ಜಾತಿ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗದಂತೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಗ್ರಾಮ ಅಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಸ್ಪಂದಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾತಿ ಆದಾಯ ಪ್ರಮಾಣ ಪತ್ರ ಪಡೆಯುವವರಿಗೆ ತೊಂದರೆಯಾದರೆ 08482-224319 ಸಹಾಯವಾಣಿಗೆ ಸಂಪರ್ಕಿಸಬಹುದು.
ಈ ಸುದ್ದಿ ಓದಿದ್ದೀರಾ? ಬೀದರ್ | ವಚನಗಳು ಹೊಸ ಸಾಂಸ್ಕೃತಿಕ ಪರಂಪರೆ ರೂಪಿಸಿದ ಪಠ್ಯ : ಡಾ.ದುಶಾನ್ ಡೀಕ್
ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.