಪಂಚಾಯತ್‌ ಇಒ ಕಿರಣ ಪಾಟೀಲ್‌ ಅವರು ಈದಿನ.ಕಾಮ್‌ ಜೊತೆ ಮಾತನಾಡಿ, ʼಇಂದು ನಾಗಮಾರಪಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ್ದೇನೆ. ಶಾಲೆಯಲ್ಲಿ ಜೆಜೆಎಂ ಅಡಿ ಅಳವಡಿಸಲಾದ ನಲ್ಲಿ ನಳ ಸಂಪರ್ಕ ಇದೆ. ಆದರೆ ಗ್ರಾಮಸ್ಥರ ಬೇಡಿಕೆಯಂತೆ ಶಾಲೆಗೆ ವಾರದೊಳಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೊಳವೆ ಬಾವಿ ಕೊರೆಸಲಾಗುವುದು. 15ನೇ ಹಣಕಾಸು ಯೋಜನೆಯಡಿ ಶಾಲೆಗೆ ಶೌಚಾಲಯ ಹಾಗೂ ಮನರೇಗಾ ಅಡಿ ಶಾಲೆಗೆ ಆಟದ ಮೈದಾನಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಅಗತ್ಯ ಇರುವ ಉಳಿದ ಮೂಲಸೌಕರ್ಯ ಒದಗಿಸಲಾಗುವುದುʼ ಎಂದು ಭರವಸೆ ನೀಡಿದರು.

ಇದನ್ನೂ ಓದಿ : ಬೀದರ್‌ | ಮಕ್ಕಳ ಸಹಾಯವಾಣಿ-1098 ಬರಹ ಕಡ್ಡಾಯ : ಡಿಸಿ ಶಿಲ್ಪಾ ಶರ್ಮಾ

WhatsApp Image 2025 11 07 at 3.47.03 PM

ಈ ಸಂದರ್ಭದಲ್ಲಿ ನಾಗಮಾರಪಳ್ಳಿ ಗ್ರಾಮ‌ ಪಂಚಾಯತ್ ಪಿಡಿಒ ಶರಣಪ್ಪಾ ನಾಗಲಗಿದ್ದೆ, ಗ್ರಾ.ಪಂ.ಅಧ್ಯಕ್ಷ ಸಂಗಾರೆಡ್ಡಿ ಸೇರಿದಂತೆ ಪಂಚಾಯತ್‌ ಸದಸ್ಯರು, ಶಿಕ್ಷಕರು, ಗ್ರಾಮಸ್ಥರು ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...